AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಮನೆಯವನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಈಗ ಬಾಲಕಿ 8 ತಿಂಗಳು ಗರ್ಭಿಣಿ

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪಕ್ಕದ ಮನೆಯವನಿಂದಲೇ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ. ಬರ್ತ್​ಡೇ ದಿನವೇ ಬಾಲಕಿ ಮೇಲೆ ಅತ್ಯಾಚಾರ ಅರೋಪ ಕೇಳಿಬಂದಿದ್ದು, ಆರೋಪಿ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲು ಮಾಡಲಾಗಿದೆ.

ಪಕ್ಕದ ಮನೆಯವನಿಂದಲೇ 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಈಗ ಬಾಲಕಿ 8 ತಿಂಗಳು ಗರ್ಭಿಣಿ
ಪ್ರಾತಿನಿಧಿಕ ಚಿತ್ರ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Dec 06, 2023 | 7:20 AM

Share

ನೆಲಮಂಗಲ, ಡಿಸೆಂಬರ್​​​ 06: ಬರ್ತ್​ಡೇ ದಿನವೇ 8ನೇ ತರಗತಿ ವಿದ್ಯಾರ್ಥಿನಿ (student) ಮೇಲೆ ಅತ್ಯಾಚಾರವೆಸಗಿದ್ದು, 8 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ. 13 ವರ್ಷದ ಬಾಲಕಿ ಮೇಲೆ ಪಕ್ಕದ ಮನೆಯ 43 ವರ್ಷದ ವ್ಯಕ್ತಿಯಿಂದ ಅತ್ಯಾಚಾರವೆಸಗಿದ್ದ ಆರೋಪ ಮಾಡಲಾಗಿದೆ. ಬಾಲಕಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ತೆರಳಿದ್ದಾಗ ವಿಷಯ ಬೆಳಕಿಗೆ ಬಂದಿದೆ. ಪ್ರಕರಣದ ಆರೋಪಿಗೆ ಮದುವೆಯಾಗಿ 2 ವರ್ಷದ ಮಗಳಿದ್ದಾಳೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲು ಮಾಡಲಾಗಿದೆ.

10ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋಚಾಲಕನ ಬರ್ಬರ ಹತ್ಯೆ

ಬೆಂಗಳೂರು: 10ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋಚಾಲಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಟಿಂಬರ್​ಲೇಔಟ್​ನಲ್ಲಿ ನಿನ್ನೆ ರಾತ್ರಿ 9.30ರ ಸುಮಾರಿಗೆ ನಡೆದಿದೆ.

ಇದನ್ನೂ ಓದಿ: ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್​ಗೆ ಚಾಕು ಇರಿತ: ಕಾಂಗ್ರೆಸ್ ಎಂಎಲ್‌ಸಿ ಸೇರಿ ಐವರ ವಿರುದ್ಧ ಎಫ್​ಐಆರ್

ಅರುಣ್(24) ಹತ್ಯೆಯಾದ ಆಟೋಚಾಲಕ. ಕೊಲೆಯಾದ ಅರುಣ್​ಗೆ ಮುಂದಿನ ತಿಂಗಳು ಮದುವೆ ಫಿಕ್ಸ್ ಆಗಿತ್ತು. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ ಪತಿಯಿಂದ ಪತ್ನಿ ಕೊಲೆ

ಬಳ್ಳಾರಿ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವಂತಹ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬಲಕುಂದಿ ಗ್ರಾಮದಲ್ಲಿ ನಿನ್ನೆ ನಡೆದಿದೆ. ರಸೂಲ್ ಸಾಬ್ ಎಂಬ ವ್ಯಕ್ತಿಯು ತನಗೆ ಎರಡು ಕಿಡ್ನಿ ವೈಫಲ್ಯ ಆಗಿದೆ ನನ್ನ ಹೆಂಡತಿ ಮೈಬುನಾ ಬಿ. (35) ನನಗೆ ಸರಿಯಾಗಿ ಆರೈಕೆ ಮಾಡುತ್ತಿಲ್ಲ, ನಾನು ದುಡಿಯುವಾಗ ಎಲ್ಲಾ ಚೆನ್ನಾಗಿತ್ತು.

ಇದನ್ನೂ ಓದಿ: ಗಂಡ-ಹೆಂಡತಿ ಜಗಳದಲ್ಲಿ RDX ಸ್ಫೋಟಿಸುವುದಾಗಿ ಬೆದರಿಕೆ ಮೆಸೇಜ್ ರವಾನೆ ಮಾಡಿದ್ದು ಯಾರು ಗೊತ್ತಾ?

ಈಗ ನಾನು ಮೂಲೆ ಗುಂಪ್ಪಾದ್ದು, ನನ್ನ ಆರೈಕೆ ಮಾಡುತ್ತಿಲ್ಲ ಅಂತಾ ಕೋಪು ಗೊಂಡು ಆಕೆ ಮಲಗಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಬಳಿಕ ತನ್ನ ಎರಡು ಮಕ್ಕಳನ್ನ ಕರೆದುಕೊಂಡು ತೆಕ್ಕಲಕೋಟೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ.

ಶಾರ್ಟ್​ಸರ್ಕ್ಯೂಟ್​ನಿಂದ ಗ್ಯಾರೇಜ್​ನಲ್ಲಿ ಬೆಂಕಿ, ವಸ್ತುಗಳು ಭಸ್ಮ

ಧಾರವಾಡ: ಶಾರ್ಟ್​ಸರ್ಕ್ಯೂಟ್​ನಿಂದ ಗ್ಯಾರೇಜ್​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಸ್ತುಗಳು ಸುಟ್ಟು ಭಸ್ಮವಾಗಿರುವಂತಹ ಘಟನೆ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್​ನಲ್ಲಿ ನಡೆದಿದೆ. ದಾವಲಸಾಬ್ ದೊಡ್ಡಮನಿ ಎಂಬುವರಿಗೆ ಸೇರಿದ ಗ್ಯಾರೇಜ್ ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ. ಸೂಕ್ತ ಪರಿಹಾರ ನೀಡುವಂತೆ ದಾವಲಸಾಬ್ ದೊಡ್ಡಮನಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​