AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು

ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಾಲೋಬ್ರಿಕ್ಸ್​ನಿಂದ ಪೊಲೀಸರ ಮೇಲೆ ದರೋಡೆ ಆರೋಪಿ ಯೋಗಾನಂದ ಹಲ್ಲೆ ನಡೆಸಿದ್ದ.

ನೆಲಮಂಗಲ: ಸಿಮೆಂಟ್ ಇಟ್ಟಿಗೆಯಿಂದ ಹೊಡೆದ ದರೋಡೆಕೋರನ ಕಾಲಿಗೆ ಪೊಲೀಸರ ಗುಂಡೇಟು
ನೆಲಮಂಗಲದ ಪೊಲೀಸ್ ಇನ್​ಸ್ಪೆಕ್ಟರ್ ಶಶಿಧರ್ ಮತ್ತು ಗುಂಡೇಟು ತಿಂದ ಯೋಗಾನಂದ
TV9 Web
| Edited By: |

Updated on:Nov 23, 2022 | 10:26 AM

Share

ಬೆಂಗಳೂರು: ಪೊಲೀಸರ ಮೇಲೆ ಸಿಮೆಂಟ್ ಇಟ್ಟಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ನೆಲಮಂಗಲದ ದರೋಡೆಕೋರ ಯೋಗಾನಂದ ಅಲಿಯಾಸ್ ನೈಟ್​ಶಿಫ್ಟ್​ ಯೋಗಿ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರು ವೇಳೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಗಾಳಿಯಲ್ಲಿ ಗುಂಡುಹಾರಿಸಿ ಪೊಲೀಸರು ಎಚ್ಚರಿಸಿದರು. ರೌಡಿ ಹೆದರದಿದ್ದಾಗ ಕಾಲಿಗೆ ಗುಂಡು ಹಾರಿಸಿದರು ಎಂದು ಮೂಲಗಳು ಹೇಳಿವೆ. ನೆಲಮಂಗಲದ ದಾನೋಜಿಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ.

ಈತ ಕುಖ್ಯಾತ ದರೋಡೆಕೋರನಾಗಿದ್ದ. ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಾಲೋಬ್ರಿಕ್ಸ್​ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ. ಕಾನ್ಸ್‌ಟೆಬಲ್ ಹನುಮಂತ ಹಿಪ್ಪರಗಿ ಅವರ ಕೈಗಳಿಗೆ ಗಾಯವಾಯಿತು. ಈ ಸಂದರ್ಭದಲ್ಲಿ ನೆಲಮಂಗಲ ಟೌನ್ ಪೊಲೀಸ್ ಇನ್​ಸ್ಪೆಕ್ಟರ್ ಶಶಿಧರ್‌ರಿಂದ ಗುಂಡು ಹಾರಿಸಿದರು. ಆರೋಪಿಯ ಮೇಲೆ 18 ಪ್ರಕರಣಗಳಿವೆ.

ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ 86 ರೌಡಿಶೀಟರ್​​​ಗಳಿಗೆ ಸಿಸಿಬಿ ಪೊಲೀಸರು ಶಾಕ್ ಕೊಟ್ಟಿದ್ದಾರೆ. ರೌಡಿಸಂನಲ್ಲಿ ಆ್ಯಕ್ಟೀವ್​ ಆಗಿರುವ ​​​​​ರೌಡಿಶೀಟರ್​​​ ಮನೆಗಳ ಮೇಲೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಎಲ್ಲಾ ವಿಭಾಗಗಳ ಠಾಣಾ ವ್ಯಾಪ್ತಿಗಳಲ್ಲಿ ಐವರು ಎಸಿಪಿ, 20 ಇನ್ಸ್​​ಪೆಕ್ಟರ್​​ಗಳ ನೇತೃತ್ವದಲ್ಲಿ ನಗರದ ಪ್ರಮುಖ ರೌಡಿಶೀಟರ್​​ಗಳ ಮನೆಗಳ ಮೇಲೆ ರೇಡ್ ನಡೆಸಿ ಸಿಸಿಬಿ ಪರಿಶೀಲನೆ ನಡೆಸಿದೆ.

ಸೈಕಲ್ ರವಿ, ವಿಲ್ಸನ್​ ಗಾರ್ಡನ್​ ನಾಗನ ಮನೆ ಮೇಲೂ ದಾಳಿ ನಡೆಸಿದ್ದು ಸಿಸಿಬಿ ದಾಳಿ ವೇಳೆ ಇಬ್ಬರು ರೌಡಿಗಳು ಮನೆಗಳಲ್ಲಿ ಇರಲಿಲ್ಲ. ರೇಡ್ ವೇಳೆ ರೌಡಿಶೀಟರ್​ಗಳಾದ ಕೋತಿರಾಮ, ಆರ್​.ಟಿ.ನಗರದ ವೆಂಕಟೇಶ್ ಸೇರಿ 26 ರೌಡಿಶೀಟರ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೆಂಗಳೂರು ರೌಡಿಶೀಟರ್​ಗಳಿಗೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Published On - 9:46 am, Wed, 23 November 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!