ಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ಕಾರವಾರ ತಾಲೂಕಿನ ಗೋಪಶಿಟ್ಟ ಬರ್ನಾವಾಡ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತಿದ್ದ ಆರೋಪಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ.

ಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು
ಬಂಧಿತ ಆರೋಪಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 07, 2022 | 10:52 PM

ಉತ್ತರ ಕನ್ನಡ: ಕಾರವಾರ ತಾಲೂಕಿನ ಗೋಪಶಿಟ್ಟ ಬರ್ನಾವಾಡ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತಿದ್ದ ಆರೋಪಿಯನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಸಂಜು, ವಿನಾಯಕ ಆಚಾರಿ (48) ಬಂಧಿತ ಆರೋಪಿಗಳು. ಬರ್ನಾವಾಡ ಗ್ರಾಮದಲ್ಲಿ ಆರೋಪಿ ತನ್ನ ಮನೆಯ ಹಿಂದೆ ಇರುವ ತಗಡಿನ ಶೆಡ್ನಲ್ಲಿ ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತಿದ್ದನು.

ಈ ಬಗ್ಗೆ ಮಾಹಿತಿ ತಿಳಿದ ಎಸ್.ಪಿ. ಸುಮನ್ ಪೆನ್ನೆಕರ್ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿತು. ಕಾರ್ಯಚರಣೆಯಲ್ಲಿ ನಾಡ ಬಂದೂಕು ಮತ್ತು ಅದನ್ನು ತಯಾರಿಸಲು ಬಳಸುವ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಮೀನಿನಲ್ಲಿ ದನ ಮೇಯಿಸಲು ಹೋಗಿದ್ದ ಯುವಕ ಅನುಮಾನಾಸ್ಪದ ಸಾವು; ಕೊಲೆ ಶಂಕೆ

ಯಾದಗಿರಿ: ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದಲ್ಲಿ ಎತ್ತು ಮೇಯಿಸಲು ಹೋಗಿದ್ದ ಯುವಕ ಕೊಲೆಯಾಗಿರವ ಶಂಕೆ ವ್ಯಕ್ತವಾಗಿದೆ. ರಾಮಸಮುದ್ರ ಗ್ರಾಮದ ಮಲ್ಲಿಕಾರ್ಜುನ (28) ಮೃತ ವ್ಯಕ್ತಿ. ನಿನ್ನೆ ಸಂಜೆ ಯುವಕ ಎತ್ತುಗಳನ್ನು ಬೇರೆಯವರ ಜಮೀನಿನಲ್ಲಿ ಮೇಯಿಸಿದ್ದಕ್ಕೆ ಕೊಲೆ‌ ಮಾಡಿ ಕೃಷಿ ಹೊಂಡದಲ್ಲಿ ಶವ ಬಿಸಾಡಿರುವ ಅನುಮಾನ ವ್ಯಕ್ತವಾಗಿದೆ. ಯವಕನಿಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಸಂಶಯ ಮೂಡಿದೆ.

ಯಾದಗಿರಿ ತಾಲೂಕಿನ ಆಶನಾಳ್ ಗ್ರಾಮದ ಮಲ್ಲಿಕಾರ್ಜುನ ಹಾಗೂ ಜ್ಯೋತಿರ್ಲಿಂಗ್ ಎಂಬುವರು ಕೊಲೆ ಮಾಡಿದ್ದಾರೆ ಎಂದು ಮೃತ ಮಲ್ಲಿಕಾರ್ಜುನ ಪೋಷಕರು ಶಂಕೆ ವ್ಯಕ್ತಪಡಿಸಿದ್ದಾರೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ಹಾವೇರಿ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಹಮ್ಮದಗೌಸ್ ಬೇವಿನಮರದ (20)ಮೃತ ಯುವಕ. ಯುವಕ ಮಹಮ್ಮದಗೌಸ್ ಬೇವಿನಮರದ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ವೇಳೆ ಕಟ್ಟಡದ ಮೇಲೆ ಹಾಯ್ದು ಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ‌ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Wed, 7 September 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್