Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ದಂಪತಿ ಹತ್ಯೆ ಕೇಸ್ ಬೇಧಿಸಿದ ಪೊಲೀಸರು: ಅಳಿಯ ಮನೆ ತೊಳಿಯ ಲಾಕ್

ಚಿತ್ರದುರ್ಗದ ಬೊಮ್ಮಕ್ಕನಹಳ್ಳಿಯಲ್ಲಿ 38 ದಿನಗಳ ಹಿಂದೆ ನಡೆದಿದ್ದ ಹನುಮಂತಪ್ಪ ಮತ್ತು ತಿಪ್ಪಮ್ಮ ದಂಪತಿಯ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಅವರ ಅಳಿಯ ಮಂಜುನಾಥ್ ಪ್ರಮುಖ ಆರೋಪಿಯಾಗಿದ್ದು, ತೆಲಂಗಾಣದಿಂದ ಬಂಧನಕ್ಕೊಳಗಾಗಿದ್ದಾನೆ. ಪೊಲೀಸರ ತೀವ್ರ ಹುಡುಕಾಟದ ನಂತರ ಆತನನ್ನು ಬಂಧಿಸಲಾಗಿದೆ.

ಚಿತ್ರದುರ್ಗದಲ್ಲಿ ದಂಪತಿ ಹತ್ಯೆ ಕೇಸ್ ಬೇಧಿಸಿದ ಪೊಲೀಸರು: ಅಳಿಯ ಮನೆ ತೊಳಿಯ ಲಾಕ್
ಚಿತ್ರದುರ್ಗದಲ್ಲಿ ದಂಪತಿ ಹತ್ಯೆ ಕೇಸ್ ಬೇಧಿಸಿದ ಪೊಲೀಸರು: ಅಳಿಯ ಮನೆ ತೊಳಿಯ ಲಾಕ್
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 28, 2024 | 8:46 PM

ಚಿತ್ರದುರ್ಗ, ಅಕ್ಟೋಬರ್​ 28: ಆ ದಂಪತಿಯ ಕೊಲೆಯಾಗಿ ಬರೋಬ್ಬರಿ 38 ದಿನಗಳೇ ಕಳೆದಿವೆ. ಸದ್ಯ ಪೊಲೀಸರು ಕೊಲೆ ಪ್ರಕರಣವನ್ನು ಬೇಧಿಸಿದ್ದಾರೆ. ಆ ಮೂಲಕ ಅತ್ತೆ-ಮಾವನನ್ನು ಕೊಲೆ ಮಾಡಿದ್ದ ಅಳಿಯ (Son-in-Law) ಇದೀಗ ಪೊಲೀಸರ ಅತಿಥಿ ಆಗಿದ್ದಾನೆ. ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಮೀನಿಗೆ ಹೋಗಿದ್ದ ದಂಪತಿಯ ಕೊಲೆ

ಚಿತ್ರದುರ್ಗ ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಸೆ. 19ರ ಸಂಜೆ ನಡೆಯಬಾರದ ಘಟನೆಯೊಂದು ನಡೆದು ಹೋಗಿತ್ತು. ಜಮೀನಿಗೆ ಹೋಗಿದ್ದ ಹನುಮಂತಪ್ಪ-ತಿಪ್ಪಮ್ಮ ದಂಪತಿಯನ್ನು ಸಂಜೆಗತ್ತಲಲ್ಲಿ ರಣಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಆರಂಭದಲ್ಲಿ ಯಾವುದೋ ಕಾಡು ಪ್ರಾಣಿಯ ದಾಳಿ ಎಂದು ಅಂದಾಜಿಸಲಾಗಿತ್ತು. ಆದರೆ ಪ್ರಕರಣದ ಬಳಿಕ ಹನಮಂತಪ್ಪ -ತಿಪ್ಪಮ್ಮ ದಂಪತಿಯ ಪುತ್ರಿ ಹರ್ಷಿತಾಳ ಪತಿ ಮಂಜುನಾಥ್ ನಾಪತ್ತೆ ಆಗಿದ್ದ. ಹರ್ಷಿತಾ ತನ್ನ ಪತಿಯ ಜತೆ ಗಲಾಟೆ ಮಾಡಿಕೊಂಡು ಬಂದು ತವರು ಸೇರಿದ್ದಳು. ಹೀಗಾಗಿ, ಅದೇ ದ್ವೇಷದಿಂದ ಮಂಜುನಾಥ್ ಮತ್ತು ಇತರರು ಸೇರಿ ಹತ್ಯೆ ಮಾಡಿದ್ದು ಪಕ್ಕಾ ಆಗಿತ್ತು.

ಇದನ್ನೂ ಓದಿ: ಅತ್ತಿಗೆ ಮೇಲೆ ಸ್ನೇಹಿತನ ಕಣ್ಣು: ವಾರ್ನ್​ ಮಾಡಿದ್ದಕ್ಕೆ ಹತ್ಯೆಗೈದ!

ಮಂಜುನಾಥ್​ನ ಸಹೋದರ ರಘು, ತಂದೆ ಚಂದ್ರಪ್ಪ, ಸಂಬಂಧಿ ಮಲ್ಲಿಕಾರ್ಜುನನ್ನು ಪೊಲೀಸರು ಘಟನೆ ನಡೆದ ಮರುದಿನವೇ ಬಂಧಿಸಿದ್ದರು. ಆದರೆ ಚಾಲಾಕಿ ಮಂಜುನಾಥ್ ಮಾತ್ರ ನಾಪತ್ತೆ ಆಗಿದ್ದ. ಏರ್ ಟೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಮೊಬೈಲ್ ಟ್ರ್ಯಾಕ್ ಬಗ್ಗೆ ತಿಳಿದುಕೊಂಡಿದ್ದನು. ಹೀಗಾಗಿ, ತನ್ನ ಮೊಬೈಲ್ ಎಸೆದು ತೆಲಂಗಾಣಕ್ಕೆ ಎಸ್ಕೇಪ್ ಆಗಿದ್ದನು. ಹೀಗಾಗಿ ಪೊಲೀಸರಿಗೆ ಆರೋಪಿಯ ಪತ್ತೆ ಹಚ್ಚುವುದು ಸಾವಾಲಾಗಿ ಪರಿಣಮಿಸಿತ್ತು. ಎಸ್ಪಿ ರಂಜಿತ್ ಬಂಡಾರು ಮೂರು ತಂಡಗಳನ್ನು ರಚಿಸಿ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು.

ಡಿವೈಎಸ್ಪಿ ದಿನಕರ್ ನೇತೃತ್ವದ ಪಿಎಸ್​ಐ ಸುರೇಶ್ ಟೀಮ್ ಮಂಜುನಾಥ್ ಸ್ನೇಹಿತರ ಜಾಡು ಹಿಡಿದು ಹೊರಟಿತ್ತು. ಅಪರಿಚಿತ ವಾಟ್ಸಪ್​ ಕರೆಗಳ ಮೂಲಕ ಸ್ನೇಹಿತರನ್ನು ಸಂಪರ್ಕಿಸಿದ್ದ ಮಂಜುನಾಥ್​ ತೆಲಂಗಾಣದ ವಿಜಯವಾಡ ಜಿಲ್ಲೆಯ ಭದ್ರಾದ್ರಿ ಕೊತ್ತಗೊಡೆಂನಲ್ಲಿರುವ ಸುಳಿವು ಸಿಕ್ಕಿತ್ತು. ಹೀಗಾಗಿ, ಪೊಲೀಸರು ಚಾಲಾಕಿ ಆರೋಪಿ ಮಂಜುನಾಥನನ್ನು ತೆಲಂಗಾಣದಿಂದ ಬಂಧಿಸಿ ತಂದಿದ್ದಾರೆ.

ಇನ್ನು ಮೃತರ ಕುಟುಂಬಸ್ಥರು ಕಳೆದ 39ದಿನಗಳಲ್ಲಿ ಅನೇಕ ಸಲ ಎಸ್ಪಿ ಕಚೇರಿಗೆ ಆಗಮಿಸಿ ಪ್ರಮುಖ ಆರೋಪಿ ಮಂಜುನಾಥ್​ ಬಂಧನಕ್ಕೆ ಮನವಿ ಮಾಡಿದ್ದರು. ಸದ್ಯ ಆರೋಪಿ ಮಂಜುನಾಥ್ ಬಂಧನವಾಗಿದ್ದು ಮೃತರ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಮಂಜುನಾಥ್-ಹರ್ಷಿತಾರ ಇಬ್ಬರು ಮಕ್ಕಳು ಮತ್ತು ಹನುಮಂತಪ್ಪ-ತಿಪ್ಪಮ್ಮ ಕುಟುಂಬ ಅನಾಥರಾಗಿದ್ದಾರೆ. ಹೀಗಾಗಿ, ಆರೋಪಿ ಮಂಜುನಾಥ್​ಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮೃತರ ಸಂಬಂಧಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಅನ್ನದಲ್ಲಿ ವಿಷ ಬೆರೆಸಿ ಗಂಡನಿಗೆ ಕೈ ತುತ್ತು ತಿನ್ನಿಸಿ ಕೊಂದ ಪತ್ನಿ, ಆ ವಿಷ ಯಾವುದು ಗೊತ್ತಾ?

ಒಟ್ಟಾರೆಯಾಗಿ ಚಿತ್ರದುರ್ಗದ ಬೊಮ್ಮಕ್ಕನಹಳ್ಳಿಯಲ್ಲಿ ನಡೆದಿದ್ದ ದಂಪತಿಯ ಬರ್ಬರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮೊಬೈಲ್ ಬಳಸದೇ ಉಳಿದರೆ ತಪ್ಪಿಸಿಕೊಳ್ಳಬಹುದೆಂದು ಭಾವಿಸಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅತ್ತೆ-ಮಾವನ ಕೊಂದ ಅಳಿಯನಿಗೆ ತಕ್ಕ ಶಿಕ್ಷೆ ಆಗಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ