ನೋಯ್ಡಾದ ಮಾಲ್ ಬಳಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, 3 ಮಂದಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿ ಸೇರಿದಂತೆ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಪಿಂಗ್ ಮಾಲ್ ಬಳಿ ಸಾಮೂಹಿಕ ಅತ್ಯಾಚಾರ ನಡೆದಿತ್ತು, ಅದಾದ ಬಳಿಕ ಪದೇ ಪದೇ ಮಹಿಳೆಗೆ ಆರೋಪಿಗಳು ಕಿರುಕುಳ ನೀಡಿದ್ದರು.
ಡಿಸೆಂಬರ್ 30 ರಂದು ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ನಂತರ ತನಿಖೆಯನ್ನು ಕೈಗೆತ್ತಿಕೊಂಡು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಬಂಧಿತರನ್ನು ರಾಜ್‌ಕುಮಾರ್, ಆಜಾದ್ ಮತ್ತು ವಿಕಾಸ್ ಎಂದು ಗುರುತಿಸಲಾಗಿದೆ. ರವಿ ಮತ್ತು ಮೆಹ್ಮಿ ಎಂಬ ಇತರ ಇಬ್ಬರು ಶಂಕಿತರು ತಲೆಮರೆಸಿಕೊಂಡಿದ್ದಾರೆ ಮತ್ತು ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ವಕ್ತಾರರು ತಿಳಿಸಿದ್ದಾರೆ.
ಭಯದ ಕಾರಣ ತಕ್ಷಣ ಮಹಿಳೆಯು ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಅದಾದ ಬಳಿಕ ಆರೋಪಿಗಳು ಮತ್ತೊಮ್ಮೆ ಕಿರುಕುಳ ಕೊಟ್ಟ ನಂತರ ಬ್ಲ್ಯಾಕ್‌ಮೇಲ್ ಮಾಡಿದ ನಂತರ ಡಿಸೆಂಬರ್ 30 ರಂದು ಮಹಿಳೆ ಪೊಲೀಸರನ್ನು ಸಂಪರ್ಕಿಸಿದ್ದಾರೆ.
ಮತ್ತಷ್ಟು ಓದಿ: ಚಿಕ್ಕಮಗಳೂರು: ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ
ಕಳೆದ ವಾರ ಆಕೆಯ ವೈದ್ಯಕೀಯ ಪರೀಕ್ಷೆಯ ನಂತರ ಕಾರ್ಯವಿಧಾನದ ಪ್ರಕಾರ ದೂರುದಾರರ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಬಂಧಿತ ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ