ಹಳೆಯ ವೈಷಮ್ಯ, ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ, ಕಿಲೋಮೀಟರ್​ಗಟ್ಟಲೆ ದೇಹ ಎಳೆದೊಯ್ದ ಪಾಪಿಗಳು

ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದು ಹತ್ಯೆ ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಹಳೆಯ ವೈಷಮ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ, ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯನ್ನು ಹತ್ಯೆ ಮಾಡಿದ್ದಲ್ಲದೆ ದೇಹವನ್ನು ಬೈಕ್​ಗೆ ಕಟ್ಟಿ ಕಿಲೋಮೀಟರ್​ಗಳವರೆಗೆ ಎಳೆದೊಯ್ದಿದ್ದಾರೆ ಎನ್ನಲಾಗಿದೆ.

ಹಳೆಯ ವೈಷಮ್ಯ, ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ, ಕಿಲೋಮೀಟರ್​ಗಟ್ಟಲೆ ದೇಹ ಎಳೆದೊಯ್ದ ಪಾಪಿಗಳು
ಅಪರಾಧ
Image Credit source: NDTV

Updated on: Jan 21, 2024 | 11:23 AM

ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯೊಬ್ಬನನ್ನು ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಂದು ಹತ್ಯೆ ಮಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಹಳೆಯ ವೈಷಮ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ, ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವ್ಯಕ್ತಿಯನ್ನು ಹತ್ಯೆ ಮಾಡಿದ್ದಲ್ಲದೆ ದೇಹವನ್ನು ಬೈಕ್​ಗೆ ಕಟ್ಟಿ ಕಿಲೋಮೀಟರ್​ಗಳವರೆಗೆ ಎಳೆದೊಯ್ದಿದ್ದಾರೆ ಎನ್ನಲಾಗಿದೆ.

ಶನಿವಾರ ಸಂಜೆ ನೋಯ್ಡಾದ ಬರೋಲಾದಲ್ಲಿ ಅನುಜ್ ಮತ್ತು ಅವರ ಸೋದರ ಸಂಬಂಧಿ ನಿತಿನ್ ಅವರು ಮೆಹಂದಿ ಹಾಸನ್‌ಗೆ ಚಾಕುವಿನಿಂದ ಇರಿದಿದ್ದಾರೆ .

ನಂತರ ಅವರ ಕಾಲನ್ನು ಬೈಕ್‌ಗೆ ಕಟ್ಟಿಕೊಂಡು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದರು. ಕೆಲವು ವರ್ಷಗಳ ಹಿಂದೆ ಮೆಹೆಂದಿ ಹಸನ್ ಅನುಜ್ ತಂದೆಯ ಮೇಲೆ ಹಲ್ಲೆ ನಡೆಸಿದ್ದ ಮತ್ತು ದಾಳಿಗೆ ಸೇಡು ತೀರಿಸಿಕೊಳ್ಳಲು ಆತ ಬಯಸಿದ್ದಾಗಿ ಎಂದು ಹಂತಕರು ಪೊಲೀಸರಿಗೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದವ ಅರೆಸ್ಟ್, ಅವನ ಮೇಲಿತ್ತು 7 ಪ್ರಕರಣಗಳು

ಮೆಹಂದಿ ಹಸನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಯುಧವನ್ನು ವಶಪಡಿಸಿಕೊಳ್ಳಲು ಅವರನ್ನು ಅಪರಾಧ ಸ್ಥಳಕ್ಕೆ ಕರೆದೊಯ್ಯುತ್ತಿದ್ದ ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದಾರೆ, ಅನುಜ್ ಮತ್ತು ನಿತಿನ್ ಹಾಗೂ ಪೊಲೀಸರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ