ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ: ಅಪರಿಚಿತ ವ್ಯಕ್ತಿಗಳ ವಿರುದ್ಧ FIR ದಾಖಲು
ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್ ಎಂಬುವವರಿಂದ ದೂರು ನೀಡಿದ್ದು, ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಐ.ಟಿ. ಕಾಯ್ದೆ ಸೆ. 67, 67(A) ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಬೆಂಗಳೂರು, ಡಿಸೆಂಬರ್ 05: ಕರ್ನಾಟಕ ಹೈಕೋರ್ಟ್ (Karnataka High Court) ವಿಡಿಯೋ ಕಾನ್ಫರೆನ್ಸ್ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಕೋರ್ಟ್ ಹಾಲ್ 6, 12, 18, 23, 24, 26 ರ ವಿಡಿಯೋ ಕಾನ್ಫರೆನ್ಸ್ ವೇಳೆ ಘಟನೆ ನಡೆದಿದೆ. ಕಲಾಪದ ಲಿಂಕ್ ಮೂಲಕ ಭಾಗವಹಿಸಿದ ಅಪರಿಚಿತರಿಂದ ಕೃತ್ಯವೆಸಗಲಾಗಿದೆ. ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಕಚೇರಿಯ ಎನ್. ಸುರೇಶ್ ಎಂಬುವವರಿಂದ ದೂರು ನೀಡಿದ್ದು, ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಐ.ಟಿ. ಕಾಯ್ದೆ ಸೆ. 67, 67(A) ಅಡಿ ಪ್ರಕರಣ ದಾಖಲು ಮಾಡಲಾಗಿದೆ.
ಅಶ್ಲೀಲ ಚಿತ್ರ ಪ್ರದರ್ಶಿಸಿ ಅನುಚಿತ ವರ್ತನೆ ತೋರಿದ್ದಾರೆ. ಹೈಕೋರ್ಟ್ನ ಸೈಬರ್ ಭದ್ರತೆಗೆ ಆತಂಕ ಎದುರಾದ ಹಿನ್ನೆಲೆ ತಾತ್ಕಾಲಿಕವಾಗಿ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಕಲಾಪ ಅಮಾನತು ಮಾಡಲಾಗಿದೆ.
ಕೇರಳ ವ್ಯಕ್ತಿಯ ಬರ್ಬರ ಹತ್ಯೆ
ಶಿವಮೊಗ್ಗ: ಹಳೇ ವೈಷಮ್ಯದ ಹಿನ್ನೆಲೆ ಕೇರಳ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಸೊರಬ ಪಟ್ಟಣದ ಹೊರವಲಯದ ರಬ್ಬರ್ ತೋಟದಲ್ಲಿ ನಡೆದಿದೆ. ಕಣ್ಣೂರು ನಿವಾಸಿ ಶಿಜು(42) ಮೃತ ವ್ಯಕ್ತಿ. ಚಾಕುವಿನಿಂದ ಇರಿದು ಹತ್ಯೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಗಿ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಬೆಂಕಿ
ನೆಲಮಂಗಲ: ಚಲಿಸುತ್ತಿದ್ದ ಕ್ಯಾಂಟರ್ಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಅವಘಡ ಸಂಭವಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಇಮಚೇನಹಳ್ಳಿ ರಸ್ತೆಯಲ್ಲಿ ನಡೆದಿದೆ. ರೈತ ಸುರೇಶ್ ಅವರಿಗೆ ಸೇರಿದ ರಾಗಿ ಹುಲ್ಲು.
ಇದನ್ನೂ ಓದಿ: ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ಗೆ ಚಾಕು ಇರಿತ: ಕಾಂಗ್ರೆಸ್ ಎಂಎಲ್‌ಸಿ ಸೇರಿ ಐವರ ವಿರುದ್ಧ ಎಫ್ಐಆರ್
2 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ರಾಗಿ ಹುಲ್ಲು ಜೊತೆ ಕ್ಯಾಂಟರ್ ಸುಟ್ಟು ಕರಕಲಾಗಿದೆ. ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸಿದ್ದಾರೆ. ದಾಬಸ್ ಪೇಟೆ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾವು
ಕೊಪ್ಪಳ: ಭತ್ತದ ಮೇವು ಸಾಗಿಸುತ್ತಿದ್ದ ಎತ್ತಿನ ಬಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ ತಾಲೂಕಿನ ಉಡಮಕಲ್ ಗ್ರಾಮದ ಬಳಿ ನಡೆದಿದೆ. ಉಡುಮಕಲ್ ಗ್ರಾಮದ ನಿವಾಸಿ ಹನುಮಂತಪ್ಪ ಭಜಂತ್ರಿ (31) ಮೃತ ದುರ್ದೈವಿ.
ಹನುಮಂತಪ್ಪ ಉಡಮಕಲ್ ಗ್ರಾಮದಿಂದ ಆರ್ಹಾಳ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:07 pm, Tue, 5 December 23