ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಇಂದು ಬೆಳಂ ಬೆಳಗ್ಗೆ ಆರೋಪಿ ಹಿಡಿಯಲು ತೆರಳಿದ್ದ ಪೊಲೀಸರು ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಬೆಳಗಿನ ಜಾವ ಪೊಲೀಸರ ಗನ್ ಸದ್ದು ಮಾಡಿದೆ. ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ.ಹಳ್ಳಿಯ ಅರೆಬಿಕಾ ಕಾಲೇಜು ಬಳಿ ನಡೆದಿದೆ. ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಹಾಗೂ 1 ಕೊಲೆ, ಹಲವು ದರೋಡೆ ಪ್ರಕರಣದ ಆರೋಪಿ ಅನೀಸ್ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಇಬ್ಬರು ಪೊಲೀಸರ ಮೇಲೆ ಅನೀಸ್ […]

ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರಿಂದ ಫೈರಿಂಗ್
Follow us
ಆಯೇಷಾ ಬಾನು
|

Updated on:Aug 05, 2020 | 7:30 AM

ಬೆಂಗಳೂರು: ಇಂದು ಬೆಳಂ ಬೆಳಗ್ಗೆ ಆರೋಪಿ ಹಿಡಿಯಲು ತೆರಳಿದ್ದ ಪೊಲೀಸರು ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಬೆಳಗಿನ ಜಾವ ಪೊಲೀಸರ ಗನ್ ಸದ್ದು ಮಾಡಿದೆ. ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ.ಹಳ್ಳಿಯ ಅರೆಬಿಕಾ ಕಾಲೇಜು ಬಳಿ ನಡೆದಿದೆ.

ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಹಾಗೂ 1 ಕೊಲೆ, ಹಲವು ದರೋಡೆ ಪ್ರಕರಣದ ಆರೋಪಿ ಅನೀಸ್ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಇಬ್ಬರು ಪೊಲೀಸರ ಮೇಲೆ ಅನೀಸ್ ಹಲ್ಲೆ ನಡೆಸಿದ್ದ. ಹೀಗಾಗಿ ಆತ್ಮ ರಕ್ಷಣೆಗಾಗಿ ಇನ್ಸ್ಪೆಕ್ಟರ್ ಅಜಯ್ ಸಾರತಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ರು. ನಂತ್ರ ಅರೋಪಿ ಮತ್ತೆ ಅಟ್ಯಾಕ್ ಮಾಡಲು ಮುಂದಾಗಿದ್ದಾನೆ. ಆಗ ಇನ್ಸ್‌ಪೆಕ್ಟರ್‌ ಅನೀಸ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ.

Published On - 7:28 am, Wed, 5 August 20