Mangalore News: ಸಮುದ್ರದಲ್ಲಿ ಈಜಲು ಹೋಗಿದ್ದ ಇಬ್ಬರ ಪೈಕಿ ಓರ್ವ ಯುವಕ ನೀರುಪಾಲು

ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವಂತಹ ಘಟನೆ ಮಂಗಳೂರಿನ ಲೈಟ್ ಹೌಸ್ ಬೀಚ್​​ನಲ್ಲಿ ನಡೆದಿದೆ.

Mangalore News: ಸಮುದ್ರದಲ್ಲಿ ಈಜಲು ಹೋಗಿದ್ದ ಇಬ್ಬರ ಪೈಕಿ ಓರ್ವ ಯುವಕ ನೀರುಪಾಲು
ಪ್ರಾತಿನಿಧಿಕ ಚಿತ್ರImage Credit source: mdpremier.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 31, 2022 | 6:47 PM

ಮಂಗಳೂರು: ಸಮುದ್ರದಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲಾಗಿರುವಂತಹ (drowned) ಘಟನೆ ಮಂಗಳೂರಿನ ಲೈಟ್ ಹೌಸ್ ಬೀಚ್​​ನಲ್ಲಿ ನಡೆದಿದೆ. ಸುರತ್ಕಲ್​​ನ ಕಾನ ಗ್ರಾಮದ ನಿವಾಸಿ ಸತ್ಯಂ(18) ಮೃತ ಯುವಕ. ಸತ್ಯಂ ಸ್ನೇಹಿತ ಪ್ರಭಾಕರನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸತ್ಯಂ ಶವಕ್ಕಾಗಿ ಸ್ಥಳೀಯ ಮೀನುಗಾರರಿಂದ ಶೋಧ ಕಾರ್ಯ ಆರಂಭವಾಗಿದೆ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ ಮೂಲಕ ಓರ್ವ ಯುವಕನ ಬಂಧನ ಮಾಡಿದ್ದು, 231 ಗ್ರಾಂ ಗಾಂಜಾವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆ ನಗರದ ಕುಂದವಾಡ ಲಿಂಕ್ ರಸ್ತೆಯ ವಿನಾಯಕ ನಗರದಲ್ಲಿ ಘಟನೆ ನಡೆದಿದೆ. ಸಂಜಯ್ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ. ಒಣಗಾಂಜಾ ಮತ್ತು ಸೇವನೆ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆ ಅಬಕಾರಿ ಉಪ ಅಸಯುಕ್ತ ಎಸ್ ಶಿವಪ್ರಸಾದ ನೇತ್ರತ್ವದಲ್ಲಿ ದಾಳಿ ಮಾಡಿದ್ದಾರೆ. ಸದ್ಯ ಆರೋಪಿಯನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿ ಓರ್ವ ಸಾವು

ವಿಜಯಪುರ: ವೇಗವಾಗಿ ಚಲಿಸುತ್ತಿದ್ದ ಕಾರು ಮತ್ತು ಬೈಕ್​ಗೆ ಹೊಡೆದು ಬಳಿಕ ರಸ್ತೆ ಬದಿಯ ಸೇತುವೆಗೆ ಡಿಕ್ಕಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಕ್ರಾಸ್ ಬಳಿ ನಡೆದಿದೆ. ಬಿ.ಎಸ್ ಪಾಟೀಲ್ (59) ಮೃತಪಟ್ಟ ವ್ಯಕ್ತಿ. ಕಾರಿನಲ್ಲಿದ್ದ ಇತರೆ ಮೂವರು ಮತ್ತು ಬೈಕ್ ಸವಾರ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ಕಾರಿನಲ್ಲಿದ್ದವರು ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ‌ ಚನ್ನೂರ ಗ್ರಾಮದವರು ಎಂದು ಹೇಳಲಾಗುತ್ತಿದೆ. ಮನಗೂಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Year Ender 2022: NIA ಇತಿಹಾಸದಲ್ಲೇ 2022ರಲ್ಲಿ ಅತೀ ಹೆಚ್ಚು ದಾಳಿ, 19.67% ಕೇಸ್​ ಹೆಚ್ಚಳ!

ವಿಜಯಪುರ ಕಾಂಗ್ರೆಸ್ ಜಲಾಂದೋಲನ ಸಮಾವೇಶದಲ್ಲಿ ಇಬ್ಬರಿಗೆ ಚಾಕು ಇರಿತ ಆರೋಪ

ವಿಜಯಪುರ: ಕಾಂಗ್ರೆಸ್ (Congress) ಜಲಾಂದೋಲನ ಸಮಾವೇಶದಲ್ಲಿ ಇಬ್ಬರಿಗೆ ಚಾಕು (stabbing) ಇರಿತ ಹಾಗೂ ರಾಡ್​ನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯಲ್ಲಿ ಇಂದು(ಡಿ.30) ದರ್ಬಾರ್​ ಮೈದಾನದಲ್ಲಿ ಆಯೋಜಿಸಿದ್ದ ಜಲಾಂದೋಲನ ಸಮಾವೇಶದಲ್ಲಿ ಘಟನೆ ನಡೆದಿದೆ. ಸಮಾವೇಶಕ್ಕಾಗಿ ಬ್ಯಾನರ್ ಅಳವಡಿಸುವ ವೇಳೆ ಘಟನೆ ಜರುಗಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಮುಖಂಡ ಇರ್ಫಾನ್ ಶೇಖ್, ಹನಾನ್ ಶೇಖ್ ಸೇರಿದಂತೆ 7 ಮುಖಂಡರ ವಿರುದ್ಧ ಆರೋಪ ಮಾಡಲಾಗಿದೆ. ನಹೀಮ್ ಮೆಹಬೂಬ್‌ಸಾಬ್ ತಾಂಬೋಲಿ, ನೇಹಾಲ್ ಮೆಹಬೂಬ್‌ಸಾಬ್ ತಾಂಬೋಲಿ ಹಲ್ಲೆ ಆರೋಪ ಮಾಡಿದ್ದಾರೆ.

ಸದ್ಯ ಗಾಯಾಳುಗಳನ್ನು ನಗರದ ಬಾಂಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದೆಡೆ ನಾವು ತಾಂಬೋಲಿ ಸಹೋದರರ ಮೇಲೆ ಹಲ್ಲೆ ಮಾಡಿಲ್ಲ. ಅವರೇ ನಮ್ಮ ಮೇಲೆ ಹಲ್ಲೆ ಮಾಡಿದ್ದು, ಗುಂಡು ಹಾರಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಇರ್ಫಾನ್ ಶೇಖ್ ಆರೋಪಿಸಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಅಪರಾಧ ಮಾಡಿ ಪಾತಾಳದಲ್ಲೇ ಅಡಗಿದ್ದರೂ, 28 ವರ್ಷವೇ ಆದರೂ, ಕೊನೆಗೆ ಆರೋಪಿ ಸಿಗಲೇಬೇಕು! ಈ ಸ್ಟೋರಿ ಸ್ವಲ್ಪ ನೋಡಿ

ಇಬ್ಬರು ಡ್ರಗ್ ಪೆಡ್ಲರ್​ಗಳ ಬಂಧನ

ಬೆಂಗಳೂರು: ನಗರದಲ್ಲಿ ಇಬ್ಬರು ಡ್ರಗ್ ಪೆಡ್ಲರ್​ಗಳ ಬಂಧನ ಮಾಡಿದ್ದು, 10 ಲಕ್ಷ ಮೌಲ್ಯದ 10 ಕೆಜಿ ಗಾಂಜಾ, 1‌ ಕೆಜಿ ಹ್ಯಾಶಿಷ್ ಆಯಿಲ್, ಕಾರು, ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಸವನಗುಡಿ ಪೊಲೀಸರಿಂದ ಆರೋಪಿ ಸೀನಪ್ಪ, ನಾಗೇಶ್​ನನ್ನ ಅರೆಸ್ಟ್​ ಮಾಡಿದ್ದಾರೆ. ಐಷಾರಾಮಿ ಜೀವನ ನಡೆಸಲು ಆರೋಪಿಗಳು ಡ್ರಗ್ಸ್​ ಮಾರುತ್ತಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:46 pm, Sat, 31 December 22

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಚೈತ್ರಾ ಕುಂದಾಪುರ ವಿಚಾರದಲ್ಲಿ ಉಲ್ಟಾ ಹೊಡೆತ ರಜತ್; ಸುದೀಪ್​ಗೂ ಇದು ಶಾಕ್
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ
ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಬೈಕ್ ಕದ್ದು, ಜಖಂಗೊಳಿಸಿದ ಯುವಕ