ಬೆಂಗಳೂರಿನಲ್ಲಿ ಹೆಣ್ಮಕ್ಕಳಿಗಿಲ್ಲ ಸೇಫ್ಟಿ: ಹೋಟೆಲ್​ಗೆ ಬಂದ ಯುವತಿ ಜೊತೆ ಅಸಭ್ಯ ವರ್ತನೆ; ಸಿಸಿಟಿವಿಯಲ್ಲಿ ಸೆರೆ

ಹೋಟೆಲ್ ಗೆ ಬಂದ ಮೂವರು ಹುಡುಗರು ದೋಸೆ ತಿನ್ನುತ್ತ ಅಲ್ಲೇ ನಿಂತು ಹರಟೆ ಹೊಡೆಯುತ್ತಿದ್ದರು. ಈ‌ ವೇಳೆ ಹೋಟೆಲ್ ಗೆ ಬಂದ ಯುವತಿ ಜೊತೆಗೆ ಅನುಚಿತ ವರ್ತನೆ ತೋರಿದ್ದಾರೆ. ಓರ್ವ ಕಾಮುಕ ಯುವತಿಯ ಹಿಂಬದಿಗೆ ಕೈ ನಿಂದ ಹೊಡೆದು ಅನುಚಿತ ವರ್ತನೆ ತೋರಿದ್ದಾನೆ. ಉಳಿದಿಬ್ಬರು ಅದನ್ನು ನೋಡಿ ಖುಷಿ ಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಹೆಣ್ಮಕ್ಕಳಿಗಿಲ್ಲ ಸೇಫ್ಟಿ: ಹೋಟೆಲ್​ಗೆ ಬಂದ ಯುವತಿ ಜೊತೆ ಅಸಭ್ಯ ವರ್ತನೆ; ಸಿಸಿಟಿವಿಯಲ್ಲಿ ಸೆರೆ
ಸಿಸಿಟಿವಿ ದೃಶ್ಯ
Edited By: ಆಯೇಷಾ ಬಾನು

Updated on: Jan 18, 2024 | 10:14 AM

ಬೆಂಗಳೂರು, ಜ.18: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಬಿಎಂಟಿಸಿ ಬಸ್, ಮೆಟ್ರೋ, ಮಾಲ್​ಗಳಲ್ಲಿ ಹೆಣ್ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಕಾಮುಕರಿಗೆ (Misbehave) ಕಡಿವಾಣ ಹಾಕುವವರಿಲ್ಲದಂತಾಗಿದೆ. ಇದೇ ರೀತಿಯ ಮತ್ತೊಂದು ಘಟನೆ ವಿಜಯನಗರದಲ್ಲಿ (Vijayanagar) ನಡೆದಿದ್ದು ಕಾಮುಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಜಯನಗರದ ನಮ್ಮೂಟ ಹೋಟೆಲ್ ಬಳಿ ಹೆಣ್ಮಕ್ಕಳ್ಳನ್ನ ಟಚ್ ಮಾಡಿ ವಿಕೃತ ಸುಖ ಪಡುತ್ತಿದ್ದ ಕಾಮುಕರ ಕೃತ್ಯ ಸೆರೆಯಾಗಿದೆ. ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೂವರು ಕಾಮುಕರು ಹೋಟೆಲ್​ಗೆ ಬರುವ ಯುವತಿಯರು, ಮಹಿಳೆಯರನ್ನು ಟಾರ್ಗೆಟ್ ಮಾಡಿ ಬೇಕು ಬೇಕು ಅಂತಲೇ ಟಚ್ ಮಾಡಿ ವಿಕೃತಿ ಮೆರೆಯುತ್ತಿದ್ದದ್ದು ಪತ್ತೆಯಾಗಿದೆ. ಬೇಕು ಬೇಕಂತಲೇ ಯುವತಿಯನ್ನು ಟಚ್ ಮಾಡಿ ವಿಕೃತಿ ಮೆರೆದ ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯುವತಿಯನ್ನ ಟಚ್ ಮಾಡೋ ಮೊದಲು ಮೂವರು ಕಾಮುಕರು ಪ್ಲಾನ್ ಮಾಡಿಕೊಂಡಿದ್ದು ಒಬ್ಬ ಟಚ್ ಮಾಡೋ ಉದ್ದೇಶದಿಂದ ಹೋದ್ರೆ, ಮತ್ತಿಬ್ಬರು ವಾಚ್ ಮಾಡ್ತಾರೆ. ಬಳಿಕ ಏನಾದ್ರು ಗಲಾಟೆಯಾದ್ರೆ ಏನು ತಪ್ಪಿಲ್ಲ ಎಂಬಂತೆ ಎಸ್ಕೇಪ್ ಆಗ್ತಾರೆ. ಇದೇ ರೀತಿ ವಿಜಯನಗರದ ನಮ್ಮೂಟ ಹೋಟೆಲ್ ಬಳಿ ಯುವತಿಯನ್ನು ಕಾಮುಕ ಟಚ್ ಮಾಡಿ ಅಟ್ಟಹಾಸ ಮೆರೆದಿದ್ದಾನೆ. ಈ ವೇಳೆ ಗಲಾಟೆ ನಡೆದಿದ್ದು ಸಂಪೂರ್ಣ ದೃಶ್ಯ ಸೆರೆಯಾಗಿದೆ. ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನೀವು ಮನೆಯಲ್ಲಿ ಒಂಟಿಯಾಗಿ ಇರುತ್ತೀರಾ? ಹಾಗಿದ್ರೆ ಎಚ್ಚರ! ಹಾಡಹಗಲೇ ಮನೆಗೆ ನುಗ್ಗಿ ದರೋಡೆ, ಓರ್ವ ಅರೆಸ್ಟ್

ಹೋಟೆಲ್ ಕ್ಯಾಶಿಯರ್ ಸುಕನ್ಯಾ ಕೊಟ್ಟ ದೂರಿನ ಮೇರೆಗೆ ಎಫ್ಐಆರ್

ಇನ್ನು ವಿಜಯನಗರ ಆರ್​ಪಿಸಿ ಲೇಔಟ್​ನಲ್ಲಿರುವ ನಮ್ಮೂಟ ಹೋಟೆಲ್​ನಲ್ಲಿ 2023 ಡಿಸಂಬರ್ 30 ರ ಸಂಜೆ 7.30 ಕ್ಕೆ ಈ ಘಟನೆ ನಡೆದಿತ್ತು. ತಡವಾಗಿ ಅಂದರೆ 2024 ರ ಜನವರಿ 10 ರಂದು ಈ ಘಟನೆ ಸಂಬಂಧ ಎಫ್ಐಆರ್ ದಾಖಲಾಗಿದೆ. ಹೋಟೆಲ್ ಗೆ ಬಂದ ಮೂವರು ಹುಡುಗರು ದೋಸೆ ತಿನ್ನುತ್ತ ಅಲ್ಲೇ ನಿಂತು ಹರಟೆ ಹೊಡೆಯುತ್ತಿದ್ದರು. ಈ‌ ವೇಳೆ ಹೋಟೆಲ್ ಗೆ ಬಂದ ಯುವತಿ ಜೊತೆಗೆ ಅನುಚಿತ ವರ್ತನೆ ತೋರಿದ್ದಾರೆ. ಓರ್ವ ಕಾಮುಕ ಯುವತಿಯ ಹಿಂಬದಿಗೆ ಕೈ ನಿಂದ ಹೊಡೆದು ಅನುಚಿತ ವರ್ತನೆ ತೋರಿದ್ದಾನೆ. ಉಳಿದಿಬ್ಬರು ಅದನ್ನು ನೋಡಿ ಖುಷಿ ಪಟ್ಟಿದ್ದಾರೆ. ಈ ವೇಳೆ ಯುವತಿ ಯುವಕರ ಜೊತೆ ಗಲಾಟೆ ಮಾಡಿ ಕೂಗಾಡಿದ್ದು ಸ್ಥಳೀಯರೆಲ್ಲರೂ ಜಮಾಯಿಸಿದ್ದಾರೆ. ಜನ ಸೇರುತ್ತಿದ್ದಂತೆ ಮೂವರು ಯುವಕರು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Loading...
Unable to load recommendations.
Follow Us