AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ವಿದ್ಯಾಪೀಠ ಸರ್ಕಲ್ ಬಳಿ ಒಂಟಿ ವೃದ್ಧೆಯ ಬರ್ಬರ ಹತ್ಯೆ

ಇಂದು ಬೆಳಗ್ಗೆ ಮನೆಯ ಬಾಡಿಗೆದಾರ ನೋಡಿದಾಗ ಕೊಲೆ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ನಿನ್ನೆ ರಾತ್ರಿ ಕೊಲೆ ಮಾಡಿ ಎಸ್ಕೇಪ್ ಆಗಿದಾರೆ. ಕೊಲೆ ಮಾಡಿ, ಮನೆಯಲ್ಲಿದ್ದ ಚಿನ್ನಾಭರಣ ದೋಚಿರುವ ಶಂಕೆ ವ್ಯಕ್ತವಾಗಿದೆ. ಸಿ‌.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crime News: ವಿದ್ಯಾಪೀಠ ಸರ್ಕಲ್ ಬಳಿ ಒಂಟಿ ವೃದ್ಧೆಯ ಬರ್ಬರ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Jul 02, 2022 | 4:34 PM

Share

ಬೆಂಗಳೂರಿನಲ್ಲಿ ಒಂಟಿ ವೃದ್ಧೆಯ (Woman) ಬರ್ಬರ ಹತ್ಯೆಯಾಗಿದೆ. ಯಶೋದಮ್ಮ‌ (75) ಕೊಲೆಯಾದ ವೃದ್ದೆ. ಕಳೆದ ರಾತ್ರಿ ಚನ್ನಮ್ಮನ ಕೆರೆ (ಸಿ.ಕೆ.) ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ (CK Achukattu police station) ಘಟನೆ ನಡೆದಿದೆ. ವಿದ್ಯಾಪೀಠ ಸರ್ಕಲ್ ಬಳಿಯ (Vidyapeeta Circle) ವಿನಾಯಕ ನಗರದಲ್ಲಿ ಮನೆಯ ಗ್ರೌಂಡ್ ಫ್ಲೋರ್ ನಲ್ಲಿ ವಾಸವಿದ್ದ ಯಶೋದಮ್ಮ‌ ಅವರನ್ನು ಚಾಕುವಿನಿಂದ ನಾಲ್ಕೈದು ಬಾರಿ ಇರಿದು ಕೊಲೆ‌ ಮಾಡಲಾಗಿದೆ.

ಇಂದು ಬೆಳಗ್ಗೆ ಮನೆಯ ಬಾಡಿಗೆದಾರ ನೋಡಿದಾಗ ಕೊಲೆ ಬೆಳಕಿಗೆ ಬಂದಿದೆ. ಕೂಡಲೇ ಬಾಡಿಗೆದಾರ ಅವರನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷೆ ವೇಳೆ ಮೃತಪಟ್ಟಿರೋದಾಗಿ ವೈದ್ಯರು ದೃಢಪಡಿಸಿದ್ದಾರೆ. ದುಷ್ಕರ್ಮಿಗಳು ನಿನ್ನೆ ರಾತ್ರಿ ಕೊಲೆ ಮಾಡಿ ಎಸ್ಕೇಪ್ ಆಗಿದಾರೆ. ಕೊಲೆ ಮಾಡಿ, ಮನೆಯಲ್ಲಿದ್ದ ಚಿನ್ನಾಭರಣ ದೋಚಿರುವ ಶಂಕೆ ವ್ಯಕ್ತವಾಗಿದೆ. ಸಿ‌.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ:

ಬೆಂಗಳೂರು: ರಾಜಧಾನಿಯಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆಯಾಗಿದೆ. ಅಣ್ಣ ರಾಮಕೃಷ್ಣ ತಮ್ಮ ಬಾಲಕೃಷ್ಣನ (26) ಎದೆಗೆ ಚಾಕುವಿನಿಂದ ಇರಿದು ಸಾಯಿಸಿದ್ದಾನೆ. ಕೆ.ಆರ್. ಪುರಂ ನ ಪ್ರಿಯಾಂಕ ನಗರದ ಮನೆಯಲ್ಲಿ ಘಟನೆ ನಡೆದಿದೆ. ಕೆಲಸ ಮಾಡುವ ವಿಚಾರಕ್ಕೆ ರಾಮಕೃಷ್ಣ-ಬಾಲಕೃಷ್ಣ ಗಲಾಟೆ ಮಾಡಿಕೊಂಡಿದ್ದರು. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಕೆ.ಆರ್.ಪುರಂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರೇಮ ವೈಫಲ್ಯದಿಂದ ಮನನೊಂದ ಯುವಕ ನೇಣಿಗೆ ಶರಣು

ಪ್ರೀತಿ ವಿಷಯವಾಗಿ ಮನನೊಂದ ಯುವಕ ನೇಣಿಗೆ ಶರಣಾಗಿದ್ದಾನೆ. ಟಿ. ದಾಸರಹಳ್ಳಿಯ ಕಾಳಾಸ್ತ್ರಿ ನಗರದಲ್ಲಿ ಘಟನೆ ನಡೆದಿದೆ. ಸಂಜಯ್‌ (21) ಮೃತ ಯುವಕ. ಸಂಜಯ್‌, ಒಂದು ವರ್ಷದ ಹಿಂದೆ ಯುವತಿಯೊಬ್ಬಳನ್ನ ಪ್ರೀತಿಸುತ್ತಿದ್ದನಂತೆ. ಹುಡುಗಿ ಈತನ ಪ್ರೀತಿಯನ್ನು ನಿರಾಕರಣೆ ಮಾಡಿದ್ದಳ್ಳಂತೆ. ಇದರಿಂದ ಮನನೊಂದು ಮನೆಯ ರೂಂನಲ್ಲಿ ನೇಣಿಗೆ ಶರಣಾಗಿದ್ದಾನೆ.

ಕೊಪ್ಪಳ ಮೂಲದ ಮೃತ ಸಂಜಯ್ ಜಾಲಹಳ್ಳಿ ಬಳಿಯ ಟ್ರಾವೆಲ್ ನಲ್ಲಿ ಚಾಲಕನಾಗಿದ್ದ. ಡ್ರೈವರ್ ಕಂ ಒನರ್ ಆಗಿ ಟ್ರಾವೆಲ್ ಕೆಲಸ ಮಾಡುತ್ತಿದ್ದ. ತಂದೆ ಗುರುಪಾದಯ್ಯ ರಾತ್ರಿ ಕರೆ ಮಾಡಿದಾಗ ಸಂಜಯ್ ಕರೆ ಸ್ವೀಕರಿಸಿಲ್ಲ. ಸ್ನೇಹಿತರು ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 4:30 pm, Sat, 2 July 22

Follow Us
Web contact
Web contact

TV9 Kannada

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ