2022ರಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಆ್ಯಸಿಡ್ ದಾಳಿ: ದೇಶದಲ್ಲಿ ಅಗ್ರಸ್ಥಾನ

2022ರಲ್ಲಿ ದೇಶದಲ್ಲಿ ಆಸಿಡ್ ದಾಳಿ ನಡೆದ ಪ್ರಕರಣಗಳಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ ಎಂದು ಎನ್​ಸಿಆರ್​ಬಿ ಡೇಟಾ ತಿಳಿಸಿದೆ. ಎನ್‌ಸಿಆರ್‌ಬಿ ಡೇಟಾದಲ್ಲಿ ಪಟ್ಟಿ ಮಾಡಲಾದ 19 ಮೆಟ್ರೋಪಾಲಿಟನ್ ನಗರಗಳ ಪೈಕಿ, ಕಳೆದ ವರ್ಷ ಎಂಟು ಮಹಿಳೆಯರು ಆಸಿಡ್ ದಾಳಿಗೆ ಒಳಗಾಗುವುದರೊಂದಿಗೆ ಬೆಂಗಳೂರು ಒಟ್ಟಾರೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

2022ರಲ್ಲಿ ಬೆಂಗಳೂರಿನಲ್ಲಿ ಅತೀ ಹೆಚ್ಚು ಆ್ಯಸಿಡ್ ದಾಳಿ: ದೇಶದಲ್ಲಿ ಅಗ್ರಸ್ಥಾನ
2022ರಲ್ಲಿ ಆಸಿಡ್ ದಾಳಿ ನಡೆದ ಪ್ರಕರಣಗಳಲ್ಲಿ ಬೆಂಗಳೂರಿಗೆ ಅಗ್ರಸ್ಥಾನ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Rakesh Nayak Manchi

Updated on: Dec 10, 2023 | 2:48 PM

ಬೆಂಗಳೂರು, ಡಿ.10: ದೇಶದಲ್ಲಿ ಮಹಿಳೆಯರ ಮೇಲೆ ನಡೆದ ಆಸಿಡ್ ದಾಳಿ (Acid Attack) ಪ್ರಕರಣಗಳಲ್ಲಿ ಅತಿ ಹೆಚ್ಚು ದಾಳಿ ನಡೆದಿರುವುದು ಬೆಂಗಳೂರಿನಲ್ಲಿ (Bengaluru) ಎಂಬ ಮಾಹಿತಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿದುಬಂದಿದೆ.

ಅಂಕಿಅಂಶಗಳ ಪ್ರಕಾರ, ಎನ್‌ಸಿಆರ್‌ಬಿ ಡೇಟಾದಲ್ಲಿ ಪಟ್ಟಿ ಮಾಡಲಾದ 19 ಮೆಟ್ರೋಪಾಲಿಟನ್ ನಗರಗಳ ಪೈಕಿ, ಕಳೆದ ವರ್ಷ ಎಂಟು ಮಹಿಳೆಯರು ಆಸಿಡ್ ದಾಳಿಗೆ ಒಳಗಾಗುವುದರೊಂದಿಗೆ ಬೆಂಗಳೂರು ಒಟ್ಟಾರೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

2022 ರಲ್ಲಿ ಏಳು ಮಹಿಳೆಯರು ಆಸಿಡ್ ದಾಳಿಗೆ ಬಲಿಯಾದ ದೆಹಲಿ ಎರಡನೇ ಸ್ಥಾನದಲ್ಲಿದೆ ಮತ್ತು ಐದು ಪ್ರಕರಣಗಳು ದಾಖಲಾಗಿರುವ ಅಹಮದಾಬಾದ್ ಮೂರನೇ ಸ್ಥಾನದಲ್ಲಿ ಇದೆ ಎಂದು ಅಂಕಿಅಂಶಗಳು ತಿಳಿಸಿವೆ.

ಎನ್‌ಸಿಆರ್‌ಬಿ ದತ್ತಾಂಶದ ವಿಶ್ಲೇಷಣೆಯು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 7 ಆಸಿಡ್ ದಾಳಿ ಯತ್ನ ಪ್ರಕರಣಗಳನ್ನು ವರದಿ ಮಾಡಿದೆ ಮತ್ತು ಬೆಂಗಳೂರಿನಲ್ಲಿ ಕಳೆದ ವರ್ಷ ಅಂತಹ ಮೂರು ಪ್ರಕರಣಗಳು ದಾಖಲಾಗಿವೆ ಎಂದು ತೋರಿಸಿದೆ.

ಇದನ್ನೂ ಓದಿ: ನಾಯಿ ಬೊಗಳಿದ ವಿಚಾರಕ್ಕಾಗಿ ದಂಪತಿ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆಯವರು, ಏನಿದರ ಒಳಸುಳಿ?

ಏತನ್ಮಧ್ಯೆ, ಹೈದರಾಬಾದ್ ಮತ್ತು ಅಹಮದಾಬಾದ್‌ನಂತಹ ಮೆಟ್ರೋಪಾಲಿಟನ್ ನಗರಗಳು 2022 ರಲ್ಲಿ ಎರಡು ಆಸಿಡ್ ದಾಳಿ ಯತ್ನ ಪ್ರಕರಣಗಳನ್ನು ದಾಖಲಿಸಿವೆ. ಕಳೆದ ವರ್ಷ ಕೆಲಸಕ್ಕೆ ಹೋಗುತ್ತಿದ್ದ 24 ವರ್ಷದ ಎಂ.ಕಾಂ ಪದವೀಧರ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿತ್ತು. ಇದು ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು.

ಪೊಲೀಸರ ಪ್ರಕಾರ, ಆರೋಪಿಯು ಹಲವು ವರ್ಷಗಳಿಂದ ಮಹಿಳೆಯನ್ನು ಹಿಂಬಾಲಿಸುತ್ತಿದ್ದ. ಮದುವೆಗೆಂದು ಆಕೆಯನ್ನು ಪೀಡಿಸುತ್ತಿದ್ದನು. ಆದರೆ ಆತನ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಕ್ಕೆ ಆಕೆಯ ಮೇಲೆ ಆ್ಯಸಿಡ್ ಎರಚಿದ್ದನು. ಈ ವ್ಯಕ್ತಿಯನ್ನು ಮೇ ತಿಂಗಳಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ಸ್ವಾಮಿ ವೇಷದಲ್ಲಿದ್ದಾಗ ಬಂಧಿಸಲಾಗಿತ್ತು.

ಜೂನ್ 2023 ರಲ್ಲಿ, ಸಂತ್ರಸ್ತ ಮಹಿಳೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಅವರ ಸೆಕ್ರೆಟರಿಯೇಟ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಯಿತು. ಇದೇ ರೀತಿಯ ಮತ್ತೊಂದು ಪ್ರಕರಣವು ಜೂನ್ 10, 2022 ರಂದು ವರದಿಯಾಗಿದೆ. ಇದರಲ್ಲಿ ಒಬ್ಬ ವ್ಯಕ್ತಿ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಸ್ನೇಹಿತೆಯ ಮುಖದ ಮೇಲೆ ಆಸಿಡ್ ಎರಚಿದ್ದನು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ