Jharkhand: 4 ದಿನದ ಹಸುಗೂಸನ್ನು ಬೂಟಿನ ಕಾಲಿನಿಂದ ಒದ್ದ ಪೊಲೀಸರು, ಮಗು ಸಾವು

ಜಾರ್ಖಂಡ್ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ  ಮಗುವನ್ನು ಕೊಂದಿರುವ ಆರೋಪ ಹೊರಿಸಲಾಗಿದೆ.

Jharkhand: 4 ದಿನದ ಹಸುಗೂಸನ್ನು ಬೂಟಿನ ಕಾಲಿನಿಂದ ಒದ್ದ ಪೊಲೀಸರು, ಮಗು ಸಾವು
ಮಗು
Follow us
ನಯನಾ ರಾಜೀವ್
|

Updated on: Mar 23, 2023 | 1:10 PM

ಜಾರ್ಖಂಡ್ ಪೊಲೀಸರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ  ಮಗುವನ್ನು ಕೊಂದಿರುವ ಆರೋಪ ಹೊರಿಸಲಾಗಿದೆ. ಪೊಲೀಸರು 4 ದಿನದ ಹಸುಗೂಸನ್ನು ಬೂಟಿನ ಕಾಲಿನಿಂದ ಒದ್ದ ಪರಿಣಾಮ ಮಗು ಮೃತಪಟ್ಟಿದೆ ಎಂದು ಪೋಷಕರು ಜಾರ್ಖಂಡ್ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಾಮೀನು ರಹಿತ ವಾರಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲು ಪೊಲೀಸರು  ಆರೋಪಿಗಳ ಮನೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ.

ಮೃತ ನವಜಾತ ಶಿಶುವಿನ ಅಜ್ಜ ಭೂಷಣ್ ಪಾಂಡೆ ಹಾಗೂ ಮತ್ತೋರ್ವ ಆರೋಪಿ ವಿರುದ್ಧ 4-5 ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು, ಹಾಗಾಗಿ ಪೊಲೀಸರು ಅವರನ್ನು ಬಂಧಿಸಲು ಮನೆಗೆ ತೆರಳಿದ್ದರು. ಪೊಲೀಸರ ಕಾಲಿಗೆ ಸಿಕ್ಕು ನವಜಾತ ಶಿಶು ಸಾವನ್ನಪ್ಪಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಶಿಶುವಿನ ತಂದೆ ಡಿಯೋರಿ ಪೊಲೀಸರ ವಿರುದ್ಧ ಲಿಖಿತ ದೂರು ನೀಡಿದ್ದಾರೆ. ನಾಲ್ಕು ದಿನದ ಮಗುವಿನ ಸಾವಿನ ಪ್ರಕರಣ ಜಾರ್ಖಂಡ್ ವಿಧಾನಸಭೆಯಲ್ಲೂ ಪ್ರತಿಧ್ವನಿಸಿದೆ. ಬಾಗೋದರ್ ಶಾಸಕ ವಿನೋದ್ ಸಿಂಗ್ ಅವರು ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ತನಿಖೆಯ ನಂತರ ಸರ್ಕಾರದಿಂದ ಕ್ರಮಕ್ಕೆ ಒತ್ತಾಯಿಸಿದರು.

ಮತ್ತಷ್ಟು ಓದಿ: ಬಿಎಂಟಿಸಿ ಬಸ್​ಗೆ ಬೆಂಕಿ ಬಿದ್ದು ಕಂಡಕ್ಟರ್ ಸಜೀವ ದಹನ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್, ಬೆಂಕಿ ಹೊತ್ತಿಕೊಳ್ಳುವ ಮುನ್ನ ಹಣ ವರ್ಗಾವಣೆ

ಘಟನೆಯ ನಂತರ ವಿರೋಧ ಪಕ್ಷ ಬಿಜೆಪಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿದೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ನವಜಾತ ಶಿಶುವನ್ನು ಪೊಲೀಸರು ತುಳಿದಿರುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. ಆರೋಪ ನಿಜವೆಂದು ಕಂಡುಬಂದರೆ ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಘಟನೆ ಕುರಿತು ಮಾಹಿತಿ ಪಡೆದು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ತನಿಖೆ ಆರಂಭಿಸಲಾಗಿದೆ. ಉಪವಿಭಾಗದ ಪೊಲೀಸ್ ಅಧಿಕಾರಿ ಮುಖೇಶ್ ಕುಮಾರ್ ಮಹತೋ ಮತ್ತು ಇನ್ಸ್ ಪೆಕ್ಟರ್ ಸಹದೇವ ಪ್ರಸಾದ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ನಡೆದಿದ್ದೇನು? ದೇವೋರಿ ಪೊಲೀಸ್ ಠಾಣೆಯ ಉಸ್ತುವಾರಿ ಸಂಗಮ್ ಪಾಠಕ್ ನೇತೃತ್ವದ ಪೊಲೀಸ್ ತಂಡವು ಭೂಷಣ್ ಪಾಂಡೆಯನ್ನು ಬಂಧಿಸಲು ಬುಧವಾರ ಮುಂಜಾನೆ ಅವರ ಮನೆಗೆ ಬಂದಿತ್ತು ಎಂದು ಹೇಳಿದರು. ಇಡೀ ಮನೆಯಲ್ಲಿ ಭೂಷಣ್ ಪಾಂಡೆಯ ಹುಡುಕಾಟ ನಡೆಯುತ್ತಿತ್ತು. ಪೊಲೀಸರನ್ನು ನೋಡಿದ ಸದಸ್ಯರೆಲ್ಲರೂ ಮನೆಯಿಂದ ಹೊರಬಂದರು. ಈ ವೇಳೆ ನಾಲ್ಕು ದಿನಗಳ ಹಿಂದೆ ಜನಿಸಿದ ನವಜಾತ ಶಿಶು ಮಾತ್ರ ಮನೆಯ ಕೊಠಡಿಯ ಹಾಸಿಗೆಯ ಮೇಲೆ ಮಲಗಿತ್ತು.

ಪೊಲೀಸರು ಹೋದ ತಕ್ಷಣ ಮನೆಯೊಳಗೆ ಬಂದು ನೋಡಿದರೆ ಮಗುವಿನ ದೇಹದಲ್ಲಿ ಯಾವುದೇ ಚಲನವಲನ ಇರಲಿಲ್ಲ, ಬಳಿಕ ಪೊಲೀಸ್ ಪೇದೆಯೊಬ್ಬರ ಕಾಲಿನ ಕೆಳಗೆ ಸಿಲುಕಿ ಮಗು ಸಾವನ್ನಪ್ಪಿರುವುದು ತಿಳಿದುಬಂದಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್