ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ

| Updated By: Rakesh Nayak Manchi

Updated on: Dec 16, 2023 | 6:52 AM

ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಹುಡುಕಾಟದಲ್ಲಿರುವ ಎನ್​ಐಎ, ಇದೀಗ 24 ಆರೋಪಿಗಳ ಹೆಸರುಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಐವರು ಆರೋಪಿಗಳು ಸೇರಿದ್ದಾರೆ. ಈ ಎಲ್ಲಾ ಆರೋಪಿಗಳ ಸುಳಿವು ಸಿಕ್ಕಲ್ಲಿ ತಿಳಿಸುವಂತೆ ಮನವಿ ಮಾಡಲಾಗಿದೆ.

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ
ವಾಂಟೆಡ್ ಆರೋಪಿಗಳ ಪಟ್ಟಿ ಬಿಡುಗಡೆ ಮಾಡಿದ ಎನ್​ಐಎ
Follow us on

ಬೆಂಗಳೂರು, ಡಿ.16: ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣದ ಐವರು ಆರೋಪಿಗಳು ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಪಟ್ಟಿಯನ್ನು ಎನ್​ಐಎ (NIA) ಬಿಡುಗಡೆ ಮಾಡಿದೆ. ಈ ಎಲ್ಲಾ ಆರೋಪಿಗಳು ನಿಷೇಧಿತ ಪಿಎಫ್ಐ ಪ್ರಕರಣಗಳು, ಕೊಲೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದವರಾಗಿದ್ದಾರೆ.

ಕೇರಳದ 11 ಆರೋಪಿಗಳು, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಮೂವರು, ಕರ್ನಾಟಕ ಹಾಗೂ ತಮಿಳುನಾಡಿನ ಐವರು ಆರೋಪಿಗಳ ಹೆಸರು ಪ್ರಕಟಿಸಲಾಗಿದೆ. ಆರೋಪಿಗಳ ಹೆಸರು, ಭಾವಚಿತ್ರ, ವಿಳಾಸ ಸಹಿತ ಮಾಹಿತಿ ಪ್ರಕಟಿಸಿ ಸುಳಿವು ಸಿಕ್ಕಲ್ಲಿ ಎನ್ಐಎಗೆ ವಾಟ್ಸ್​​ಆ್ಯಪ್ ಅಥವಾ ದೂರವಾಣಿ ಕರೆ ಮೂಲಕ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ‌ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಐಸಿಸ್​​ ಶಂಕಿತ ಉಗ್ರನ ಮನೆ ಮೇಲೆ ಮತ್ತೆ ಎನ್​ಐಎ ದಾಳಿ: ಯಾರು ಈ ಅಬ್ಬಾಸ್ ಅಲಿ?

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಬೆಳ್ಳಾರೆ ಮುಸ್ತಫಾ, ಮಸೂಧ್ ಅಗ್ನಾಡಿ, ಮೊಹಮ್ಮದ್ ಷರೀಫ್ ಕೊಡಾಜೆ, ಉಮ್ಮರ್ ಅಲಿಯಾಸ್ ಉಮರ್ ಫಾರೂಕ್, ಅಬೂಬ್ಬಕ್ಕರ್ ಸಿದ್ದಿಕ್ ಹೆಸರು ಪ್ರಕಟಿಸಲಾಗಿದೆ.

ಕುಂಭಕೋಣಂ ರಾಮಲಿಂಗಂ ಕೊಲೆ ಕೇಸ್​ನಲ್ಲಿ ಭಾಗಿಯಾಗಿದ್ದ ತಮಿಳುನಾಡಿನ ಐವರು ಹಾಗೂ ಪಾಲಕ್ಕಾಡ್ ಶ್ರೀನಿವಾಸ್ ಕೇಸ್​ನಲ್ಲಿ ಭಾಗಿಯಾಗಿದ್ದ ಕೇರಳದ ಅಬ್ದುಲ್ ವಹಾಬ್, ಅಬ್ದುಲ್ ರಷೀದ್‌, ಆಯೂಬ್ ಸೇರಿ ನಾಲ್ವರು ಆರೋಪಿಗಳ ಹೆಸರು ಪ್ರಕಟಿಸಲಾಗಿದೆ.

ನಿಷೇಧಿತ ಪಿಎಫ್ಐಗೆ ನೇಮಕ, ಒಳಸಂಚು, ಸರ್ಕಾರದ ವಿರುದ್ಧ ಪಿತೂರಿ, ದೇಶದ ಸಮಗ್ರತೆ, ಏಕತೆಗೆ ಧಕ್ಕೆ ತರಲು ಆರೋಪಿಗಳು ಯತ್ನಿಸಿದ ಆರೋಪ ಇವರ ಮೇಲಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳ ಮಾಹಿತಿಗಳನ್ನು ಎನ್​ಐಎ ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ