AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ದರೋಡೆಕೋರ ಅಜಯ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಹಲವಾರು ಭಾಗಗಳಲ್ಲಿ ದರೋಡೆಗಳನ್ನು ನಡೆಸಿ ಜನರಲ್ಲಿ ಭೀತಿ ಹುಟ್ಟಿಸಿದ್ದ ಕುಖ್ಯಾತ ದರೋಡೆಕೋರ ಅಜಯ್​ನನ್ನು ತಾಲೂಕಿನ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಂದು ಗುಂಡು ಹಾರಿಸಿ ಬಂಧಿಸಲಾಯಿತು. ಮೂಲತಃ ರಾಮನಗರ ಜಿಲ್ಲೆ ಕನಕಪುರ ನಿವಾಸಿಯಾಗಿರುವ ಅಜಯ್ ಸುಮಾರು 25ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸ್​ಗೆ ಬೇಕಾಗಿದ್ದ. ಅಜಯ ಕಾರಿನಲ್ಲಿ ತೆರಳುತ್ತಿದ್ದ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಉಪ ಪೊಲೀಸ್ ವರಿಷ್ಠಾಧಿಕಾರಿ ರಂಗಪ್ಪ ನೇತೃತ್ವದ ತಂಡ ಅವನನ್ನು ಹಿಂಬಾಲಿಸಿ ವಿಜಯಪುರದ ಬಳಿ ಅಡ್ಡಗಟ್ಟಿ ಶರಣಾಗುವಂತೆ ಹೇಳಿದಾಗ, ಅವನು […]

ಕುಖ್ಯಾತ ದರೋಡೆಕೋರ ಅಜಯ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 15, 2020 | 8:24 PM

Share

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಹಲವಾರು ಭಾಗಗಳಲ್ಲಿ ದರೋಡೆಗಳನ್ನು ನಡೆಸಿ ಜನರಲ್ಲಿ ಭೀತಿ ಹುಟ್ಟಿಸಿದ್ದ ಕುಖ್ಯಾತ ದರೋಡೆಕೋರ ಅಜಯ್​ನನ್ನು ತಾಲೂಕಿನ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಂದು ಗುಂಡು ಹಾರಿಸಿ ಬಂಧಿಸಲಾಯಿತು.

ಮೂಲತಃ ರಾಮನಗರ ಜಿಲ್ಲೆ ಕನಕಪುರ ನಿವಾಸಿಯಾಗಿರುವ ಅಜಯ್ ಸುಮಾರು 25ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸ್​ಗೆ ಬೇಕಾಗಿದ್ದ. ಅಜಯ ಕಾರಿನಲ್ಲಿ ತೆರಳುತ್ತಿದ್ದ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಉಪ ಪೊಲೀಸ್ ವರಿಷ್ಠಾಧಿಕಾರಿ ರಂಗಪ್ಪ ನೇತೃತ್ವದ ತಂಡ ಅವನನ್ನು ಹಿಂಬಾಲಿಸಿ ವಿಜಯಪುರದ ಬಳಿ ಅಡ್ಡಗಟ್ಟಿ ಶರಣಾಗುವಂತೆ ಹೇಳಿದಾಗ, ಅವನು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿ ಹೆಡ್​ಕಾನ್ಸ್​ಟೇಬಲ್​ ನಾರಾಯಣಸ್ವಾಮಿಗೆ ಚಾಕುವಿನಿಂದ ಇರಿದಿದ್ದಾನೆ.

ಆಗಲೇ, ಚನ್ನರಾಯಪಟ್ಟಣ ಠಾಣೆಯ ಪಿಎಸ್​ಐ ನಂದೀಶ್​ ಆತ್ಮರಕ್ಷಣೆಗಾಗಿ ಅಜಯ್ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ ನಂತರ ಬಂಧಿಸಿದ್ದಾರೆ. ನಾರಾಯಣಸ್ವಾಮಿ ಮತ್ತು ಅಜಯನನ್ನು ವಿಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Follow Us
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.