AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಯ್ಡಾದ ಮಾಲ್​ ಬಳಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, 3 ಮಂದಿ ಬಂಧನ

ನೋಯ್ಡಾದ ಮಾಲ್​ ಬಳಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, 3 ಮಂದಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಪಿಂಗ್​ ಮಾಲ್​ ಬಳಿ ಸಾಮೂಹಿಕ ಅತ್ಯಾಚಾರ ನಡೆದಿತ್ತು, ಅದಾದ ಬಳಿಕ ಪದೇ ಪದೇ ಮಹಿಳೆಗೆ ಆರೋಪಿಗಳು ಕಿರುಕುಳ ನೀಡಿದ್ದರು.

ನಯನಾ ರಾಜೀವ್
|

Updated on: Jan 02, 2024 | 12:51 PM

Share

ನೋಯ್ಡಾದ ಮಾಲ್​ ಬಳಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, 3 ಮಂದಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಪಿಂಗ್​ ಮಾಲ್​ ಬಳಿ ಸಾಮೂಹಿಕ ಅತ್ಯಾಚಾರ ನಡೆದಿತ್ತು, ಅದಾದ ಬಳಿಕ ಪದೇ ಪದೇ ಮಹಿಳೆಗೆ ಆರೋಪಿಗಳು ಕಿರುಕುಳ ನೀಡಿದ್ದರು.

ಡಿಸೆಂಬರ್ 30 ರಂದು ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ನಂತರ ತನಿಖೆಯನ್ನು ಕೈಗೆತ್ತಿಕೊಂಡು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಬಂಧಿತರನ್ನು ರಾಜ್‌ಕುಮಾರ್, ಆಜಾದ್ ಮತ್ತು ವಿಕಾಸ್ ಎಂದು ಗುರುತಿಸಲಾಗಿದೆ. ರವಿ ಮತ್ತು ಮೆಹ್ಮಿ ಎಂಬ ಇತರ ಇಬ್ಬರು ಶಂಕಿತರು ತಲೆಮರೆಸಿಕೊಂಡಿದ್ದಾರೆ ಮತ್ತು ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ವಕ್ತಾರರು ತಿಳಿಸಿದ್ದಾರೆ.

ಭಯದ ಕಾರಣ ತಕ್ಷಣ ಮಹಿಳೆಯು ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಅದಾದ ಬಳಿಕ ಆರೋಪಿಗಳು ಮತ್ತೊಮ್ಮೆ ಕಿರುಕುಳ ಕೊಟ್ಟ ನಂತರ ಬ್ಲ್ಯಾಕ್‌ಮೇಲ್ ಮಾಡಿದ ನಂತರ ಡಿಸೆಂಬರ್ 30 ರಂದು ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಮತ್ತಷ್ಟು ಓದಿ: ಚಿಕ್ಕಮಗಳೂರು: ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ

ಕಳೆದ ವಾರ ಆಕೆಯ ವೈದ್ಯಕೀಯ ಪರೀಕ್ಷೆಯ ನಂತರ ಕಾರ್ಯವಿಧಾನದ ಪ್ರಕಾರ ದೂರುದಾರರ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಬಂಧಿತ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ