ರಾಂಚಿ: ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್ ಅಧಿಕಾರಿಯ ಬಂಧನ
ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್ನ ರಾಂಚಿಯಲ್ಲಿ ನಡೆದಿದೆ. ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಒಂದು ವರ್ಷಕ್ಕೂ ಹೆಚ್ಚು ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಈ ವರ್ಷ ನವೆಂಬರ್ 14 ರಂದು ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದಾರೆ.

ನೀರಜ್ ಖೋಸ್ಲಾ ಎಂದು ಗುರುತಿಸಲಾದ ಎಎಸ್‌ಐ ಶುಕ್‌ದೇವ್ ನಗರ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ.
ಮತ್ತಷ್ಟು ಓದಿ: ಬೆಂಗಳೂರು: 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ನವೆಂಬರ್ 10ರಂದು ಬಾಲಕಿ ತೀವ್ರ ಹೊಟ್ಟೆ ನೋವೆಂದು ಹೇಳಿದಾಗ ತಾಯಿ ಮಗಳ ಬಳಿ ವಿಚಾರಿಸಿದ್ದಾಳೆ ಆಗ ನಡೆದ ವಿಚಾರವನ್ನು ಹೇಳಿಕೊಂಡಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ. ವಿಷಯ ಎಲ್ಲರಿಗೂ ತಿಳಿಯುತ್ತಿದ್ದಂತೆ ಆತ ಬಾಲಕಿ ಕುಟುಂಬಕ್ಕೆ ಕಿರುಕುಳ ನೀಡಲು ಶುರುಮಾಡಿದ್ದ. ಬೆದರಿಕೆ ಕರೆಗಳು ಬರುತ್ತಿದ್ದವು, ಪತಿ ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಥಳಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ