ನೆಲಮಂಗಲ: ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಅತ್ತೆ ಸಾವು

ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅತ್ತೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸಂಬಂಧಿಕರ ಮನೆಯಿಂದ ಹಿಂದಿರುಗುವಾಗ ಅಪಘಡ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

ನೆಲಮಂಗಲ: ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಅತ್ತೆ ಸಾವು
ಸಾಂದರ್ಭಿಕ ಚಿತ್ರ
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 26, 2024 | 8:27 PM

ನೆಲಮಂಗಲ, ಫೆಬ್ರವರಿ 26: ಅತ್ತೆ, ಸೊಸೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ (collided) ಹೊಡೆದ ಪರಿಣಾಮ ಅತ್ತೆ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ. ನೆಲಮಂಗಲ ಟೌನ್ ನಿವಾಸಿ 64 ವರ್ಷದ ಬೀರಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸೊಸೆ ಮಮತಾಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಸಂಬಂಧಿಕರ ಮನೆಯಿಂದ ಹಿಂದಿರುಗುವಾಗ ಅಪಘಡ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಒಂದೇ ಸ್ಥಳದಲ್ಲಿ ಎರಡು ಬೈಕ್​ ಕದ್ದ ಖದೀಮರು

ನಗರದ ರೆಸ್ಟ್​​ ಹೌಸ್​​ ರಸ್ತೆ ಆರ್ಮಿ ಕಚೇರಿ ಮುಂಭಾಗ 2 ಬೈಕ್​​ಗಳನ್ನು​ ಖದೀಮರು ಕದ್ದಿರುವಂತಹ ಘಟನೆ ನಡೆದಿದೆ. ಫೆ.17ರ ಸಂಜೆ ನಿಲ್ಲಿಸಿದ್ದ 2 ದ್ವಿಚಕ್ರ ವಾಹನ ಕಳುವಾಗಿದೆ. ಅನುಪಮ್​​​ ಮತ್ತು ಆತನ ಸ್ನೇಹಿತನ ಟಿವಿಎಸ್​​​ ಜ್ಯೂಪಿಟರ್​​ 125, ಡಿಯೋ ದ್ವಿಚಕ್ರ ವಾಹನ ಕಳ್ಳತನವಾಗಿದೆ. ಬೈಕ್​ ಕಳ್ಳತನ ಮಾಡಿದ ಕಳ್ಳರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಕಬ್ಬನ್​ ಪಾರ್ಕ್​​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಾವು ಕಡಿದು ಒಂಭತ್ತು ವರ್ಷದ ಬಾಲಕ ಸಾವು

ಕೊಡಗು: ಹಾವು ಕಡಿದು ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ಕೊಡಗು-ಮೈಸೂರು ಗಡಿ ಗ್ರಾಮ ಕೊಪ್ಪದಲ್ಲಿ ಸಂಭವಿಸಿದೆ. ಮೂಲತಃ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದ ಪೊನ್ನಪ್ಪ-ಪವಿತ್ರ ದಂಪತಿಯ ಪುತ್ರ ಒಂಭತ್ತು ವರ್ಷದ ದೇವಯ್ಯ ಸಾವನ್ನಪ್ಪಿದ ಬಾಲಕ. ಪವಿತ್ರ ತನ್ನಿಬ್ಬರು ಮಕ್ಕಳ ಜೊತೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ಹಳೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾರೆ.

ಇದನ್ನೂ ಓದಿ: ಅಕ್ರಮವಾಗಿ ಸಾಗಿಸ್ತಿದ್ದ 63.5 ಲಕ್ಷ ರೂ. ಮೌಲ್ಯದ ಡೈಮಂಡ್​, ವಿದೇಶಿ ಕರೆನ್ಸಿ ಜಪ್ತಿ, ಓರ್ವನ ಬಂಧನ

ಪವಿತ್ರ ಅವರ ಮೊದಲ ಪುತ್ರ 9 ವರ್ಷದ ಬಾಲಕ ದೇವಯ್ಯ ನಿನ್ನೆ ಮಧ್ಯ ರಾತ್ರಿ ಸುಮಾರು 1 ಗಂಟೆ ವೇಳೆಗೆ ತಾಯಿಯನ್ನ ಕರೆದು ಅಳುತ್ತಾ ಕೈ ತುಂಬಾ ಉರಿಯುತ್ತಿದೆ ಅಮ್ಮಾ ಅಂತದಿದ್ದಾನೆ. ತಾಯಿ ಮೊಬೈಲ್ ಟಾರ್ಚ್​ ಬಿಟ್ಟು ನೋಡಿದಾಗ ಬೆಡ್​ ಮೇಲಿನಿಂದ ಒಂದು ಹಾವು ಇಳಿದು ಓಡಿದೆ. ತಕ್ಷಣವೇ ಕೈ ಪರಿಶೀಲಿಸಿದಾಗ ಮಣಿಗಂಟಿನಲ್ಲಿ ಹಾವು ಕಚ್ಚದ ಗುರುತು ಕಂಡಿದೆ. ತಕ್ಷಣವೇ ತಾಯಿ ಮನೆಯ ಮಾಲೀಕರಿಗೆ ವಿಷಯ ತಿಳಿಸಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಆದರೆ ಮಾರ್ಗ ಮಧ್ಯದಲ್ಲೇ ಬಾಲಕ ದೇವಯ್ಯ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ: ತುಮಕೂರಿನಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 7 ಮಹಿಳೆಯರ ಪೈಕಿ ಮೂವರು ಸಾವು

ಬಹುಷಃ ಹಾವು ಕಚ್ಚಿ ಬಹಳ ಹೊತ್ತಾದ ಮೇಲೆ ಬಾಲಕನಿಗೆ ಅರಿವಾಗಿರಬೇಕೇನೋ. ವಿಷ ದೇಹಸೇರಿ ಬಾಲಕನ ಜೀವ ತೆಗೆದಿದೆ. ವಿಚಿತ್ರ ಅಂದ್ರೆ ಈ ಮನೆಯ ಸುತ್ತ ಹಲವು ದಿನಗಳಿಂದ ಹಾವೊಂದು ಓಡಾಡುವುದನ್ನು ಸ್ಥಳೀಯರು ಮತ್ತು ಸ್ವತಃ ಈ ಮನೆಯವರೂ ಗಮನಿಸಿದ್ದಾರೆ. ಕಲೆದ ಶುಕ್ರವಾರ ಬಾಲಕನ ಸೋದರ ಮಾವ ಇಲ್ಲಿಗೆ ಆಗಮಿಸಿದ್ದಾಗ ಹಾವನ್ನು ನೋಡಿ ಅದನ್ನು ಕೊಲ್ಲುವುದು ಬೇಡ ಎಂದು ಬಿಟ್ಟಿದ್ದರಂತೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ