ಕಲಬುರಗಿ, ಸೆಪ್ಟೆಂಬರ್ 08: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ (Kalaburagi) ತಾಲೂಕಿನ ಕೆಸರಟಗಿ ಗ್ರಾಮದ ಬಳಿ ನಡೆದಿದೆ. ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಕಪಿಲ್ ಗಾಯಕ್ವಾಡ್ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ, ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರೀಡ್ಜ್ ಬಳಿ ಕಪಿಲ್ ಗಾಯಕ್ವಾಡ್ ಅವರನ್ನು ಅಡ್ಡಗಟ್ಟಿ ಪತ್ನಿಯ ಮುಂದೆ ಹತ್ಯೆ ಮಾಡಲಾಗಿದೆ.
ಕೊಲೆ ಹಿಂದೆ ಕಪಿಲ್ ಗಾಯಕ್ವಾಡ್ ಪತ್ನಿ ಭಾಗ್ಯ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈ ಬಗ್ಗೆ ಸೂಕ್ತ ತನೀಖೆ ನಡೆಸುವಂತೆ ಕುಟುಂಬಸ್ಥರು ಆಗ್ತಹಿಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನ: ಖದೀಮನನ್ನು ನಗ್ನಗೊಳಿಸಿ ಥಳಿಸಿದ ಯುವಕರು
ಕೊಪ್ಪಳ: ಪತಿ, ಪತ್ನಿಗೆ ಕಟ್ಟಿಗೆಯಿಂದ ಹೊಡೆದು ಕೊಲೆಮಾಡಿ ಶವ ಸುಟ್ಟಿರುವ ಘಟನೆ ಕುಕನೂರು ತಾಲೂಕಿನ ಆರಕೇರಿ ಗ್ರಾಮದಲ್ಲಿ ನಡೆದಿದೆ. ಶನಿವಾರ ರಾತ್ರಿ ಘಟನೆ ನಡೆದಿದೆ. ಗೀತಾ ಬಾವಿಕಟ್ಟಿ (30) ಮೃತ ದುರ್ದೈವಿ. ದೇವರಡ್ಡೆಪ್ಪ ಬಾವಿಕಟ್ಟಿ ಕೊಲೆ ಮಾಡಿದ ಆರೋಪಿ. ಪತಿ ದೇವರಡ್ಡೆಪ್ಪ ಬಾವಿಕಟ್ಟಿ ಪತ್ನಿ ಗೀತಾ ಮೇಲೆ ಸದಾ ಸಂಶಯ ವ್ಯಕ್ತಪಡಿಸುತ್ತಿದ್ದನು ಎಂಬ ಆರೋಪ ಕೇಳಿಬಂದಿದೆ.
ಗೀತಾ ಬಾವಿಕಟ್ಟಿ ಶನಿವಾರ ರಾತ್ರಿ ಮನೆಯಲ್ಲಿ ಮಲಗಿದ್ದ ದೇವರಡ್ಡೆಪ್ಪ ಬಾವಿಕಟ್ಟಿ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತನ್ನ ತಂದೆ ಮಲ್ಲಾರಡ್ಡೆಪ್ಪನ ಜೊತೆ ಸೇರಿ ಶವ ಸುಟ್ಟು ಹಾಕಿದ್ದಾನೆ. ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:33 pm, Sun, 8 September 24