ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ತಲ್ವಾರ್​ನಿಂದ ಹಲ್ಲೆ

ಇತ್ತೀಚಿಗೆ ಕಲಬುರಗಿಯಲ್ಲಿ ಓರ್ವ ವಕೀಲನನ್ನು ದುಷ್ಕರ್ಮಿಗಳು ಹಾಡಹಗಲೆ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಕಲಬುರಗಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಓರ್ವ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಮೂವರು ಹಲ್ಲೆ ಮಾಡಿದ್ದಾರೆ.

ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ತಲ್ವಾರ್​ನಿಂದ ಹಲ್ಲೆ
ಧೀರಜ್ ಹಲ್ಲೆಗೊಳಗಾದ ವ್ಯಕ್ತಿ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ

Updated on: Jul 02, 2024 | 8:00 AM

ಕಲಬುರಗಿ, ಜುಲೈ 02: ಸಿನಿಮೀಯ ಶೈಲಿಯಲ್ಲಿ ಬೆನ್ನತ್ತಿ ಬಂದು ಕಲಬುರಗಿ ಜಿಲ್ಲಾ ಕೋರ್ಟ್ (Kalaburagi District Court) ಆವರಣದಲ್ಲೇ ವ್ಯಕ್ತಿಯ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಧೀರಜ್ ಹಲ್ಲೆಗೊಳಗಾದ ವ್ಯಕ್ತಿ. ಪ್ರಶಾಂತ್ ಪಾಟೀಲ್ (20), ವೀರೇಶ್ ಪಾಟೀಲ್ (19), ರಾಮು ಪಾಟೀಲ್ (38) ಹಲ್ಲೆ ಮಾಡಿದ ಆರೋಪಿಗಳು. ತಲ್ವಾರ್ ದಾಳಿಯಿಂದ ಧೀರಜ್‌ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ಮಾಡುತ್ತಿದ್ದ ವೇಳೆ ಕೋರ್ಟ್​​ ಆವರಣದಲ್ಲಿದ್ದ ಸಾರ್ವಜನಿಕರು ಮತ್ತು ವಕೀಲರು ಆರೋಪಿಗಳನ್ನು ತಡೆದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ವಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್​ಪಿ ಕಚೇರಿ ಆವರಣದಲ್ಲೇ ಪತ್ನಿಗೆ ಚಾಕಿವಿನಿಂದ ಇರಿದ ಪತಿ

ಸೋಮವಾರ (ಜು.02) ಹಾಸನ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೇ ಪತ್ನಿಗೆ ಪತಿ, ಪೊಲೀಸ್​ ಪೇದೆ ಲೋಕನಾಥ್​ ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು. ಮಮತಾ ಮೃತ ದುರ್ದೈವಿ. ಮಮತಾ ಮತ್ತು ಲೋಕನಾಥ್​ 17 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದವರು. ಆದರೆ ದಂಪತಿ ಮಧ್ಯೆ ಕಳೆದ ನಾಲ್ಕು ದಿನಗಳಿಂದ ಜಗಳ ನಡೆಯುತ್ತಿತ್ತು.

ಇದನ್ನೂ ಓದಿ: ಸಮ್ಮಿಲನಕ್ಕೆ ಆಹ್ವಾನಿಸಿ ಗೆಳೆಯನ ಮರ್ಮಾಂಗವನ್ನೇ ಕತ್ತರಿಸಿದ ಗೆಳತಿ, ಕಾರಣ ಕೇಳಿ ಪೊಲೀಸರೇ ದಂಗು!

ನಿತ್ಯ ಗಲಾಟೆಯಿಂದ ರೋಸಿ ಹೋಗಿದ್ದ ಮಮತಾ ಪತಿ ಲೋಕನಾಥ್​ ವಿರುದ್ಧ ದೂರು ನೀಡಲು ಎಸ್​ಪಿ ಕಚೇರಿಗೆ ಆಗಮಿಸುತ್ತಿದ್ದರು. ಇದನ್ನು ತಿಳಿದ, ಪೊಲೀಸ್​ ಪೇದೆ ಲೋಕನಾಥ್​ ಪತ್ನಿ ಮಮತಾರನ್ನು ತಡೆದಿದ್ದಾನೆ. ಬಳಿಕ ಇಬ್ಬರ ನಡುವೆ ಕೆಲ ಕಾಲ ಮಾತುಕತೆ ನಡೆದಿತ್ತು. ನಂತರ, ಲೋಕನಾಥ್​ ಪತ್ನಿ ಮಮತಾರಿಗೆ ಚಾಕುವಿನಿಂದ ಇರಿದಿದ್ದನು. ಕೂಡಲೆ, ಸ್ಥಳದಲ್ಲಿದ್ದ ಪೊಲೀಸರು ಲೋಕನಾಥ್​ನನ್ನು ತಡೆದಿದು, ಬಂಧಿಸಿದ್ದರು.

ಬಳಿಕ, ಮಮತಾರನ್ನು ಹಾಸನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ