ಮಧ್ಯಪ್ರದೇಶದಲ್ಲಿ ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ ಸಾಮೂಹಿಕ ಅತ್ಯಾಚಾರ; 6 ಜನರ ಬಂಧನ

ಮಧ್ಯರಾತ್ರಿಯವರೆಗೂ ಆರ್ಕೆಸ್ಟ್ರಾ ಪ್ರದರ್ಶನ ನೀಡಿದ ನಂತರ 6 ಮಂದಿ ದುಷ್ಕರ್ಮಿಗಳು ಆಕೆಯನ್ನು ಅಪಹರಿಸಿದ್ದಾರೆ. ಬಳಿಕ, ಹತ್ತಿರದ ಕಾಡಿನಲ್ಲಿ ಪದೇಪದೆ ಆಕೆಯ ಮೇಲೆ ಹಲ್ಲೆ ನಡೆಸಿದ್ದಾರೆ. ತ್ವರಿತ ತನಿಖೆ ಮತ್ತು ಅತ್ಯಾಚಾರಕ್ಕೊಳಗಾದ ಮಹಿಳೆಯ ದೂರಿನ ನಂತರ ಪೊಲೀಸರು ಎಲ್ಲಾ 6 ಶಂಕಿತರನ್ನು ತ್ವರಿತವಾಗಿ ಬಂಧಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ ಸಾಮೂಹಿಕ ಅತ್ಯಾಚಾರ; 6 ಜನರ ಬಂಧನ
Rape

Updated on: Feb 21, 2025 | 10:15 PM

ನವದೆಹಲಿ: 20 ವರ್ಷದ ಆರ್ಕೆಸ್ಟ್ರಾ ಡ್ಯಾನ್ಸರ್ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಆಘಾತ ಮೂಡಿಸಿದೆ. ತಡರಾತ್ರಿ ಪ್ರದರ್ಶನ ನೀಡಿ ಮನೆಗೆ ಮರಳುತ್ತಿದ್ದ ಸಂತ್ರಸ್ತೆಯನ್ನು ಬೈಕ್‌ನಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ತಡೆದು ಆಕೆಯ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಹತ್ತಿರದ ಕಾಡಿಗೆ ಎಳೆದುಕೊಂಡು ಹೋಗಿ, ಆಕೆಯ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆಕೆಯ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ ನಂತರ ಎಲ್ಲಾ 6 ಆರೋಪಿಗಳನ್ನು ಬಂಧಿಸಲಾಗಿದೆ.

ಈ ಘಟನೆ ಬುಧವಾರ ಮತ್ತು ಗುರುವಾರ ರಾತ್ರಿಯ ನಡುವೆ ಮಾಡಾ ಪೊಲೀಸ್ ಠಾಣೆ ವ್ಯಾಪ್ತಿಯ ಶೀತುಲ್ ಗ್ರಾಮದಲ್ಲಿ ನಡೆದಿದೆ. ಅತ್ಯಾಚಾರಕ್ಕೊಳಗಾದ ಮಹಿಳೆ ತನ್ನ ಸಹೋದರಿ ಮತ್ತು ಆರ್ಕೆಸ್ಟ್ರಾದ ಇತರ ಮಹಿಳಾ ಸದಸ್ಯರೊಂದಿಗೆ ಬರ್ಹೋ ಸಂಸ್ಕಾರ ಸಮಾರಂಭದಲ್ಲಿ ಡ್ಯಾನ್ಸ್ ಶೋ ನೀಡುತ್ತಿದ್ದರು. ತಡರಾತ್ರಿ ನಡೆದ ಕಾರ್ಯಕ್ರಮ ಮುಗಿಸಿ ಅವರು ಬೈಕ್​ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ, ಅಡ್ಡ ಹಾಕಿದ ಆರೋಪಿಗಳು ಅತ್ಯಾಚಾರ ನಡೆಸಿದ್ದಾರೆ.

ಇದನ್ನೂ ಓದಿ: Tamil Nadu: ಏಳು ಮಂದಿ ಕಾಲೇಜು ವಿದ್ಯಾರ್ಥಿಗಳಿಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಈ ವೇಳೆ ಆಕೆಯ ಪ್ರಿಯಕರ ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಆತನನ್ನು ಥಳಿಸಲಾಗಿದೆ ಎಂದು ರೇವಾ ವಲಯದ ಡಿಐಜಿ ಸಾಕೇತ್ ಪ್ರಕಾಶ್ ಪಾಂಡೆ ಹೇಳಿದ್ದಾರೆ. ನಂತರ ಅತ್ಯಾಚಾರಿಗಳು ಸಂತ್ರಸ್ತೆಯನ್ನು ಬಲವಂತವಾಗಿ ಅಪಹರಿಸಿ, ಸಖೌಹಾನ್ ಶಿವನ ದೇವಾಲಯದ ಬಳಿಯ ಕಾಡಿಗೆ ಎಳೆದೊಯ್ದರು. ಅಲ್ಲಿ 6 ಜನರು ಅವರನ್ನು ಬಿಟ್ಟು ಹೋಗುವ ಮೊದಲು ರಾತ್ರಿಯಿಡೀ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಅತ್ಯಾಚಾರದಿಂದ ಆಘಾತಕ್ಕೊಳಗಾಗಿದ್ದರೂ ಆ ಮಹಿಳೆ ಮನೆಗೆ ತಲುಪಿದ್ದಾರೆ. ಬಳಿಕ ತನ್ನ ಅಕ್ಕನಿಗೆ ವಿಷಯ ತಿಳಿಸಿದ್ದಾರೆ. ಇಬ್ಬರೂ ಒಟ್ಟಿಗೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದರು. ಪೊಲೀಸರು ಕೂಡಲೇ ಪ್ರತಿಕ್ರಿಯಿಸಿ, ಪ್ರಕರಣ ದಾಖಲಿಸಿಕೊಂಡು, ವೈದ್ಯಕೀಯ ಪರೀಕ್ಷೆಗೆ ವ್ಯವಸ್ಥೆ ಮಾಡಿ 6 ಆರೋಪಿಗಳನ್ನು ಬಂಧಿಸಿದರು. ಆರೋಪಿಗಳನ್ನು ಪ್ರಸ್ತುತ ವಿಚಾರಣೆ ನಡೆಸಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us