ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯಿಂದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರ

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯು ಪರಿಚಯವಿರುವ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ನಗರದ ಜಾರಿಪಟ್ಕ ಪ್ರದೇಶದ ನಿವಾಸಿ ಭರತ್ ಗೋಸ್ವಾಮಿ (33) ಕೊಲೆ ಪ್ರಕರಣದಲ್ಲಿ 2014ರಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಇತ್ತೀಚೆಗಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯಿಂದ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರ
ಜೈಲುImage Credit source: Harvard Gazette
Follow us
ನಯನಾ ರಾಜೀವ್
|

Updated on: Jan 29, 2024 | 9:29 AM

ಪೆರೋಲ್​ ಮೇಲೆ ಹೊರ ಬಂದಿದ್ದ ಕೊಲೆ ಆರೋಪಿಯು ಪರಿಚಯವಿರುವ ಮಹಿಳೆ ಹಾಗೂ ಆಕೆಯ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ. ನಗರದ ಜಾರಿಪಟ್ಕ ಪ್ರದೇಶದ ನಿವಾಸಿ ಭರತ್ ಗೋಸ್ವಾಮಿ (33) ಕೊಲೆ ಪ್ರಕರಣದಲ್ಲಿ 2014ರಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಇತ್ತೀಚೆಗಷ್ಟೇ ಪೆರೋಲ್ ಮೇಲೆ ಹೊರಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಸ್ವಾಮಿ ಜನವರಿ 25 ರಂದು ತನಗೆ ಪರಿಚಯವಿರುವ 43 ವರ್ಷದ ಮಹಿಳೆಯ ಮನೆಗೆ ಹೋಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ 14 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಈ ವಿಚಾರ ಬಹಿರಂಗಗೊಂಡರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಎಫ್‌ಐಆರ್ ಉಲ್ಲೇಖಿಸಿ ಅಧಿಕಾರಿ ತಿಳಿಸಿದ್ದಾರೆ.

ಮಹಿಳೆಯ ದೂರಿನ ಮೇರೆಗೆ ಪೊಲೀಸರು ಗೋಸ್ವಾಮಿಯನ್ನು ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಅತ್ಯಾಚಾರಕ್ಕಾಗಿ ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಹಾವೇರಿ: ಬೇರೊಬ್ಬನೊಂದಿಗೆ ಸಂಪರ್ಕದಲ್ಲಿದ್ದಾಳೆ ಎಂದು ಪ್ರೀತಿಸಿದ ಯುವತಿಗೆ ಚಾಕು ಇರಿದ ಪ್ರಿಯತಮ

ಮೂರನೇ ಮಹಡಿಯಿಂದ ಪತ್ನಿಯನ್ನು ತಳ್ಳಿ ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ ಪತಿ ಪತ್ನಿ ನಡುವೆ ಜಗಳ ನಡೆದಿದ್ದು, ಅದು ತಾರಕಕ್ಕೇರಿ ಕೋಪದಿಂದ ಪತಿಯೊಬ್ಬ ಪತ್ನಿಯನ್ನು 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. ಬಳಿಕ ಮಹಿಳೆ ಸಾವನ್ನಪ್ಪಿದ್ದು, ಆರೋಪಿ ವಿಕಾಸ್​ ಕುಮಾರ್​ನನ್ನು ಪೊಲೀಸರು ಬಂಧಿಸಿದ್ದಾರೆ, ಪೊಲೀಸರ ಪ್ರಕಾರ ಗೋವಿಂದಪುರಂ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.

ಪಾರ್ಕಿಂಗ್ ಗುತ್ತಿಗೆದಾರರಾದ ಕುಮಾರ್ ಅವರು ಮದ್ಯದ ಅಮಲಿನಲ್ಲಿ ಮನೆಗೆ ಬಂದಿದ್ದ ಮತ್ತು 30 ರ ಹರೆಯದ ಅವರ ಪತ್ನಿ ಜತೆಗೆ ತೀವ್ರ ಜಗಳವಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಆಕೆಯನ್ನು ಮೂರನೇ ಮಹಡಿಯಿಂದ ಎಸೆದ ನಂತರ, ಆತನೇ ಪತ್ನಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದನು, ಅಲ್ಲಿ ವೈದ್ಯರು ಆಕೆ ಸತ್ತಿದ್ದಾಳೆ ಎಂದು ಹೇಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ