ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ: ಎಫ್​ಐಆರ್ ದಾಖಲಿಸಿಕೊಂಡ ರಾಷ್ಟ್ರೀಯ ತನಿಖಾ ದಳ

Bengaluru Crime: ನಕಲಿ ದಾಖಲೆಗಳನ್ನು ಸೃಷ್ಟಿಸಿ ಯುವತಿಯರನ್ನ ಬೆಂಗಳೂರಿಗೆ ಕರೆತಂದಿದ್ದ ಹಿನ್ನೆಲೆಯಲ್ಲಿ ಇದೀಗ ಘಟನೆಗೆ ಸಂಬಂಧಿಸಿ ಎನ್​ಐಎ ಅಧಿಕೃತವಾಗಿ ಎಫ್ಐಆರ್ ದಾಖಲಿಸಿಕೊಂಡಿದೆ.

ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ: ಎಫ್​ಐಆರ್ ದಾಖಲಿಸಿಕೊಂಡ ರಾಷ್ಟ್ರೀಯ ತನಿಖಾ ದಳ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Jul 21, 2021 | 5:33 PM

ಬೆಂಗಳೂರು: ಬಾಂಗ್ಲಾ ಯುವತಿಯ ಮೇಲೆ ಹಲ್ಲೆ ಹಾಗೂ ಗ್ಯಾಂಗ್​ರೇಪ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದಿಂದ ಪ್ರತ್ಯೇಕ ಎಫ್​ಐಆರ್​ ದಾಖಲಾಗಿದೆ. ಬಾಡಿ ವಾರಂಟ್ ಮೇರೆಗೆ ಶೀಘ್ರ ಆರೋಪಿಗಳು ಎನ್​ಐಎ ವಶವಾಗಲಿದ್ದಾರೆ. ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಮೇ 27ರಂದು ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಪ್ರಕರಣದಲ್ಲಿ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಯುವತಿಯನ್ನು ಬಾಂಗ್ಲಾದಿಂದ ಬೆಂಗಳೂರಿಗೆ ಕರೆತಂದಿದ್ದರು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಯುವತಿಯರನ್ನು ಕರೆತರಲಾಗಿತ್ತು. ಪ್ರಕರಣದ 10 ಆರೋಪಿಗಳನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿರುವುದು ಬಯಲಾಗಿತ್ತು. ಆರೋಪಿಗಳ ವಶದಲ್ಲಿದ್ದ 7 ಬಾಂಗ್ಲಾ ಮೂಲದ ಯುವತಿಯರನ್ನು ಪೊಲೀಸರು ರಕ್ಷಿಸಿದ್ದರು.

ನಕಲಿ ಭಾರತೀಯ ದಾಖಲೆಗಳ ಸಹಿತ ಯುವತಿಯರನ್ನ ವಶಕ್ಕೆ ಪಡೆದಿದ್ದರು. ಬಳಿಕ ಪ್ರಕರಣ ಹೆಣ್ಣೂರು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ನಕಲಿ ದಾಖಲೆಗಳನ್ನು ಸೃಷ್ಟಿಸಿ ಯುವತಿಯರನ್ನ ಬೆಂಗಳೂರಿಗೆ ಕರೆತಂದಿದ್ದ ಹಿನ್ನೆಲೆಯಲ್ಲಿ ಇದೀಗ ಘಟನೆಗೆ ಸಂಬಂಧಿಸಿ ಎನ್​ಐಎ ಅಧಿಕೃತವಾಗಿ ಎಫ್ಐಆರ್ ದಾಖಲಿಸಿಕೊಂಡಿದೆ.

ಘಟನೆ ಹಿನ್ನೆಲೆ ಆರೋಪಿಗಳು ಎನ್ಆರ್ಐ ಲೇಔಟ್ನಲ್ಲಿ ಬಾಂಗ್ಲಾ ಮೂಲದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಸಂತ್ರಸ್ಥೆ ಮತ್ತು ಆರೋಪಿಗಳು ಇಬ್ಬರೂ ಬಾಂಗ್ಲಾದೇಶದ ಮೂಲದರಾಗಿದ್ದು, ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಆರೋಪಿಗಳು ವೇಶ್ಯಾವಾಟಿಕೆ ದಂದೆಯಲ್ಲಿ ತೊಡಗಿದ್ದು, ಸಂತ್ರಸ್ಥೆ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರು ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದರು.

ಬಾಂಗ್ಲಾ ದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದ ವಿಡಿಯೋ ಕುರಿತು ತನಿಖೆ ನಡೆಸಿದಾಗ ಕೃತ್ಯದಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಭಾಗಿಯಾರುವುದು ಬೆಳಕಿಗೆ ಬಂದಿತ್ತು. ಆ ಬಳಿಕ ಸಂತ್ರಸ್ಥೆ ಕುಟುಂಬದ ಸದಸ್ಯರನ್ನ ಪತ್ತೆಮಾಡಿದ್ದ ಬಾಂಗ್ಲಾ ಪೊಲೀಸರು ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆವಲಹಳ್ಳಿಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವುದು ಪತ್ತೆ ಹಚ್ಚಿ ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಇದನ್ನೂ ಓದಿ: ಬಾಂಗ್ಲಾದೇಶದ ಯುವತಿ ಗ್ಯಾಂಗ್‌ರೇಪ್ ಪ್ರಕರಣ; ಯುವತಿಯರ ಮಾಹಿತಿ ಕೇಳಿದ ಎನ್ಐಎ

ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; 12 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

(NIA files FIR against Bangla Woman Rape Case and Fake ID in Bengaluru GBD)

Published On - 5:26 pm, Wed, 21 July 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ