ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ

ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವಂತ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಸದ್ಯ ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ
ಹೊತ್ತಿ ಉರಿದ ಕಾರು
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 26, 2023 | 4:44 PM

ನೆಲಮಂಗಲ, ಡಿಸೆಂಬರ್​ 26: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ (fire) ಹೊತ್ತಿಕೊಂಡ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿರುವಂತ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದ ಬಳಿ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಘಟನೆಯಿಂದ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್​​ ಉಂಟಾಗಿತ್ತು. ಸದ್ಯ ನೆಲಮಂಗಲ ಸಂಚಾರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಟೋವ್ ಸ್ಪೋಟಗೊಂಡು ಪಕ್ಕದಲ್ಲೇ ನಿಂತಿದ್ದ ಲಾರಿಗೆ ಬೆಂಕಿ: ಚಾಲಕನಿಗೆ ಗಾಯ

ವಿಜಯಪುರ: ಸ್ಟೋವ್ ಸ್ಪೋಟಗೊಂಡು ಪಕ್ಕದಲ್ಲೇ ನಿಂತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡಿರುವಂತಹ ಘಟನೆ ನಿಡಗುಂದಿ ತಾಲೂಕಿನ ಉಣ್ಣಿಬಾವಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕನ ಕೈ, ಕಾಲು ಮತ್ತಿತರ ಭಾಗಕ್ಕೆ ಗಾಯಗಳಾಗಿವೆ. ತಮಿಳುನಾಡು ಮೂಲದ ಲಾರಿ ನಿಲ್ಲಿಸಿ ಚಾಲಕ ಅಡುಗೆ ಮಾಡುತ್ತಿರುವಾಗ ಸ್ಟೋವ್ ಸ್ಪೋಟಗೊಂಡ ಬೆಂಕಿ ಹೊತ್ತಿಕೊಂಡಿದೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಯುವಕನನ್ನು ಬರ್ಬರವಾಗಿ ಕೊಲೆಗೈದು, ಶವ ಸುಟ್ಟ ಆರೋಪಿಗಳ ಬಂಧನ

ಕೇರಳದಿಂದ ಸೊಲ್ಲಾಪುರಕ್ಕೆ ತಮಿಳುನಾಡು ಮೂಲದ ಲಾರಿ ಹೊರಟಿತ್ತು. ತಡವಾಗಿ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿ

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾರೆಹಳ್ಳಿಯಲ್ಲಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ನಡೆದಿದೆ. ನಿನ್ನೆ ರಾತ್ರಿ ದೇಗುಲಕ್ಕೆ ಬೆಂಕಿ‌ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅರ್ಚಕರು ಪೂಜೆಗೆ ತೆರಳಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಬೆಂಕಿಯಿಟ್ಟ ದುಷ್ಕರ್ಮಿಗಳ ಬಂಧನಕ್ಕೆ ಭಕ್ತರು ಆಗ್ರಹಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ದಂಪತಿ ಆತ್ಯಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ದಂಪತಿ ಆತ್ಯಹತ್ಯೆ ಮಾಡಿಕೊಂಡಿರುವಂತಹ ಘಟನೆ  ನಗರದ ಅಡ್ಲಿಮನೆ ರಸ್ತೆಯ ಚಿಕ್ಕಟ್ಟೆ ಕೆರೆಯಲ್ಲಿ ನಡೆದಿದೆ. ಪತಿ ರಿಜ್ವಾನ್​​(31), ಪತ್ನಿ ಸಮ್ರಿನ್​​​ ಭಾನು(25) ಮೃತರಯ. ಮೃತ ದಂಪತಿ ಹಾಸನದ ಇಲಾಹಿ ನಗರದ ನಿವಾಸಿಗಳು.

ಇದನ್ನೂ ಓದಿ: ತುಮಕೂರು: ಜಮೀನು ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ನಿನ್ನೆ ಸಂಜೆ ಪರಸ್ಪರ ಜಗಳವಾಡಿದ್ದ ಸಮ್ರಿನ್​​​, ರಿಜ್ವಾನ್ ದಂಪತಿ ಇಂದು ಬೆಳಗ್ಗೆ ಚಿಕ್ಕಟ್ಟೆ ಕೆರೆಗೆ ಹಾರಿ ದಂಪತಿ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ದಂಪತಿ ಶವ ಹೊರತೆಗೆದಿದ್ದಾರೆ. ಪೆನ್ಷನ್​​​​ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ