Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಪ್ರೇಯಸಿಯರ ಜತೆ ಸೇರಿ ಪತ್ನಿಯನ್ನೇ ಹತ್ಯೆಗೈದ ಪತಿ

ವ್ಯಕ್ತಿಯೊಬ್ಬ ಪ್ರೆಯಸಿಯರ ಜತೆ ಸೇರಿ ಪತ್ನಿಯನ್ನೇ ಹತ್ಯೆ ಮಾಡಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಭುವನೇಶ್ವರದಲ್ಲಿ ಘಟನೆ ನಡೆದಿದೆ, ಪೊಲೀಸರ ಪ್ರಕಾರ, ಸಂತ್ರಸ್ತೆ ಶುಭಶ್ರೀ ಎಂಬುವವರು ಅಕ್ಟೋಬರ್ 28 ರಂದು ಸಾವನ್ನಪ್ಪಿದ್ದಾರೆ.

ಇಬ್ಬರು ಪ್ರೇಯಸಿಯರ ಜತೆ ಸೇರಿ ಪತ್ನಿಯನ್ನೇ ಹತ್ಯೆಗೈದ ಪತಿ
ಪೊಲೀಸ್ Image Credit source: The Hans India
Follow us
ನಯನಾ ರಾಜೀವ್
|

Updated on: Nov 05, 2024 | 8:59 AM

ಪತಿಯ ಅನೈತಿಕ ಸಂಬಂಧದ ಬಗ್ಗೆ ತಿಳಿದು ಪ್ರಶ್ನೆ ಮಾಡಿದ್ದಕ್ಕೆ ಇಬ್ಬರು ಪ್ರೇಯಸಿಯರ ಜತೆ ಸೇರಿ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಭುವನೇಶ್ವರದಲ್ಲಿ ಘಟನೆ ನಡೆದಿದೆ, ಪೊಲೀಸರ ಪ್ರಕಾರ, ಸಂತ್ರಸ್ತೆ ಶುಭಶ್ರೀ ಎಂಬುವವರು ಅಕ್ಟೋಬರ್ 28 ರಂದು ಸಾವನ್ನಪ್ಪಿದ್ದಾರೆ.

ಆಕೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆಂದು ಆರೋಪಿಗಳು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರದ್ಯುಮ್ನ ಪೊಲೀಸರಿಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಆರಂಭಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ, ಇದು ಕೆಲವು ವಿಚಲಿತ ಸಂಗತಿಗಳನ್ನು ಬಹಿರಂಗಪಡಿಸಿತು. ಅವಳ ಕೈಗಳ ಮೇಲೆ ಮತ್ತು ಕುತ್ತಿಗೆಯ ಸುತ್ತಲೂ ಮೂಗೇಟುಗಳಿದ್ದವು. ಬಳಿಕ ಪತಿಯ ತನಿಖೆ ನಡೆಸಿದಾಗ ತನ್ನಿಬ್ಬರು ಪ್ರೇಯಸಿಯರ ಜತೆ ಸೇರಿ ಪತ್ನಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ಓದಿ: ಅಡುಗೆ ವಿಚಾರಕ್ಕೆ ಜಗಳ; ಜೊತೆಗಿದ್ದವನನ್ನು ರೂಂನಲ್ಲೇ ಹೊಡೆದು ಕೊಂದ ಯುವಕ

ದಾಸ್ ಇಬ್ಬರು ಮಹಿಳೆಯರೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು. ಕೊನೆಗೆ ಆಕೆ ತನ್ನ ಮನೆ ಬಿಟ್ಟು ತಾಯಿಯ ಮನೆಗೆ ಹೋಗಿದ್ದಳು. ಕಳೆದ ಟು ತಿಂಗಳಿನಿಂದ ಆಕೆ ತನ್ನ ಪೋಷಕರ ಮನೆಯಲ್ಲಿ ವಾಸವಾಗಿದ್ದಳು. ಅಕ್ಟೋಬರ್​ 28ರಂದು ವ್ಯಕ್ತಿಯನ್ನು ಕರೆಸಿಕೊಂಡು, ನಿದ್ರೆ ಮಾತ್ರೆ ಕೊಟ್ಟು ಆಕೆಯನ್ನು ಹತ್ಯೆ ಮಾಡಿದ್ದಾರೆ.

ಮತ್ತೊಂದು ಘಟನೆ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಇಬ್ಬರು ಪ್ರಿಯಕರ ಜತೆ ಸೇರಿ ಗಂಡನನ್ನೇ ಕೊಂದ ಪತ್ನಿ ಮಹಿಳೆಯೋರ್ವಳು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದಯ ತಾಳಿ ಕಟ್ಟಿದ ಗಂಡನನ್ನೇ ಕೊಂದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಡುವಿಹಳ್ಳಿಯಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಮಲ್ಕುಂಡಿ ಗ್ರಾಮದ ಸದಾಶಿವ(43) ಎಂಬ ವ್ಯಕ್ತಿಯನ್ನು ಸರ್ಕಾರಿ ಶಾಲೆಯ ಬಳಿ ಕೊಲೆಯಾಗಿತ್ತು. ಪತ್ನಿ ರಾಜೇಶ್ವರಿ ಹಾಗೂ ತನ್ನಿಬ್ಬರು ಗೆಳೆಯರಾದ ರಂಗಸ್ವಾಮಿ, ಶಿವಯ್ಯ ಎನ್ನುವರ ಜೊತೆ ಸೇರಿಕೊಂಡು ಪತಿಯನ್ನೇ ಕೊಂದಿದ್ದಳು. ಬಳಿಕ ವಾಮಾಚಾರಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಬಿಂಬಿಸಿ ರಾಜೇಶ್ವರಿ ಬಿಕ್ಕಿಬಿಕ್ಕಿ ಅತ್ತಿದ್ದಳು. ಆದ್ರೆ, ಪೊಲೀಸರು ತನಿಖೆ ನಡೆಸಿದಾಗ ಪತ್ನಿಯ ಆಟ ಬಯಲಾಗಿತ್ತು.

ಮೈಸೂರು ಜಿಲ್ಲೆಯಲ್ಲೊಂದು ಐನಾತಿ ಪತ್ನಿಯ ನಿಜ ಬಣ್ಣವನ್ನು ಪೊಲೀಸ್ರು ಬಟಾಬಯಲು ಮಾಡಿದ್ದಾರೆ. ತನ್ನ ರಂಗಿನಾಟಕ್ಕೆ ಪತಿ ಅಡ್ಡ ಬರ್ತಾನೆ ಎಂದು ತಿಳಿದ ಪತ್ನಿ ವಾಮಾಚಾರದ ಹೆಸರಲ್ಲಿ ಪತಿಕೊಂದು ಕಥೆ ಕಟ್ಟಿ ಸಿಕ್ಕಿಬಿದ್ದಿದ್ದಾಳೆ. ಅಂದ ಹಾಗೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ಬೆಂಗಳೂರಿನ ಎಚ್​ಎಸ್​ಆರ್​ ಲೇಔಟ್​ಗೆ ತಂಪೆರೆದ ಮಳೆ
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ನಗರದಲ್ಲಿರುವ ಮರಗಳ ಸರ್ವೇ ಮಾಡಿಸಿದರೆ ಅಪಾಯಗಳನ್ನು ತಪ್ಪಿಸಬಹುದು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!