AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ; ತಲೆಮರೆಸಿಕೊಂಡಿರುವ ಆರೋಪಿಗಳ ಮನೆ ಮೇಲೆ ಎನ್​ಐಎ ದಾಳಿ

2020ರ ಆಗಸ್ಟ್ 11ರಂದು ಗಲಭೆ ನಡೆದಿತ್ತು. ಬಳಿಕ, ಪ್ರಕರಣ ತನಿಖೆ ನಡೆಸಿ ಎನ್​ಐಎ ಚಾರ್ಜ್​ಶೀಟ್ ಸಲ್ಲಿಸಿತ್ತು. ನಾಪತ್ತೆಯಾಗಿರುವ 7 ಆರೋಪಿಗಳ ಮನೆ ಮೇಲೆ ಎನ್​ಐಎ ದಾಳಿ ನಡೆಸಿದೆ. ಬೆಂಗಳೂರಿನ 7 ವಿವಿಧ ಸ್ಥಳಗಳಲ್ಲಿ ಎನ್​ಐಎ ದಾಳಿ ನಡೆಸಿದೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ; ತಲೆಮರೆಸಿಕೊಂಡಿರುವ ಆರೋಪಿಗಳ ಮನೆ ಮೇಲೆ ಎನ್​ಐಎ ದಾಳಿ
ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Aug 07, 2021 | 9:43 PM

Share

ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಗಳ ಮನೆ ಮೇಲೆ ಎನ್​ಐಎ ದಾಳಿ ನಡೆಸಿದೆ. ಕೆಲವು ಮಹತ್ವದ ದಾಖಲೆ, ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ. 2020ರ ಆಗಸ್ಟ್ 11ರಂದು ಗಲಭೆ ನಡೆದಿತ್ತು. ಬಳಿಕ, ಪ್ರಕರಣ ತನಿಖೆ ನಡೆಸಿ ಎನ್​ಐಎ ಚಾರ್ಜ್​ಶೀಟ್ ಸಲ್ಲಿಸಿತ್ತು. ನಾಪತ್ತೆಯಾಗಿರುವ 7 ಆರೋಪಿಗಳ ಮನೆ ಮೇಲೆ ಎನ್​ಐಎ ದಾಳಿ ನಡೆಸಿದೆ. ಬೆಂಗಳೂರಿನ 7 ವಿವಿಧ ಸ್ಥಳಗಳಲ್ಲಿ ಎನ್​ಐಎ ದಾಳಿ ನಡೆಸಿದೆ.

ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿಯಲ್ಲಿ ಗಲಭೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್​ಐಎ ಬಂಧಿಸಿತ್ತು. ಗಲಭೆ ಬಳಿಕ ನಾಪತ್ತೆಯಾಗಿದ್ದ ಗೋವಿಂದಪುರದ ನಿವಾಸಿ ಸೈಯದ್ ಅಬ್ಬಾಸ್ ಬಂಧನವಾಗಿತ್ತು. 2020 ರ ಆಗಸ್ಟ್ 11 ರಂದು ಗಲಭೆ ಕೇಸ್ ನಡೆದಿತ್ತು. ಕೆ.ಜಿ. ಹಳ್ಳಿ ಪೊಲೀಸ್ ಠಾಣೆಯನ್ನು ಸೈಯದ್ ಅಬ್ಬಾಸ್ ಧ್ವಂಸ ಮಾಡಿದ್ದ.

ಈ ಪ್ರಕರಣ ಸಂಬಂಧ 2020 ರ ಆಗಸ್ಟ್ 12 ರಂದು ಎಫ್​ಐಆರ್ ದಾಖಲಾಗಿತ್ತು. ಎಫ್​ಐಆರ್ ದಾಖಲಾದ ಬಳಿಕ ಪ್ರಕರಣವನ್ನು ಎನ್​ಐಎಗೆ ವರ್ಗಾವಣೆ ಮಾಡಲಾಗಿತ್ತು. ಸೈಯದ್ ಅಬ್ಬಾಸ್ ಗಲಭೆ ವೇಳೆ ಹಲವು ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಹಲ್ಲೆ ಬಳಿಕ ಠಾಣೆಗೆ ಬೆಂಕಿ ಇಟ್ಟಿದ್ದು ಸಹ‌ ಇದೇ ಸೈಯದ್ ಅಬ್ಬಾಸ್ ಎಂದು ತಿಳಿದುಬಂದಿತ್ತು.

ಘಟನೆಯ ಹಿನ್ನೆಲೆ ‘ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ 2020ರ ಆಗಸ್ಟ್​ 10ರಂದು ವಾಹನಗಳಿಗೆ ಬೆಂಕಿಹಚ್ಚಿ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆಯೂ ಕೆಲವರು ದಾಳಿ ಮಾಡಿದ್ದರು.

ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದರು. ಅವಹೇಳನಕಾರಿ ಪೋಸ್ಟ್ ಹಾಕಿದ್ದ ಎನ್ನಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆಗೆ ಸಂಬಂಧಿಸಿದಂತೆ 111 ಜನರನ್ನು ಪೊಲೀಸರು ಬಂಧಿಸಿದ್ದರು. ಹಿಂಸಾಚಾರದಲ್ಲಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಮೊಬೈಲ್ ಬಳಸಿ ಹೈಕೋರ್ಟ್ ಕಲಾಪ ವೀಕ್ಷಿಸಿದ್ದ ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣದ ಕೈದಿಗಳು: ತನಿಖೆಗೆ ಸಮಿತಿ ರಚಿಸಲು ಹೈಕೋರ್ಟ್ ಇಂಗಿತ

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಕೆಲ ಆರೋಪಿಗಳನ್ನು ಇನ್ನೂ ಬಂಧಿಸದ ಬಗ್ಗೆ ವರದಿ ಸಲ್ಲಿಕೆಗೆ ಹೈಕೋರ್ಟ್ ಸೂಚನೆ

(NIA Raid on DJ Halli KG Halli Case Victims seize important Documents)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ