AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆಗಳ ಮೂಲಕ ಜೈಲಿನಲ್ಲಿರುವವರಿಗೆ ಜಾಮೀನು ನೀಡುವುದೇ ಉದ್ಯೋಗ ಮಾಡಿಕೊಂಡಿದ್ದವರ ಬಂಧನ

ಎಲ್ಲ ನಕಲಿ ದಾಖಲೆಗಳನ್ನೂ ನಾಜೂಕಾಗಿ ತಯಾರಿಸಿ, ಆರೋಪಿಗಳನ್ನು ಜೈಲಿನಿಂದ ಕರೆದುಕೊಂಡು ಬಂದ ಬಳಿಕ, ಅವರಿಂದ ಇಂತಿಷ್ಟು ಎಂದು ಹಣ ಪಡೆಯುತ್ತಿದ್ದರು. 9 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನಕಲಿ ದಾಖಲೆಗಳ ಮೂಲಕ ಜೈಲಿನಲ್ಲಿರುವವರಿಗೆ ಜಾಮೀನು ನೀಡುವುದೇ ಉದ್ಯೋಗ ಮಾಡಿಕೊಂಡಿದ್ದವರ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 23, 2022 | 5:17 PM

Share

ನಕಲಿ ದಾಖಲೆ ಸೃಷ್ಟಿ ಮಾಡಿ, ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ಕೊಡುತ್ತಿದ್ದ ಗ್ಯಾಂಗ್​ನ್ನು ಕೆ.ಆರ್​.ಮಾರ್ಕೆಟ್​ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಭೇದಿಸಿದ ಪೊಲೀಸರು ಪುಟ್ಟಸ್ವಾಮಿ, ನಸ್ರೀನ್, ರಾಜಣ್ಣ, ಮಂಜುನಾಥ್, ಆಂಜಿನಪ್ಪ, ಕುಮಾರ್, ಚಂದ್ರಗೌಡ, ಸೊಣ್ಣೆಗೌಡ ಮತ್ತು ಟಿ.ಎಂ. ರಾಜಪ್ಪ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಜೈಲಿನಲ್ಲಿರುವ ಯಾವುದೇ ಆರೋಪಿಗೆ ಬೇಕಾದರೂ ಇವರು ಜಾಮೀನು ಕೊಡಿಸಲು ಸಿದ್ಧರಿರುತ್ತಿದ್ದರು. ಅದಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿ, ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದರು. ರೈತರ ಹೆಸರಿನಲ್ಲಿ ಇರುವ ಆಸ್ತಿಗಳ ದಾಖಲೆಗಳನ್ನು ಎಚ್ಚರಿಕೆಯಿಂದ ಸಂಗ್ರಹಿಸುವ ಜತೆ, ಪ್ರತಿಷ್ಠಿತ ಕಂಪನಿಗಳ ಹೆಸರಲ್ಲೂ ನಕಲಿ ದಾಖಲೆ ಸೃಷ್ಟಿಸುತ್ತಿದ್ದರು.

ಎಲ್ಲ ನಕಲಿ ದಾಖಲೆಗಳನ್ನೂ ನಾಜೂಕಾಗಿ ತಯಾರಿಸಿ, ಆರೋಪಿಗಳನ್ನು ಜೈಲಿನಿಂದ ಕರೆದುಕೊಂಡು ಬಂದ ಬಳಿಕ, ಅವರಿಂದ ಇಂತಿಷ್ಟು ಎಂದು ಹಣ ಪಡೆಯುತ್ತಿದ್ದರು. 9 ಮಂದಿಯನ್ನು ಬಂಧಿಸಿರುವ ಪೊಲೀಸರು ಅವರಿಂದ ನಾಲ್ಕು ಸರ್ಕಾರಿ ಸೀಲುಗಳು, ನಕಲಿ ಆಧಾರ್​, ಪಹಣಿ, ಸಲ್ವೆನ್ಸಿ ಸರ್ಟಿಫಿಕೇಟ್​​ಗಳನ್ನೂ ವಶಪಡಿಸಿಕೊಂಡಿದ್ದಾರೆ. ಹಲವು ಕಂಪನಿಗಳಿಗೆ ಸೇರಿದ 100ಕ್ಕೂ ಹೆಚ್ಚು ಪಹಣಿಗಳು ಈ ಆರೋಪಿಗಳ ಬಳಿ ಇದ್ದವು. ಇವರು ಚಿಕ್ಕಬಳ್ಳಾಪುರದ ಹರಿ ಗ್ರಾಫಿಕ್ಸ್​ ಅಂಗಡಿಯಲ್ಲಿ ನಕಲಿ ದಾಖಲೆಗಳ ತಯಾರು ಮಾಡುತ್ತಿದ್ದರು. ಈ ಬಗ್ಗೆ ಕೆ.ಆರ್.ಮಾರ್ಕೆಟ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನೋಟು ಅಮಾನ್ಯೀಕರಣ ಮತ್ತು ಕೋವಿಡ್-19 ಕೋಟ್ಯಾಂತರ ಉದ್ಯೋಗಗಳನ್ನು ನಶಿಸಿಹಾಕಿವೆ: ಸಿದ್ದರಾಮಯ್ಯ

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ