ಸುಪಾರಿ ನೀಡಿ ಹತ್ಯೆ ಮಾಡಿರುವ ಆರೋಪ, ಮೃತದೇಹವಿಟ್ಟು ಪ್ರತಿಭಟನೆ
ಚಿಕ್ಕಮಗಳೂರು: ಸುಪಾರಿ ನೀಡಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಮತ್ತು ಸಾರ್ವಜನಿಕರು ಮೃತದೇಹವಿಟ್ಟು ಪ್ರತಿಭಟನೆ ಮಾಡುತ್ತಿರುವ ಘಟನೆ ಬಾಳೆಹೊನ್ನೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ರಿಚಾರ್ಡ್ ನರೋನಾ(48) ಮೃತ ದುರ್ದೈವಿ. ರಿಚರ್ಡ್ ಪತ್ನಿ ಜಯಮಾಲ ಈ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದ್ದು, ಸಾರ್ವಜನಿಕರು ಜಯಮಾಲಳನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದಾರೆ. ಶಾಂತಿಪುರದಲ್ಲಿ ರಸ್ತೆ ತಡೆದು ಆಕ್ರೋಶ ಹೊರ ಹಾಕಿದ್ದಾರೆ. ಹದಿನೈದು ದಿನಗಳ ಹಿಂದೆ ಮೃತ ರಿಚರ್ಡ್ ಮೇಲೆ ಮೂವರು ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದರು. ಪತ್ನಿ […]
ಚಿಕ್ಕಮಗಳೂರು: ಸುಪಾರಿ ನೀಡಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಮತ್ತು ಸಾರ್ವಜನಿಕರು ಮೃತದೇಹವಿಟ್ಟು ಪ್ರತಿಭಟನೆ ಮಾಡುತ್ತಿರುವ ಘಟನೆ ಬಾಳೆಹೊನ್ನೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ರಿಚಾರ್ಡ್ ನರೋನಾ(48) ಮೃತ ದುರ್ದೈವಿ. ರಿಚರ್ಡ್ ಪತ್ನಿ ಜಯಮಾಲ ಈ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬರುತ್ತಿದ್ದು, ಸಾರ್ವಜನಿಕರು ಜಯಮಾಲಳನ್ನು ಬಂಧಿಸುವಂತೆ ಪಟ್ಟು ಹಿಡಿದಿದ್ದಾರೆ. ಶಾಂತಿಪುರದಲ್ಲಿ ರಸ್ತೆ ತಡೆದು ಆಕ್ರೋಶ ಹೊರ ಹಾಕಿದ್ದಾರೆ.
ಹದಿನೈದು ದಿನಗಳ ಹಿಂದೆ ಮೃತ ರಿಚರ್ಡ್ ಮೇಲೆ ಮೂವರು ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದರು. ಪತ್ನಿ ಜಯಮಾಲಾ ದುಷ್ಕರ್ಮಿಗಳನ್ನು ಬಿಟ್ಟು ಕೊಲೆ ಮಾಡಿಸಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು, ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.