ಛತ್ತೀಸಗಢದ ಆರೋಗ್ಯ ಕೇಂದ್ರಲ್ಲಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳಲ್ಲಿ ಒಬ್ಬ ಅಪ್ರಾಪ್ತ
17 ವರ್ಷದ ಯುವಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ. ನಾಲ್ವರು ಆರೋಪಿಗಳು ಈ ಕೃತ್ಯವನ್ನು ರೆಕಾರ್ಡ್ ಮಾಡಿದ್ದು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಭೋಪಾಲ್: ಛತ್ತೀಸ್‌ಗಢದ (Chhattisgarh) ಆರೋಗ್ಯ ಕೇಂದ್ರದಲ್ಲಿ (health centre )ನರ್ಸ್‌ಯೊಬ್ಬರನ್ನು ಕಟ್ಟಿಹಾಕಿ, ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿದ ಪ್ರಕರಣ ವರದಿ ಆಗಿದೆ. ಇದರಲ್ಲಿ ಒಬ್ಬ ಆರೋಪಿ ಮಾಡ ಅಪ್ರಾಪ್ತ ಎಂದು ಪೊಲೀಸರು ತಿಳಿಸಿದ್ದಾರೆ. 17 ವರ್ಷದ ಯುವಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ. ನಾಲ್ವರು ಆರೋಪಿಗಳು ಈ ಕೃತ್ಯವನ್ನು ರೆಕಾರ್ಡ್ ಮಾಡಿದ್ದು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಮಹೇಂದ್ರಗಢ ಜಿಲ್ಲೆಯ ಚಿಪ್ಚಿಪಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಗ್ಯ ಕೇಂದ್ರದಲ್ಲಿ ಒಬ್ಬಂಟಿಯಾಗಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆಯನ್ನು ಆರೋಪಿ ಗಮನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲಿಗೆ ಬಂದ ದುಷ್ಕರ್ಮಿಗಳು ಆಕೆಯನ್ನು ಕಟ್ಟಿಹಾಕಿದರು. ಅವಳ ಬಾಯಿ ಬಂಗ್ ಮಾಡಿ ಅವಳ ಮೇಲೆ ಅತ್ಯಾಚಾರ ಎಸಗಿದರು. ಬಳಿಕ ನರ್ಸ್ ಪೋಷಕರಿಗೆ ಮಾಹಿತಿ ನೀಡಿ ಪೊಲೀಸರಿಗೆ ದೂರು ನೀಡಿದ್ದರು.
“ಮಹಿಳೆ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ನಿಮೇಶ್ ಬರಯ್ಯ ತಿಳಿಸಿದ್ದಾರೆ. ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಭೂಪೇಶ್ ಭಾಗೇಲ್ ನೇತೃತ್ವದ ಛತ್ತೀಸ್‌ಗಢ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
Published On - 1:44 pm, Sun, 23 October 22