ನಂದಿನಿ ಲೇಔಟ್​ನಲ್ಲಿ ಹಿಟ್ ಅಂಡ್ ರನ್‌ಗೆ ಪೇದೆಯೇ ಬಲಿ, ಆದ್ರೆ ಕಣ್ಣುಗಳು ಅಮರ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್‌ಗೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ. ತಡರಾತ್ರಿ 8.45ರ ಸುಮಾರಿಗೆ ಎಂಇಎಸ್​ನ ಪೈಪ್​ ಲೈನ್ ರಸ್ತೆಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಬೈಕ್​ಗೆ ಡಿಕ್ಕಿಯೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಭಕ್ತರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಭಕ್ತರಾಮ್, ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಘಟನಾ ಸ್ಥಳದಿಂದ ಚಾಲಕ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧಕಾರ್ಯ […]

ನಂದಿನಿ ಲೇಔಟ್​ನಲ್ಲಿ ಹಿಟ್ ಅಂಡ್ ರನ್‌ಗೆ ಪೇದೆಯೇ ಬಲಿ, ಆದ್ರೆ ಕಣ್ಣುಗಳು ಅಮರ!
ಸಾಧು ಶ್ರೀನಾಥ್​

Updated on: Feb 04, 2020 | 4:19 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್‌ಗೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ. ತಡರಾತ್ರಿ 8.45ರ ಸುಮಾರಿಗೆ ಎಂಇಎಸ್​ನ ಪೈಪ್​ ಲೈನ್ ರಸ್ತೆಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಬೈಕ್​ಗೆ ಡಿಕ್ಕಿಯೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಭಕ್ತರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಭಕ್ತರಾಮ್, ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಘಟನಾ ಸ್ಥಳದಿಂದ ಚಾಲಕ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಪೇದೆ ಕುಟುಂಬ:

ತಡರಾತ್ರಿ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆ ಭಕ್ತರಾಮ್  ಕಣ್ಣುಗಳನ್ನು ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮೃತ ಪೇದೆ ಭಕ್ತರಾಮ್ ಪತ್ನಿ ಸಹ ದೃಷ್ಟಿ ದೋಷದಿಂದ ಬಳಲುತ್ತಿದ್ದಾರೆ. ಹೀಗಾಗಿ ಭಕ್ತರಾಮ್  ಕಣ್ಣುಗಳನ್ನು ದಾನ ಮಾಡಲು ಮುಂದಾಗಿದ್ದು, ಮಗನ ಸಾವಿನಲ್ಲೂ ಪೇದೆ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ.

Published On - 11:32 am, Tue, 4 February 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us