ಎನ್​ಕೌಂಟರ್: ರೌಡಿಶೀಟರ್ ಸ್ಲಂ ಭರತ್ ಫಿನಿಶ್!

ನೆಲಮಂಗಲ: ರೌಡಿಶೀಟರ್ ಸ್ಲಂ ಭರತ್ ಮೇಲೆ ಪೊಲೀಸರಿಂದ ಎನ್ ಕೌಂಟರ್​ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ಬಳಿಯ ಐವರಕಂಡಪುರದಲ್ಲಿ ಗುಂಡಿನ ದಾಳಿ ನಡೆದಿದ್ದು, ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸುತ್ತಿರುಗವಾಗ ಸ್ಥಳದಲ್ಲೇ ಸ್ಲಂ ಭರತ್ ಮೃತಪಟ್ಟಿದ್ದಾನೆ. ಇತ್ತೀಚೆಗೆ ರೌಡಿಶೀಟರ್ ಸ್ಲಂ ಭರತ್​ನನ್ನು ಪೊಲೀಸರು ಬಂಧಿಸಿದ್ದರು. ಆದ್ರೆ ಭರತ್ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ನಂತರ ಸ್ಲಂ ಭರತ್ ಉತ್ತರ ಪ್ರದೇಶದಲ್ಲಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆ ಆತನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದಾಗ ಪೊಲೀಸರ ಕಾರಿಗೆ ಸ್ಲಂ […]

ಎನ್​ಕೌಂಟರ್: ರೌಡಿಶೀಟರ್ ಸ್ಲಂ ಭರತ್ ಫಿನಿಶ್!
Follow us
ಸಾಧು ಶ್ರೀನಾಥ್​
|

Updated on:Feb 27, 2020 | 11:12 AM

ನೆಲಮಂಗಲ: ರೌಡಿಶೀಟರ್ ಸ್ಲಂ ಭರತ್ ಮೇಲೆ ಪೊಲೀಸರಿಂದ ಎನ್ ಕೌಂಟರ್​ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ಬಳಿಯ ಐವರಕಂಡಪುರದಲ್ಲಿ ಗುಂಡಿನ ದಾಳಿ ನಡೆದಿದ್ದು, ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸುತ್ತಿರುಗವಾಗ ಸ್ಥಳದಲ್ಲೇ ಸ್ಲಂ ಭರತ್ ಮೃತಪಟ್ಟಿದ್ದಾನೆ.

ಇತ್ತೀಚೆಗೆ ರೌಡಿಶೀಟರ್ ಸ್ಲಂ ಭರತ್​ನನ್ನು ಪೊಲೀಸರು ಬಂಧಿಸಿದ್ದರು. ಆದ್ರೆ ಭರತ್ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ನಂತರ ಸ್ಲಂ ಭರತ್ ಉತ್ತರ ಪ್ರದೇಶದಲ್ಲಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆ ಆತನನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದಾಗ ಪೊಲೀಸರ ಕಾರಿಗೆ ಸ್ಲಂ ಭರತ್ ಗ್ಯಾಂಗ್‌ ದಾಳಿ ನಡೆಸಿದ್ದಾರೆ. ನಂತರ ಪೊಲೀಸರ ಮೇಲೆ ಹಲ್ಲೆ ನಡೆಸಿ ಸ್ಲಂ ಭರತ್ ಪರಾರಿಯಾಗಿದ್ದಾನೆ. ಕೂಡಲೇ ಎಚ್ಚೆತ್ತ ಬೆಂಗಳೂರು ಪೊಲೀಸರು ಎಲ್ಲೆಡೆ ಅಲರ್ಟ್ ಮಾಡಿದ್ದಾರೆ.

ನಂತರ ಹಲ್ಲೆ ನಡೆಸಿ ಐವರಕಂಡಪುರ ಬಳಿ ಪರಾರಿಯಾಗ್ತಿದ್ದ ಭರತ್​ನನ್ನು ಆತ್ಮರಕ್ಷಣೆಗಾಗಿ ರಾಜಗೋಪಾಲನಗರ ಇನ್ಸ್ ಪೆಕ್ಟರ್ ದಿನೇಶ್ ಪಾಟೀಲ್ ಮತ್ತು ನಂದಿನಿ ಲೇಔಟ್ ಇನ್ಸ್ ಪೆಕ್ಟರ್ ಲೋಹಿತ್ ಎನ್ ಕೌಂಟರ್​ ಮಾಡಿದ್ದಾರೆ. ಕೊಲೆ, ಕೊಲೆಯತ್ನ, ದರೋಡೆ ಪ್ರಕರಣಗಳು ಸೇರಿದಂತೆ 50ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸ್ಲಂ ಭರತ್‌ ಭಾಗಿಯಾಗಿದ್ದಾನೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 8:25 am, Thu, 27 February 20

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್