ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಮಾರಾಟ: ಮೂವರ ಅರೆಸ್ಟ್

ಬೆಂಗಳೂರು: ರಾಜಧಾನಿಯಲ್ಲಿ ಪೊಲೀಸರ ಗಾಂಜಾ ಬೇಟೆ ಮುಂದುವರೆದಿದೆ. ಯುವಕರಿಗೆ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮಬಂಗಾಳ ಮೂಲದ ಮೊಹಮ್ಮದ್ ಆಲಂಗೀರ್, ಮೊಹಮ್ಮದ್ ರಿಪುನ್, ಮೋಹರ್ ಅಲಿ ಬಂಧಿತರು. ಪಶ್ಚಿಮ ಬಂಗಾಳದ ರೈತರಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಬೇಗೂರು ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದು ಬೆಳಕಿಗೆ ಬಂದಿದೆ. ನಂತರ ಆರೋಪಿಗಳ ಬಳಿಯಿದ್ದ 11 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಮಾರಾಟ: ಮೂವರ ಅರೆಸ್ಟ್
ಆಯೇಷಾ ಬಾನು

Updated on: Sep 01, 2020 | 10:45 AM

ಬೆಂಗಳೂರು: ರಾಜಧಾನಿಯಲ್ಲಿ ಪೊಲೀಸರ ಗಾಂಜಾ ಬೇಟೆ ಮುಂದುವರೆದಿದೆ. ಯುವಕರಿಗೆ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮಬಂಗಾಳ ಮೂಲದ ಮೊಹಮ್ಮದ್ ಆಲಂಗೀರ್, ಮೊಹಮ್ಮದ್ ರಿಪುನ್, ಮೋಹರ್ ಅಲಿ ಬಂಧಿತರು.

ಪಶ್ಚಿಮ ಬಂಗಾಳದ ರೈತರಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಬೇಗೂರು ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದು ಬೆಳಕಿಗೆ ಬಂದಿದೆ. ನಂತರ ಆರೋಪಿಗಳ ಬಳಿಯಿದ್ದ 11 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ.

Published On - 7:39 am, Tue, 1 September 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us