ಹುಬ್ಬಳ್ಳಿ: ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ

ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಹುಬ್ಬಳ್ಳಿ: ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರವೆಸಗಿದ್ದ ಆರೋಪಿಯ ಬಂಧನ
ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Dec 29, 2023 | 2:46 PM

ಹುಬ್ಬಳ್ಳಿ, ಡಿಸೆಂಬರ್​ 29: ಮದಾರಾಸಾದ (Madarasa) ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರವೆಸಗಿದ ಆರೋಪಿ ಗುಲಾಮ ಜಿಲಾನಿ ಅಜಹರಿ ಮೌಲ್ವಿಯನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು (Old hubli Police Station) ಬಂಧಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಭಾಗಿಯಾಗಿದ್ದ ಗುಲಾಮ್ ಜಿಲಾನಿ ಅಜಹರಿ ಸೇರಿದಂತೆ 8 ಜನರ ವಿರುದ್ಧ ಎಫ್​ಐಆರ್ (FIR)​ ದಾಖಲಾಗಿದೆ.

ಹುಬ್ಬಳ್ಳಿ ಮೂಲದ 23 ವರ್ಷದ ಯುವತಿ, ಮಧ್ಯಪ್ರದೇಶದ ಖಂಡವಾದಲ್ಲಿರುವ ಮುಫ್ತಿ ಗುಲಾಮ ಜಿಲಾನಿ ಅಜಹರಿಯ ಮದರಸಾದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಯ ಪರಿಚಯಸ್ಥನಾಗಿದ್ದನು. ಹೀಗಾಗಿ ಗುಲಾಮ ಜಿಲಾನಿ ಅಜಹರಿ ಯುವತಿಯ ತಂದೆಗೆ “ನಿಮ್ಮ ಮಗಳಿಗೆ ನಮ್ಮಲ್ಲಿ ಕೆಲಸ ಇದೆ” ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಯುವತಿ ಖಂಡವಾ ಪಟ್ಟಣಕ್ಕೆ ಹೋಗಿದ್ದಳು.

ಅಲ್ಲಿ ಯುವತಿಯನ್ನು ಪುಸಲಾಯಿಸಿದ ಮುಫ್ತಿ ಗುಲಾಮ ಜಿಲಾನಿ ಅಜಹರಿ, ನನ್ನ ಮೊದಲ ಹೆಂಡತಿಗೆ ವಿಚ್ಚೆದನ ನೀಡಿದ್ದೇನೆ. ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ಹೇಳುತ್ತಲೇ ಯುವತಿಗೆ ಮತ್ತು ಬರುವ ಔಷಧ ಕೊಟ್ಟು ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ.

ಇದನ್ನೂ ಓದಿ: ಕಲಬುರಗಿ: ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ

ಮದುವೆ ಮಾಡಿಕೊಳ್ಳುವದಾಗಿ ಹೇಳಿ ಎರಡು ವರ್ಷದ ಅವಧಿಯಲ್ಲಿ ಮೇಲಿಂದ ಮೇಲೆ ಬಲಾತ್ಕಾರ ಮಾಡಿದ್ದಾನೆ. ಎರಡು ವರ್ಷದ ಅವಧಿಯಲ್ಲಿ ಗುಲಾಮ ಜಿಲಾನಿ ಅಜಹರಿ, ಒಟ್ಟು ನಾಲ್ಕು ಬಾರಿ ಆಕೆಯ ಗರ್ಭಪಾತ ಮಾಡಿಸಿದ್ದಾನೆ. ಯುವತಿ ಐದನೇ ಬಾರಿಗೆ ಗರ್ಭಿಣಿಯಾದ ಬಳಿಕ ಆಕೆಯನ್ನು ತವರು ಮನೆ ಹುಬ್ಬಳ್ಳಿಯಲ್ಲಿ ಬಿಟ್ಟು, ನನ್ನ ನಿನ್ನ ನಡುವೆ ಯಾವುದೇ ಸಂಬಂಧ ಉಳಿದಿಲ್ಲ. ಈ ವಿಷಯ ಬಹಿರಂಗ ಮಾಡಿದರೆ ನಿನ್ನನ್ನು ಮತ್ತು ನಿನ್ನ ಕುಟುಂಬವನ್ನು ಜೀವ ಸಮೇತ ಬಿಡಲ್ಲ ಎಂದು ಬೆದರಿಕೆ ಹಾಕಿದ್ದಾನೆ.

ಯಾವಾಗ ಮದುವೆಯಾಗದೆ ಮೌಲ್ವಿ ಮೋಸ ಮಾಡಿದನೋ, ನೊಂದ ಯುವತಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 18.12.23 ರಂದು ಪ್ರಕರಣ ದಾಖಲಿಸಿದ್ದಾಳೆ. ಒಟ್ಟು ಮುಫ್ತಿ (ಮೌಲ್ವಿ) ಸೇರಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸದ್ಯ ಆಕೆಯ ದೂರನ್ನು ದಾಖಲಿಸಿಕೊಂಡ ಹಳೇ ಹುಬ್ಬಳ್ಳಿ ಪೊಲೀಸರು, ಅತ್ಯಾಚಾರದ ಆರೋಪಿ ಮುಫ್ತಿ ಗುಲಾಮ ಜಿಲಾನಿ ಅಜಹರಿಯನ್ನು ಮಧ್ಯಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಖಂಡವಾದಿಂದ ಆತನನ್ನು ಹುಬ್ಬಳ್ಳಿಗೆ ಕರೆತರಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ