AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?

ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿ ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?
ಹಲ್ಲೆಗೊಳಗಾದ ಪೇದೆ ಮಂಜುನಾಥ್
ಪೃಥ್ವಿಶಂಕರ
| Edited By: |

Updated on: Jan 06, 2021 | 12:28 PM

Share

ಬೆಂಗಳೂರು: ಕಳ್ಳನ ಹಿಡಿಯಲು ಹೊದ ಪೊಲೀಸ್ ಪೇದೆ ಮೇಲೆ, ಕಳ್ಳ ಹಾಗೂ ಆತನ ಕುಟುಂಬದಿಂದ ಚಾಕು, ದೊಣ್ಣೆಯಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿನ್ನೆ ರಾತ್ರಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಂಜುನಾಥ್ ಹಲ್ಲೆಗೊಳಗಾದ ಪೊಲೀಸ್ ಪೇದೆ‌ಯಾಗಿದ್ದಾರೆ. ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿಯನ್ನು ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು. ಈ ವೇಳೆ ನವೀನ್​ನನ್ನು ಕರೆದೊಯ್ಯಲು ಮುಂದಾದಾಗ ಪೇದೆ ಮಂಜುನಾಥ್ ಮೇಲೆ ಆರೋಪಿ ನವೀನ್ ತಾಯಿ ಹಾಗೂ ಸಹೋದರ ಮುರುಗೇಶ್​ ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿದ್ದಾರೆ.

ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.. ಈ ವೇಳೆ ತಪ್ಪಿಸಿಕೊಂಡ ಆರೋಪಿ ನವೀನ್​,​ ಪೇದೆ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ಆರೋಪಿ ನವೀನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೇದೆ ಮಂಜುನಾಥ್​​ಗೆ ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಚಾಕು ಇರಿದಿರುವುದರಿಂದ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಪೇದೆ ಜೊತೆ ಬಂದಿದ್ದ ವ್ಯಕ್ತಿಯಿಂದ ಪೇದೆ ಮಂಜುನಾಥ್​ನನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಘಟನೆ ಸಂಬಂಧ ಹಲ್ಲೆ ಮಾಡಿದ ನರಸಮ್ಮ ಹಾಗೂ ಮುರುಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧನವಾಗಬೇಕಾಗಿದ್ದ ಆರೋಪಿ ನವೀನ್ ಪರಾರಿಯಾಗಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತಲಾಶ್ ಶುರುವಾಗಿದೆ.

ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್