AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯ ಭೀಕರ ಕೊಲೆ

ಪ್ರತ್ಯೇಕ ಘಟನೆ: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ತಾಲೂಕಿನ ಕೆಸರಟಗಿ ಗ್ರಾಮದ ಬಳಿ ನಡೆದಿದೆ. ಪತಿ, ಪತ್ನಿಗೆ ಕಟ್ಟಿಗೆಯಿಂದ ಹೊಡೆದು ಕೊಲೆಮಾಡಿ ಶವ ಸುಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಆರಕೇರಿ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯ ಭೀಕರ ಕೊಲೆ
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ವಿವೇಕ ಬಿರಾದಾರ|

Updated on:Sep 08, 2024 | 1:44 PM

Share

ಕಲಬುರಗಿ, ಸೆಪ್ಟೆಂಬರ್​ 08: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ (Kalaburagi) ತಾಲೂಕಿನ ಕೆಸರಟಗಿ ಗ್ರಾಮದ ಬಳಿ ನಡೆದಿದೆ. ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಕಪಿಲ್ ಗಾಯಕ್ವಾಡ್ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ, ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರೀಡ್ಜ್ ಬಳಿ ಕಪಿಲ್​ ಗಾಯಕ್ವಾಡ್​ ಅವರನ್ನು ಅಡ್ಡಗಟ್ಟಿ ಪತ್ನಿಯ ಮುಂದೆ ಹತ್ಯೆ ಮಾಡಲಾಗಿದೆ.

ಕೊಲೆ ಹಿಂದೆ ಕಪಿಲ್ ಗಾಯಕ್ವಾಡ್ ಪತ್ನಿ ಭಾಗ್ಯ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ತನೀಖೆ ನಡೆಸುವಂತೆ ಕುಟುಂಬಸ್ಥರು ಆಗ್ತಹಿಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನ: ಖದೀಮನನ್ನು ನಗ್ನಗೊಳಿಸಿ ಥಳಿಸಿದ ಯುವಕರು

ಪತ್ನಿಯನ್ನು ಕೊಂದು ಶವ ಸುಟ್ಟ ಪತಿ

ಕೊಪ್ಪಳ: ಪತಿ, ಪತ್ನಿಗೆ ಕಟ್ಟಿಗೆಯಿಂದ ಹೊಡೆದು ಕೊಲೆಮಾಡಿ ಶವ ಸುಟ್ಟಿರುವ ಘಟನೆ ಕುಕನೂರು ತಾಲೂಕಿನ ಆರಕೇರಿ ಗ್ರಾಮದಲ್ಲಿ ನಡೆದಿದೆ. ಶನಿವಾರ ರಾತ್ರಿ ಘಟನೆ ನಡೆದಿದೆ. ಗೀತಾ ಬಾವಿಕಟ್ಟಿ (30) ಮೃತ ದುರ್ದೈವಿ. ದೇವರಡ್ಡೆಪ್ಪ ಬಾವಿಕಟ್ಟಿ ಕೊಲೆ ಮಾಡಿದ ಆರೋಪಿ. ಪತಿ ದೇವರಡ್ಡೆಪ್ಪ ಬಾವಿಕಟ್ಟಿ ಪತ್ನಿ ಗೀತಾ ಮೇಲೆ ಸದಾ ಸಂಶಯ ವ್ಯಕ್ತಪಡಿಸುತ್ತಿದ್ದನು ಎಂಬ ಆರೋಪ ಕೇಳಿಬಂದಿದೆ.

ಗೀತಾ ಬಾವಿಕಟ್ಟಿ ಶನಿವಾರ ರಾತ್ರಿ ಮನೆಯಲ್ಲಿ ಮಲಗಿದ್ದ ದೇವರಡ್ಡೆಪ್ಪ ಬಾವಿಕಟ್ಟಿ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತನ್ನ ತಂದೆ ಮಲ್ಲಾರಡ್ಡೆಪ್ಪನ ಜೊತೆ ಸೇರಿ ಶವ ಸುಟ್ಟು ಹಾಕಿದ್ದಾನೆ. ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:33 pm, Sun, 8 September 24

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More