ಸಿಗರೇಟ್ ಸೇದುವುದನ್ನ ಪ್ರಶ್ನಿಸಿದ ಪೇದೆಗೆ ಚಾಕು ಇರಿತ
ಬೆಂಗಳೂರು: ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಪೇದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಆರ್.ಟಿ.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಮುಂಡಿನಗರದಲ್ಲಿ ಪುಂಡರು ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದಿತ್ತು. ದೂರು ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸ್ ಪೇದೆ ನಾಗರಾಜ್ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು, ಪೇದೆಗೆ ಚಾಕುವಿನಿಂದ ಎರಡು ಬಾರಿ ಇರಿದು ಪರಾರಿಯಾಗಿದ್ದಾರೆ. ಸದ್ಯ ನಾಗರಾಜ್ಗೆ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಪೇದೆ […]
ಬೆಂಗಳೂರು: ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಪೇದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಆರ್.ಟಿ.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಾಮುಂಡಿನಗರದಲ್ಲಿ ಪುಂಡರು ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದಿತ್ತು. ದೂರು ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸ್ ಪೇದೆ ನಾಗರಾಜ್ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು, ಪೇದೆಗೆ ಚಾಕುವಿನಿಂದ ಎರಡು ಬಾರಿ ಇರಿದು ಪರಾರಿಯಾಗಿದ್ದಾರೆ.
ಸದ್ಯ ನಾಗರಾಜ್ಗೆ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಪೇದೆ ನಾಗರಾಜ್ ಸ್ಪಂದಿಸುತ್ತಿದ್ದಾರೆ.