AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೊಲೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದ ಇನ್ಸ್​ಪೆಕ್ಟರ್

ಥಾಮಸ್ ಎಂಬ ವ್ಯಕ್ತಿಯನ್ನು ಕೊಲೆಗೈದ ಆರೋಪದಡಿ ಆರೋಪಿಗಳಾದ ದಿನೇಶ್ ಮತ್ತು ಸೋಹೆಲ್​ರನ್ನು ಬಂಧಿಸಲು ತೆರಳಿದ ವೇಳೆ ಪುಲಕೇಶಿ ನಗರ ಇನ್ಸ್​ಪೆಕ್ಟರ್ ಎಡ್ವಿನ್ ಪ್ರದೀಪ್ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಕೊಲೆ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದ ಇನ್ಸ್​ಪೆಕ್ಟರ್
ಸಾಂದರ್ಭಿಕ ಚಿತ್ರ
TV9 Web
| Updated By: guruganesh bhat|

Updated on: Jun 24, 2021 | 10:38 PM

Share

ಬೆಂಗಳೂರು: ಜೀವನಹಳ್ಳಿ ಫುಟ್ಬಾಲ್ ಗ್ರೌಂಡ್ ಬಳಿ ಕೊಲೆ ಆರೋಪಿಗಳಿಬ್ಬರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ನಡೆದಿದೆ. ಜೂ.22ರ ರಾತ್ರಿ ಥಾಮಸ್ ಎಂಬಾತನನ್ನು ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಪುಲಕೇಶಿ ನಗರ ಇನ್ಸ್​ಪೆಕ್ಟರ್ ಎಡ್ವಿನ್ ಪ್ರದೀಪ್, ಇಬ್ಬರು ಆರೋಪಿಗಳಾದ​ ದಿನೇಶ್ ಮತ್ತು ಸೋಹೆಲ್ ಎಂಬುವವರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಜೂನ್ 22ರ ರಾತ್ರಿ ಪುಲಿಕೇಶಿ ನಗರ ವ್ಯಾಪ್ತಿ ಐಟಿಸಿ ಕಾಲೋನಿಯಲ್ಲಿ ಥಾಮಸ್ ಎಂಬ ವ್ಯಕ್ತಿಯ ಕೊಲೆ ನಡೆದಿತ್ತು. ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಥಾಮಸ್​ನನ್ನು ದಿನೇಶ್ ಮತ್ತು ಸೋಹೆಲ್ ಎಂಬುವವರು ಹತ್ಯೆಗೈದಿದ್ದರು ಎಂದು ಹೇಳಲಾಗಿತ್ತು.  ಮದ್ಯಪಾನ ಮಾಡಿದ ವೇಳೆ ಜಗಳ ನಡೆದು ಕೊಲೆ ಮಾಡಲಾಗಿತ್ತು. ರಾಕೇಶ್ ಮತ್ತು ಥಾಮಸ್​ ಎಂಬುವವರ ಹತ್ಯೆಗೆ ಯೋಜನೆ ರೂಪಿಸಲಾಗಿತ್ತು. ಆದರೆ ರಾಕೇಶ್ ಎಂಬಾತ ತಪ್ಪಿಸಿಕೊಂಡಿದ್ದ. ಥಾಮಸ್ ಕೊಲೆಯಾಗಿದ್ದ ಎಂದು ಪೊಲೀಸರು ಪ್ರಕರಣದ ಹಿನ್ನೆಲೆಯನ್ನು ಬಿಚ್ಚಿಟ್ಟಿದ್ದಾರೆ.

ಥಾಮಸ್ ಎಂಬ ವ್ಯಕ್ತಿಯನ್ನು ಕೊಲೆಗೈದ ಆರೋಪದಡಿ ಆರೋಪಿಗಳಾದ ದಿನೇಶ್ ಮತ್ತು ಸೋಹೆಲ್​ರನ್ನು ಬಂಧಿಸಲು ತೆರಳಿದ ವೇಳೆ ಪುಲಕೇಶಿ ನಗರ ಇನ್ಸ್​ಪೆಕ್ಟರ್ ಎಡ್ವಿನ್ ಪ್ರದೀಪ್ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

Rekha Kadiresh: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್​ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಬಿಬಿಎಂಪಿ ಛಲವಾದಿಪಾಳ್ಯ ವಾರ್ಡ್​ನ ಮಾಜಿ ಸದಸ್ಯೆ ರೇಖಾ ಕದಿರೇಶ್​ರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಛಲವಾದಿಪಾಳ್ಯದ ಫ್ಲವರ್​ ಗಾರ್ಡನ್​ನ ಮನೆಯಲ್ಲಿದ್ದ ರೇಖಾ ಕದಿರೇಶ್​ರನ್ನು ಹೊರಗೆ ಕರೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿತ್ತು. ಗಾಯಾಳು ರೇಖಾರನ್ನ ಕಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ರೇಖಾ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ರೇಖಾ ಮೃತಪಟ್ಟ ಬಗ್ಗೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಡಾ.ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ, ಕಾಟನ್ಪೇಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಟನ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಮ್ಮ ತಮ್ಮನ ಹೆಂಡತಿಯನ್ನು ಸಾಯಿಸಿಬಿಟ್ರು ಅಂತ ಹೇಳಿದ್ರು. ನಾನು ಮನೆಯಿಂದ ಓಡಿ ಬಂದೆ. ನಾನು ನೋಡಿದ್ದಾಗ ಕೆಳಗಡೆ ಬಿದ್ದಿದ್ಳು. ಸ್ಟೀಫನ್, ರಾಬರ್ಟ್ ಎಲ್ಲಾರು ಜತೆಗೇ ಇದ್ದರು. ಅವರಿಂದ ಯಾವುದೇ ಗಲಾಟೆ ಇರಲಿಲ್ಲ ಎಂದು ಕದಿರೇಶ್ ಸಹೋದರಿ ಹೇಳಿಕೆ ನೀಡಿದ್ದಾರೆ. ಇನ್ನು ಕಿಮ್ಸ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿರುವ ಮೃತದೇಹ ಇಡಿಸಲಾಗಿದ್ದು ಕಿಮ್ಸ್ ಆಸ್ಪತ್ರೆಯತ್ತ ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಿಮ್ಸ್ ಆಸ್ಪತ್ರೆಯ ಬಳಿ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ. ಆಸ್ಪತ್ರೆ ಎದುರು ಬೆಂಬಲಿಗರ, ಸಂಬಂಧಿಕರ ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟವರ, ನೊಂದವರ ಗಣತಿ ನಡೆಸಲು ಕಾಂಗ್ರೆಸ್​ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆ

ಕೊವಿಡ್ ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭ; ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

(Police Inspector shot fired at leg of murder accused to arrest in Bengaluru)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್