ದಿನಸಿ ವಸ್ತುಗಳನ್ನು ಡೆಲಿವರಿ ಮಾಡಲು ಬಂದಿದ್ದ ವ್ಯಕ್ತಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಗ್ರೇಟರ್ ನೋಯ್ಡಾದ ಬಹುಮಹಡಿ ಅಪಾರ್ಟ್‌ಮೆಂಟ್‌ನಲ್ಲಿ ಇರುವ ಮಹಿಳೆ ಮೊಬೈಲ್ ಆ್ಯಪ್‌ನಿಂದ ದಿನಸಿ ವಸ್ತುಗಳನ್ನು ಆರ್ಡರ್ ಮಾಡಿದ್ದರು.
ಆರೋಪಿ ಸುಮಿತ್ ಸಿಂಗ್ ದಿನಸಿ ವಸ್ತುಗಳನ್ನು ನೀಡಲು ಸ್ಥಳಕ್ಕೆ ತಲುಪಿದಾಗ ಆಕೆ ಒಬ್ಬಳೇ ಇರುವುದು ಗೊತ್ತಾಗಿದೆ, ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಈ ಘಟನೆ ನಡೆದಿದ್ದು, ಅದೇ ದಿನ ಮಹಿಳೆ ಪೊಲೀಸ್ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಹಿಡಿಯಲು ಪೊಲೀಸರು ಹಲವು ತಂಡಗಳನ್ನು ರಚಿಸಿದ್ದು, ಅಂತಿಮವಾಗಿ ಗ್ರೇಟರ್ ನೋಯ್ಡಾದ ವಸತಿ ಪ್ರದೇಶದಲ್ಲಿ ಪತ್ತೆಯಾಗಿದ್ದಾನೆ.
ಆತನನ್ನು ಬಂಧಿಸಲು ಪೊಲೀಸ್ ತಂಡವು ಸ್ಥಳಕ್ಕೆ ಬಂದಾಗ, ಸುಮಿತ್ ಒಬ್ಬ ಕಾನ್‌ಸ್ಟೆಬಲ್‌ನಿಂದ ಪಿಸ್ತೂಲ್ ಕಿತ್ತುಕೊಂಡು ಓಡಿ ಹೋಗಲು ಪ್ರಯತ್ನಪಟ್ಟಿದ್ದ.
ಮತ್ತಷ್ಟು ಓದಿ: ಟಿಶ್ಯೂ ಪೇಪರ್ ವಿಚಾರಕ್ಕೆ ಯುವಕರಿಗೆ ಚಾಕುವಿನಿಂದ ಇರಿದ ಪಾನ್ ಶಾಪ್ ಮಾಲೀಕ
ಪೊಲೀಸರು ಆತನ ಹತ್ತುರ ಬಂದಾಗ ಆತ ಪೊಲೀಸರ ಕಡೆಗೆ ಗುಂಡು ಹಾರಿಸಿದ್ದಾನೆ, ಹಾಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.
ಸುಮಿತ್ ನನ್ನು ಬಂಧಿಸಲಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಹಿಂದೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ