Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಜ್ಯುವೆಲ್ಲರಿ ಶಾಪ್​ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಓರ್ವ ಸಾವು

ಆಕ್ಸಿಜನ್ ಸಿಲಿಂಡರ್ ಸ್ಫೋಟವಾಗಿ ಓರ್ವ ಸಾವನ್ನಪ್ಪಿರುವಂತಹ ಘಟನೆ ನಗರದ ನಗರ್ತರಪೇಟೆಯಲ್ಲಿ ನಡೆದಿದೆ. ಜ್ಯುವೆಲ್ಲರಿ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಮೃತ ವ್ಯಕ್ತಿ.

Bengaluru News: ಜ್ಯುವೆಲ್ಲರಿ ಶಾಪ್​ನಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ: ಓರ್ವ ಸಾವು
ಆಕ್ಸಿಜನ್ ಸಿಲಿಂಡರ್ ಸ್ಫೋಟ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Jun 30, 2023 | 3:40 PM

ಬೆಂಗಳೂರು: ಆಕ್ಸಿಜನ್ ಸಿಲಿಂಡರ್ ಸ್ಫೋಟ (oxygen cylinder blast) ವಾಗಿ ಓರ್ವ ಸಾವನ್ನಪ್ಪಿರುವಂತಹ ಘಟನೆ ನಗರದ ನಗರ್ತರಪೇಟೆಯಲ್ಲಿ ನಡೆದಿದೆ. ಜ್ಯುವೆಲ್ಲರಿ ಶಾಪ್​ನಲ್ಲಿ ಕೆಲಸ ಮಾಡುತ್ತಿದ್ದ ವಿಷ್ಣು ಮೃತ ವ್ಯಕ್ತಿ. ಚಿನ್ನ ಮೆಲ್ಟ್​ ಮಾಡಲು ಆಕ್ಸಿಜನ್, ಎಲ್​ಪಿಜಿ ಬಳಕೆ ವೇಳೆ ಸ್ಫೋಟಗೊಂಡಿದೆ. ಮಾಲೀಕರು ಹೊರಗಿದ್ದು ಕೆಲಸದವರು ಮಾತ್ರ ಅಂಗಡಿಯಲ್ಲಿದ್ದರು. ಆಕ್ಸಿಜನ್ ಸಿಲಿಂಡರ್​ ಆಫ್​ ಮಾಡದೆ ವಿಷ್ಣು ಊಟಕ್ಕೆ ತೆರಳಿದ್ದ. ಪ್ರೆಸರ್ ಹೆಚ್ಚಾದ ಹಿನ್ನೆಲೆ ಏಕಾಏಕಿ ಸ್ಫೋಟವಾಗಿದೆ.

ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿ ವಿಷ್ಣು ಮೃತಪಟ್ಟಿದ್ದಾನೆ. ಘಟನೆ ಬಳಿಕ ಜ್ಯುವೆಲ್ಲರಿ ಶಾಪ್ ಮಾಲೀಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಹಲಸೂರು ಗೇಟ್​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಭೀಮಾ ನದಿಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು

ವಿಜಯಪುರ: ಭೀಮಾ ನದಿಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಖೇಡಗಿ ಗ್ರಾಮದ ಬಳಿ ಭೀಮಾ ನದಿಯಲ್ಲಿ ನಡೆದಿದೆ. ಗೀತಾ ಹೊನ್ನೂರ(38), ಶೋಭಿತಾ(12), ವಾಸುದೇವ(10) ಮೃತರು. ನಿನ್ನೆ ಸಂಜೆ ಬಟ್ಟೆ ತೊಳೆಯಲು ಹೋಗಿದ್ದ ವೇಳೆ ನಡೆದ ದುರಂತ ಸಂಭವಿಸಿದೆ.

ಇದನ್ನೂ ಓದಿ: ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯನ್ನ ಅಪಹರಿಸಿ ಹಣ ದೋಚಿದ್ದ ಪ್ರಕರಣ; ಐವರಲ್ಲಿ ಇಬ್ಬರ ಬಂಧನ

ಭೀಮಾ ನದಿಯ ಗುಂಡಿಯಲ್ಲಿ ಬಟ್ಟೆ ತೊಳೆಯುತ್ತಿದ್ದ ತಾಯಿ ಗೀತಾ, ಈ ವೇಳೆ ನೀರಿನ ಗುಂಡಿಗೆ ವಾಸುದೇವ, ಶೋಭಿತಾ ಬಿದಿದ್ದಾರೆ. ಇಬ್ಬರು ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿ ಕೂಡ ಮೃತಪಟ್ಟಿದ್ದಾರೆ. ಇಂಡಿ ಗ್ರಾಮೀಣ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೆಲಮಂಗಲದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು

ಬೆಂಗಳೂರು: ನೆಲಮಂಗಲದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವಂತಹ ಘಟನೆ ನಡೆದಿದೆ. ಆಟೋ, ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬಿಹಾರ ಮೂಲದ ರಣಧೀರ್ ಕುಮಾರ್(27) ದುರ್ಮರಣ ಹೊಂದಿದ್ದಾರೆ.

ಇದನ್ನೂ ಓದಿ: ನಕಲಿ ನೋಟುಗಳ ಹಾವಳಿ: ಬ್ಯಾಂಕ್ ಮ್ಯಾನೇಜರ್ ವಿರುದ್ಧವೇ ಬೆಂಗಳೂರಿನಲ್ಲಿ ದೂರು ದಾಖಲಿಸಿದ ಆರ್​ಬಿಐ

ಮಾದಾವರ ಬಳಿ ಹೆದ್ದಾರಿ 48ರಲ್ಲಿ ಕ್ಯಾಂಟರ್, ಬೈಕ್ ನಡುವೆ ಡಿಕ್ಕಿಯಾಗಿದ್ದು, ಕೇರಳ ಮೂಲದ ವಿದ್ಯಾರ್ಥಿ ಶಾಂತಲು(23) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆಚಾರ್ಯ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ