Bengaluru: ಆನ್‌ಲೈನ್ ಡೆಲಿವರಿ ಅಪ್ಲಿಕೇಶನ್‌ಗಳ ಮೂಲಕ ಡ್ರಗ್ಸ್​ ಮಾರುತ್ತಿದ್ದ ಆರೋಪಿಗಳ ಬಂಧನ

ಆನ್‌ಲೈನ್ ಡೆಲಿವರಿ ಅಪ್ಲಿಕೇಶನ್‌ಗಳ ಮೂಲಕ ಡ್ರಗ್ಸ್​​ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.

Bengaluru: ಆನ್‌ಲೈನ್ ಡೆಲಿವರಿ ಅಪ್ಲಿಕೇಶನ್‌ಗಳ ಮೂಲಕ ಡ್ರಗ್ಸ್​ ಮಾರುತ್ತಿದ್ದ ಆರೋಪಿಗಳ ಬಂಧನ
Delivery Boy
Follow us
ವಿವೇಕ ಬಿರಾದಾರ
| Updated By: Digi Tech Desk

Updated on:May 12, 2023 | 9:11 PM

ಬೆಂಗಳೂರು: ಆನ್‌ಲೈನ್ (Online) ಡೆಲಿವರಿ ಅಪ್ಲಿಕೇಶನ್‌ಗಳ ಮೂಲಕ ಡ್ರಗ್ಸ್​ (Drugs)​ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು (Accused) ಕೇಂದ್ರ ಅಪರಾಧ ವಿಭಾಗದ (CCB) ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಅಶೋಕನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ಡ್ರಗ್ಸ್‌ಗಳನ್ನು ಗಿಫ್ಟ್ ಬಾಕ್ಸ್‌ಗಳಲ್ಲಿ ಪ್ಯಾಕ್ ಮಾಡಿ ಗ್ರಾಹಕರಿಗೆ ತಲುಪಿಸುತ್ತಿದ್ದರು ಮತ್ತು ಪ್ರತಿಯಾಗಿ ಅದೇ ಬ್ಯಾಕ್ಸ್​ಗಳಲ್ಲಿ ಹಣ ಪಡೆಯುತ್ತಿದ್ದರು. ಆರೋಪಿಗಳು ಆಫ್ರಿಕನ್ ಪ್ರಜೆಗಳಿಂದ ಡ್ರಗ್ಸ್ ಪಡೆದು ನಗರದ ದಂಧೆ ನಡೆಸುತ್ತಿದ್ದರು. ಕಳೆದ ಕೆಲವು ತಿಂಗಳ ಹಿಂದೆ, ಸಿಸಿಬಿ ಅಧಿಕಾರಿಗಳು, ಸುಳಿವು ಆಧರಿಸಿ, ಅವರನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಮಾದಕ ವಸ್ತುಗಳ ವಿರುದ್ಧ ಒಂದು ತಿಂಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರ ಸೇ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 7 ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಎದುರಿಗಿರುವವರು ನಗ್ನವಾಗಿ ಕಾಣುವ ನಕಲಿ ಕನ್ನಡಕ ಮಾರಾಟ, ಬೆಂಗಳೂರಿನ ನಾಲ್ವರು ಅರೆಸ್ಟ್

ಮತ್ತೊಂದು ಘಟನೆಯಲ್ಲಿ, ಸಿಸಿಬಿ ಅಧಿಕಾರಿಗಳು ವಿಮಾ ಕಂಪನಿಯ ಕಾರ್ಯನಿರ್ವಾಹಕನನ್ನು ಡ್ರಗ್ಸ್ ದಂಧೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿಸಿದ್ದಾರೆ. ಆರೋಪಿಯು ಪೊಲೀಸರ ಕಣ್ತಪ್ಪಿಸಿ ಕಾರಿನಲ್ಲಿ ಹ್ಯಾಶಿಶ್ ಆಯಿಲ್​ಯನ್ನು ಸಾಗಾಟ ಮಾಡುತ್ತಿದ್ದನು. ಆರೋಪಿಯು ವಿಶಾಖಪಟ್ಟಣಂದಿಂದ ಮಾದಕವಸ್ತುಗಳನ್ನು ತರಸಿಕೊಳ್ಳುತ್ತಿದ್ದನು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನು ಪೊಲೀಸರು ಕಳೆದ ಕೆಲವು ತಿಂಗಳಿನಿಂದ ನಗರದಲ್ಲಿ ಕಾರ್ಯಾಚರಣೆ ನಡೆಸಿದ್ದು, 19 ಮಂದಿಯನ್ನು ಬಂಧಿಸಿದ್ದಾರೆ. ಇವರಲ್ಲಿ 10 ಪೆಡ್ಲರ್‌ಗಳು ಕೇರಳದವರಾಗಿದ್ದರೇ, ಉಳಿದವರಲ್ಲಿ ಇಬ್ಬರು ನೈಜೀರಿಯಾ, ಐವರು ಕೋಸ್ಟ್‌ನವರಾಗಿದ್ದಾರೆ. ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶ ರಾಜ್ಯದ ತಲಾ ಒಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಅಧಿಕಾರಿಗಳು 7.06 ಕೋಟಿ ರೂ. ಮೌಲ್ಯದ  6 ಕೆಜಿ ಡ್ರಗ್ಸ್, ಹ್ಯಾಶಿಶ್ ಆಯಿಲ್, 51.8 ಕೆಜಿ ಗಾಂಜಾ, 140 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ಗಳು, 236 ಎಕ್‌ಸ್ಟಸಿ ಮಾತ್ರೆಗಳು, 34 ಎಲ್‌ಎಸ್‌ಡಿ ಸ್ಟ್ರಿಪ್‌ಗಳು ಮತ್ತು 23 ಗ್ರಾಂ ಕೊಕೇನ್​​ಅನ್ನು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:53 am, Fri, 12 May 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್