ಮಂಡ್ಯ: ಕೆರೆಯಲ್ಲಿ ಪತ್ತೆಯಾಯ್ತು ಜೋಡಿಗಳ ಶವ; ಕೊಲೆಯೋ, ಆತ್ಮಹತ್ಯೆಯೋ! ತನಿಖೆಗೆ ಸ್ಥಳೀಯರ ಒತ್ತಾಯ

ಪಾಂಡವಪುರದ ಹಿರೋಡೆ ಕೆರೆಯಲ್ಲಿ ಬೆಳ್ಳಂ ಬೆಳಗ್ಗೆ ಜೋಡಿಗಳ ಶವ ಪತ್ತೆಯಾಗಿದ್ದು, ಜನರು ಆಂತಕಕ್ಕೆ ಒಳಗಾಗುವಂತೆ ಮಾಡಿದೆ. ತಬ್ಬಿಕೊಂಡು ಇರುವ ರೀತಿಯಲ್ಲಿ ಕೆರೆಯ ಕೆಸರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಂದು ಕಡೆ ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದ್ರೆ, ಮತ್ತೊಂದು ಕಡೆ ಕೊಲೆಯೋ ಎಂಬ ಅನುಮಾನ ಮೂಡಿದೆ.

ಮಂಡ್ಯ: ಕೆರೆಯಲ್ಲಿ ಪತ್ತೆಯಾಯ್ತು ಜೋಡಿಗಳ ಶವ; ಕೊಲೆಯೋ, ಆತ್ಮಹತ್ಯೆಯೋ! ತನಿಖೆಗೆ ಸ್ಥಳೀಯರ ಒತ್ತಾಯ
ಪಾಂಡವಪುರ
Follow us
ಪ್ರಶಾಂತ್​ ಬಿ.
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 16, 2024 | 7:56 PM

ಮಂಡ್ಯ, ಫೆ.16: ಜಿಲ್ಲೆಯ ಪಾಂಡವಪುರ(Pandavapura)ದ ಹಿರೋಡೆ ಕೆರೆಯಲ್ಲಿ ಓರ್ವ ಮಹಿಳೆ ಹಾಗೂ ಪುರುಷನ ಮೃತದೇಹ ಪತ್ತೆಯಾಗಿದ್ದು, ಹಲವು ರೀತಿಯ ಅನುಮಾನ, ಆಂತಕಕ್ಕೆ ಕಾರಣವಾಗಿದೆ. ನಗರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಈ ಕೆರೆ ಸುತ್ತಲು ಬೆಟ್ಟ-ಗುಡ್ಡಗಳು ಆವರಿಸಿವೆ. ಕೆಲವು ಮೀನುಗಾರರು ಇಲ್ಲಿ ಪ್ರತಿನಿತ್ಯ ಮೀನು ಹಿಡಿಯುತ್ತಾರೆ. ಅದೇ ಈ ರೀತಿ ಇಂದು ಸಹ ಮೀನು ಹಿಡಿಯಲು ತೆರಳಿದಂತಹ ಸಂದರ್ಭದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳ ಮೃತದೇಹ ಪತ್ತೆ ಆಗಿದೆ.

ಇನ್ನು ಒಬ್ಬ ಪುರುಷ ಹಾಗೂ ಒಬ್ಬ ಮಹಿಳೆ ಇಬ್ಬರು ತಬ್ಬಿಕೊಂಡು ಇರುವ ರೀತಿಯಲ್ಲಿ ಕೆರೆಯ ಕೆಸರಿನಲ್ಲಿ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಒಂದು ಕಡೆ ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದ್ರೆ, ಮತ್ತೊಂದು ಕಡೆ ಕೊಲೆಯೋ ಎಂಬ ಅನುಮಾನ ಮೂಡಿದೆ. ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಇಬ್ಬರು ವ್ಯಕ್ತಿಗಳ ಮೃತದೇಹ ಪತ್ತೆಯಾಗಿರುವುದು ಸಹಜವಾಗಿಯೇ ನಗರ ಪ್ರದೇಶದ ಜನರ ಆಂತಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಮಂಗಳೂರು: ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಪತ್ನಿಯ ಕತ್ತು ಹಿಸುಕಿ ಬಾವಿಗೆ ಎಸೆದ ಪತಿ

ಇನ್ನು ವಿಷಯ ತಿಳಿಯುತ್ತಿದ್ದಂತೆ ಪಾಂಡವಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮೃತದೇಹಗಳನ್ನ ಕೆರೆಯಿಂದ ಹೊರ ತೆಗೆದಿದ್ದಾರೆ. ಅಲ್ಲದೆ ಹೆಚ್ಚಿನ ತನಿಖೆಗಾಗಿ ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ನಂತರ ಸತ್ಯಾಸತ್ಯತೆ ತಿಳಿಯಲಿದ್ದಾರೆ. ಇನ್ನು ಮೃತದೇಹ ಪತ್ತೆಗಾಗಿ ರಾಜ್ಯದಲ್ಲಿ ಕಾಣೆಯಾಗಿರುವರ ಬಗ್ಗೆ ತಿಳಿಯಲು ಪೊಲೀಸರು ಮುಂದಾಗಿದ್ದಾರೆ. ಸ್ಥಳೀಯರು ಕೂಡ ಈ ಬಗ್ಗೆ ಕೂಲಂಕುಷ ತನಿಖೆ ನಡೆಸುವಂತೆ ಒತ್ತಾಯ ಮಾಡಿದ್ದಾರೆ. ಒಟ್ಟಾರೆ ಕೆರೆಯಲ್ಲಿ ಪತ್ತೆಯಾಗಿರೋ ಇಬ್ಬರ ಮೃತದೇಹ ಹಲವು ಅನುಮಾನಕ್ಕೆ ಕಾರಣವಾಗಿದ್ದು, ಪೊಲೀಸರ ತನಿಖೆಯಿಂದ ಸತ್ಯಸತ್ಯತೆ ಹೊರಬೇಕಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ