Uttar Pradesh: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ, ಆಸ್ಪತ್ರೆಗೆ ಕರೆಸಿ ಮಹಿಳೆಯನ್ನು ಅತ್ಯಾಚಾರ ಮಾಡಿದ 3 ವೈದ್ಯರು

ಉತ್ತರ ಪ್ರದೇಶದ ಬಸ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

Uttar Pradesh: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ, ಆಸ್ಪತ್ರೆಗೆ ಕರೆಸಿ ಮಹಿಳೆಯನ್ನು ಅತ್ಯಾಚಾರ ಮಾಡಿದ 3 ವೈದ್ಯರು
Edited By:

Updated on: Oct 04, 2022 | 2:46 PM

ಬಸ್ತಿ: ಉತ್ತರ ಪ್ರದೇಶದ ಬಸ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಈ ವೈದ್ಯರು ತನ್ನೊಂದಿಗೆ ಸ್ನೇಹ ಬೆಳೆಸಿದರು, ನಂತರ ಅವರನ್ನು ಭೇಟಿ ಮಾಡಲು ನನಗೆ ಒತ್ತಾಯ ಮಾಡಿದ್ದಾರೆ, ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಆಕೆ ಆಸ್ಪತ್ರೆಗೆ ಭೇಟಿ ನೀಡಿದಾಗ, ವೈದ್ಯರು ಅವಳನ್ನು ತನ್ನ ಹಾಸ್ಟೆಲ್ ಕೋಣೆಗೆ ಕರೆದೊಯ್ದರು, ವೈದ್ಯರಾದ ಇಬ್ಬರು ಸಹೋದ್ಯೋಗಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರುದಾರರನ್ನು ಉಲ್ಲೇಖಿಸಿದರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಲಕ್ನೋದಲ್ಲಿ ಓರ್ವ ಸಾವು; 8 ತಿಂಗಳ ಮಗು ಸೇರಿ ಐವರಿಗೆ ಗಾಯ

ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿರುವ ಮಹಿಳೆ ಬಸ್ತಿಯಿಂದ ಲಖನೌಗೆ ಆಗಮಿಸಿ ಸೆಪ್ಟೆಂಬರ್ 27 ರಂದು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

Published On - 2:46 pm, Tue, 4 October 22