ಬೆಂಗಳೂರು: ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಇಸ್ರೋ ಲೇಔಟ್ನ ದೇವರ ಕೆರೆ ಬಳಿ ನಡೆದಿದೆ. ಮೊನ್ನೆ ನಡೆದಿದ್ದ ಡಬಲ್ ಮರ್ಡರ್ ಕೇಸ್ ಸಂಬಂಧಿಸಿ ಆರೋಪಿ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಬಂಧನಕ್ಕೆ ಪೊಲೀಸರು ತೆರಳಿದ್ದರು.
ಈ ವೇಳೆ ಸುಬ್ರಮಣ್ಯಪುರ ಠಾಣೆ ಸಬ್ ಇನ್ಸ್ಪೆಕ್ಟರ್ ಮಧುಗೆ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಲು ಪ್ರಯತ್ನ ಮಾಡಿದ್ದಾನೆ. ಈ ವೇಳೆ ಕೋಣನಕುಂಟೆ ಇನ್ಸ್ಪೆಕ್ಟರ್ ಧರ್ಮೇಂದ್ರ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.
ಕೊಲೆಯ ಹಿನ್ನೆಲೆ:
ಸಂಧಾನಕ್ಕೆಂದು ಸೇರಿದ್ದ ಮುಕುಂದ ಹಾಗೂ ಸಂಜಯ್ ಟೀಮ್ ನಡುವೆ ಮನಸ್ತಾಪ ಉಂಟಾಗಿದೆ. ಈ ವೇಳೆ ಸಂಜಯ್ ಟೀಮ್ ಮುಕುಂದ ಹಾಗೂ ಮನೋಜ್ ನನ್ನ ಕೊಲೆ ಮಾಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಸಂಜಯ್ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧನಕ್ಕೆ ತೆರಳಿದ್ದ ವೇಳೆ ಗುಂಡು ಹಾರಿಸಿರುವ ಘಟನೆ ನಡೆದಿದೆ.