ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಅಪಘಾತ; ಕಾರು ಕಣಿವೆಗೆ ಬಿದ್ದು ಓರ್ವ ಸಾವು, ಮೂವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸವಲ್ಲಾ ನಲ್ಲಾ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಕಣಿವೆಗೆ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಇಂದು ಸಂಜೆ ಈ ಘಟನೆ ಸಂಭವಿಸಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಅಪಘಾತ; ಕಾರು ಕಣಿವೆಗೆ ಬಿದ್ದು ಓರ್ವ ಸಾವು, ಮೂವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಅಪಘಾತ
Follow us
|

Updated on: Jun 27, 2024 | 6:56 PM

ರಿಯಾಸಿ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಯಿಂದ ಸ್ಕಿಡ್ ಆಗಿ ಕಮರಿಗೆ ಉರುಳಿದ ಪರಿಣಾಮ ಇಂದು ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಈ ಅಪಘಾತ ಸಂಭವಿಸಿದಾಗ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು.

ಜುಡ್ಡಾದಿಂದ ಕೂರಿ ಮಾರ್ಗವಾಗಿ ಸವಳ್ಳಾ ನಾಲಾ ಬಳಿ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಕಾರು ನಂತರ ಕಮರಿಗೆ ಬಿದ್ದಿತು. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಸಂತ್ರಸ್ತರ ಗುರುತು ಇನ್ನೂ ದೃಢಪಟ್ಟಿಲ್ಲ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆಗೆ ಯತ್ನ; ಕಾಮುಕ ಅರೆಸ್ಟ್​

ಬಸ್ ಮೇಲೆ ಉಗ್ರರ ದಾಳಿ:

ಇದಕ್ಕೂ ಮುನ್ನ ಜೂನ್ 9ರಂದು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಶಿವ ಖೋರಿ ದೇವಸ್ಥಾನದಿಂದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುತ್ತಿದ್ದಾಗ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ 53 ಆಸನಗಳ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. 53 ಆಸನಗಳ ವಾಹನವು ಗುಂಡಿನ ದಾಳಿಯ ನಂತರ ರಸ್ತೆಯಿಂದ ಆಚೆ ಬಂದು ಆಳವಾದ ಕಮರಿಗೆ ಬಿದ್ದಿತ್ತು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ನಡೆಸಿ 13 ವರ್ಷದ ಬಾಲಕಿಯ ಕೊಲೆ; ಹರಿದ್ವಾರ ಹೆದ್ದಾರಿಯಲ್ಲಿ ಶವ ಪತ್ತೆ

ಪೌನಿ ಪ್ರದೇಶದ ತೇರ್ಯತ್ ಗ್ರಾಮದ ಬಳಿ ಶಿವ ಖೋರಿ ದೇಗುಲದಿಂದ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದಾಗ ದಾಳಿಯಲ್ಲಿ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ದೆಹಲಿಯ 7 ಯಾತ್ರಿಗಳು ಸೇರಿದಂತೆ 9 ಜನರು ಸಾವನ್ನಪ್ಪಿದ್ದಾರೆ ಮತ್ತು 41 ಜನರು ಗಾಯಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ