Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಪ್ರತ್ಯೇಕ ಪ್ರಕರಣ: ಸುಲಿಗೆಗೆ ಇಳಿದಿದ್ದ ಆಟೋ ಡ್ರೈವರ್ ಹಾಗೂ ಮಂಗಳಮುಖಿಯರ ಬಂಧನ, ಬ್ಯಾಟರಿ ಕಳ್ಳರು ಅರೇಸ್ಟ್​​

ಸುಲಿಗೆಗೆ ಇಳಿದಿದ್ದ ಆಟೋ ಡ್ರೈವರ್ ಹಾಗೂ ಮೂವರು ಮಂಗಳಮುಖಿಯರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದರೇ, ಸರ್ಕಾರಿ ಕಚೇರಿ ಹಾಗೂ ಮನೆಗಳಲ್ಲಿ ಬ್ಯಾಟರಿ ಕಳುವು ಮಾಡುತ್ತಿದ್ದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣ: ಸುಲಿಗೆಗೆ ಇಳಿದಿದ್ದ ಆಟೋ ಡ್ರೈವರ್ ಹಾಗೂ ಮಂಗಳಮುಖಿಯರ ಬಂಧನ, ಬ್ಯಾಟರಿ ಕಳ್ಳರು ಅರೇಸ್ಟ್​​
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ವಿವೇಕ ಬಿರಾದಾರ

Updated on:Jul 11, 2023 | 8:47 AM

ಬೆಂಗಳೂರು: ನಸಿಕನ ಜಾವ 5 ಗಂಟೆಗೆ ಸುಲಿಗೆಗೆ ಇಳಿದಿದ್ದ ಆಟೋ (Auto) ಡ್ರೈವರ್ ಹಾಗೂ ಮೂವರು ಮಂಗಳಮುಖಿಯರನ್ನು (Transgender) ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ನೇಹಾ, ಅವಿಷ್ಕಾ, ದೀಪಿಕಾ ಹಾಗೂ ಪ್ರಕಾಶ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ಇತ್ತೀಚೆಗೆ ಕೊಡಿಗೇಹಳ್ಳಿ ವ್ಯಾಪ್ತಿಯಲ್ಲಿ ಹಣ ಕೇಳುವ ನೆಪದಲ್ಲಿ ಸುಲಿಗೆ ಮಾಡುತ್ತಿದ್ದ ವೇಳೆ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಈ ತಂಡ ಬೇರೆ ಬೇರೆ ಠಾಣಾ ವ್ಯಾಪ್ತಿಯಲ್ಲಿ ಕೂಡ ಕೃತ್ಯ ಎಸಗಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಲು ಸಾಲು ಬ್ಯಾಟರಿ ಎಗರಿಸಿ ಕೊನೆಗೂ ತಗಲಾಕಿಕೊಂಡ ಕದೀಮರು

ಬೆಂಗಳೂರು: ಸರ್ಕಾರಿ ಕಚೇರಿ, ಅಪಾರ್ಟ್ಮೆಂಟ್, ದೊಡ್ಡ ದೊಡ್ಡ ಮನೆಗಳಲ್ಲಿನ ಯುಪಿಎಸ್​ ಇನ್ನಿತರೆ ಬ್ಯಾಟರಿಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಜೆಪಿ ನಗರ ಪೊಲೀಸರು ಬಂಧಸಿದ್ದಾರೆ. ಮಹಮದ್ ಹರ್ಷದ್, ಸೈಯದ್ ಯಾರಬ್, ಸಿದ್ಧಿಕಿ ಬಂಧಿತ ಆರೋಪಿಗಳು. ಕಳೆದ ಆರು ತಿಂಗಳಲ್ಲಿ 50ಕ್ಕೂ ಅಧಿಕ ಬ್ಯಾಟರಿಗಳನ್ನು ಕದ್ದಿದ್ದಾರೆ.

ಇದನ್ನೂ ಓದಿ: 15 ಮಹಿಳೆಯರನ್ನು ಮದುವೆಯಾದ ವ್ಯಕ್ತಿ ಅರೆಸ್ಟ್; ವಯಸ್ಸಾದ ಅವಿವಾಹಿತ ಮಹಿಳೆಯರೇ ಈತನ ಟಾರ್ಗೆಟ್

ಜಲಮಂಡಳಿ ಸೇವಾ ಠಾಣೆಯಲ್ಲಿ ಒಂದೇ ಕಡೆ ಐದು ಬ್ಯಾಟರಿ ಕದ್ದಿದ್ದಾರೆ. ಈ ಸಂಬಂಧ ದೂರು ನೀಡಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ವಿಚಾರಣೆ ವೇಳೆ ಸರಣಿ ಕಳ್ಳತನದ ಕಹಾನಿ ಬಾಯಿಬಿಟ್ಟಿದ್ದಾರೆ. ಸಣ್ಣಪುಟ್ಟ ಶೋಕಿ ಜೀವನಕ್ಕೆ ಕಳ್ಳತನ ಮಾಡುತ್ತಿದ್ದರು. ಆರೋಪಿಗಳಿಂದ 57 ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೆಪಿನಗರ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಹೊರ ರಾಜ್ಯದ ವಿದ್ಯಾರ್ಥಿಯ ಎರಡು ಲ್ಯಾಪ್‌ಟಾಪ್, ಮೊಬೈಲ್ ಕಳುವು

ನೆಲಮಂಗಲ: ಹೊರ ರಾಜ್ಯದ ವಿದ್ಯಾರ್ಥಿಯ ಎರಡು ಲ್ಯಾಪ್‌ಟಾಪ್, ಮೊಬೈಲ್​​ಗಳನ್ನು ಕಳುವು ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವಾರ ಎಜಿಬಿ ಲೇಔಟ್​​ನಲ್ಲಿ ನಡೆದಿದೆ. ಸಪ್ತಗಿರಿ ಮೆಡಿಕಲ್ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ನಿಖಿಲ್ ಅವರ ವಸ್ತುಗಳು ಕಳ್ಳತನವಾಗಿವೆ. ರಾತ್ರಿ ಪಾಳೆಯ ಮುಗಿಸಿ ಬೆಳಗಿನ ಜಾವ ಬಾಗಿಲು ಹಾಕದೆ ಮಲಗಿದ್ದಾಗ  ಘಟನೆ ನಡೆದಿದೆ. ಕಳ್ಳನ ಚಲನವಲನ ಸಿಸಿಕ್ಯಾಮಾರದಲ್ಲಿ ಸೆರೆಯಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:41 am, Tue, 11 July 23

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ