AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ

ಆರೋಪಿಗಳಿಂದ 2 ಕೆಜಿ ಗಾಂಜಾ, ಎರಡು ಬೈಕ್ ಹಾಗೂ ಚಾಕುಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆ ಪ್ರದೇಶದ ಮನೆ ಮೇಲೆ ದಾಳಿ ನಡೆಸಿದಾಗ ನಿಷೇಧಿತ ಡ್ರಗ್ಸ್ ಪತ್ತೆಯಾಗಿವೆ.

ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ
ನೆಲಮಂಗಲ: ಹೊಸ ವರ್ಷಾಚರಣೆಗೆ ಡ್ರಗ್ಸ್ ಪೂರೈಸಲು ಮುಂದಾಗಿದ್ದ ನಾಲ್ವರು ಪೊಲೀಸ್ ಬಲೆಗೆ
TV9 Web
| Edited By: |

Updated on: Dec 28, 2023 | 10:29 AM

Share

ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷಾಚರಣೆ (New Year) ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿ ನಾಲ್ವರು ಡ್ರಗ್ಸ್ ಪೆಡ್ಲರ್​ಗಳನ್ನು (Drug Peddlers) ಬಂಧಿಸಿದ್ದಾರೆ. ಆರೋಪಿಗಳು ಡಿ.31ರಂದು ವಿವಿಧೆಡೆ ಡ್ರಗ್ಸ್ ಸರಬರಾಜು ಮಾಡಲು ಅಪಾರ ಪ್ರಮಾಣದ ಆರ್ಡರ್ ಪಡೆದಿದ್ದರು.

ಬಂಧಿತರನ್ನು ಗಂಗೊಂಡನಹಳ್ಳಿ ಅನಿಲ್ (21), ಅಂದ್ರಹಳ್ಳಿ ಕಾರ್ತಿಕ್ (18), ನವೀನ್ (20) ಮತ್ತು ದೊಂಬರಹಳ್ಳಿ ಮಂಜುನಾಥ್ (19) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 2 ಕೆಜಿ ಗಾಂಜಾ, ಎರಡು ಬೈಕ್ ಹಾಗೂ ಚಾಕುಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆ ಪ್ರದೇಶದ ಮನೆ ಮೇಲೆ ದಾಳಿ ನಡೆಸಿದಾಗ ನಿಷೇಧಿತ ಡ್ರಗ್ಸ್ ಪತ್ತೆಯಾಗಿವೆ.

ನಾಲ್ವರು ಆರೋಪಿಗಳು ಹೊಸ ವರ್ಷದ ಮುನ್ನಾದಿನದಂದು ಗ್ರಾಹಕರಿಗೆ ಡ್ರಗ್ಸ್ ಸರಬರಾಜು ಮಾಡಲು ಭಾರಿ ಮೊತ್ತದ ಆರ್ಡರ್ ತೆಗೆದುಕೊಂಡಿರುವುದು ಆರಂಭಿಕ ವಿಚಾರಣೆಯಲ್ಲಿ ಪೊಲೀಸರಿಗೆ ಗೊತ್ತಾಗಿದೆ. ಆರೋಪಿಗಳು ಹೋಟೆಲ್‌ಗಳು, ಢಾಬಾಗಳು, ಲಾಡ್ಜ್‌ಗಳು ಮತ್ತು ಟ್ರಕ್ ಪಾರ್ಕಿಂಗ್ ಪ್ರದೇಶಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ಬೈಕ್ ವ್ಹೀಲಿಂಗ್, ದರೋಡೆ ಮುಂತಾದ ಹಲವು ಪ್ರಕರಣಗಳಲ್ಲಿ ಶಾಮೀಲಾಗಿದ್ದರು. ಆರೋಪಿಗಳ ಜಾಲ ಮತ್ತು ಮಾದಕವಸ್ತು ಸಂಗ್ರಹದ ಮೂಲವನ್ನು ಗುರುತಿಸಲು ಪೊಲೀಸರು ಆರೋಪಿಗಳ ಮೊಬೈಲ್‌ಗಳನ್ನು ಪರಿಶೀಲಿಸುತ್ತಿದ್ದಾರೆ. ಶೀಘ್ರ ಹಣ ಗಳಿಸಲು ಹಾಗೂ ಐಷಾರಾಮಿ ಜೀವನ ನಡೆಸಲು ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ನಾಲ್ವರನ್ನು ಮದುವೆಯಾಗಿ ವಂಚಿಸಿದ ಮಹಿಳೆ, ಪ್ರಕರಣ ದಾಖಲು

ಈ ತಿಂಗಳ ಆರಂಭದಲ್ಲಿ ಬೆಂಗಳೂರು ಪೊಲೀಸರು ವ್ಯಾಪಾರಿ ವೀಸಾದ ಮೇಲೆ ದೇಶಕ್ಕೆ ಬಂದಿದ್ದ ಆಫ್ರಿಕನ್ ಪ್ರಜೆಯೊಬ್ಬರಿಂದ ಭಾರಿ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ