ರಾಂಚಿ: ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿದೆ. ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಒಂದು ವರ್ಷಕ್ಕೂ ಹೆಚ್ಚು ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಈ ವರ್ಷ ನವೆಂಬರ್ 14 ರಂದು ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದಾರೆ.

ರಾಂಚಿ: ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯ ಬಂಧನ
ಬಂಧನ

Updated on: Nov 24, 2023 | 3:36 PM

ಅಪ್ರಾಪ್ತ ಬಾಲಕಿ ಮೇಲೆ ವರ್ಷಗಳ ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿದೆ. ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಒಂದು ವರ್ಷಕ್ಕೂ ಹೆಚ್ಚು ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಈ ವರ್ಷ ನವೆಂಬರ್ 14 ರಂದು ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದಾರೆ.

ನೀರಜ್ ಖೋಸ್ಲಾ ಎಂದು ಗುರುತಿಸಲಾದ ಎಎಸ್‌ಐ ಶುಕ್‌ದೇವ್ ನಗರ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರು: 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ನವೆಂಬರ್ 10ರಂದು ಬಾಲಕಿ ತೀವ್ರ ಹೊಟ್ಟೆ ನೋವೆಂದು ಹೇಳಿದಾಗ ತಾಯಿ ಮಗಳ ಬಳಿ ವಿಚಾರಿಸಿದ್ದಾಳೆ ಆಗ ನಡೆದ ವಿಚಾರವನ್ನು ಹೇಳಿಕೊಂಡಿದ್ದಾರೆ. ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ದಿನಗಳ ನಂತರ ಆರೋಪಿಯನ್ನು ಬಂಧಿಸಿದ್ದಾರೆ. ವಿಷಯ ಎಲ್ಲರಿಗೂ ತಿಳಿಯುತ್ತಿದ್ದಂತೆ ಆತ ಬಾಲಕಿ ಕುಟುಂಬಕ್ಕೆ ಕಿರುಕುಳ ನೀಡಲು ಶುರುಮಾಡಿದ್ದ. ಬೆದರಿಕೆ ಕರೆಗಳು ಬರುತ್ತಿದ್ದವು, ಪತಿ ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಥಳಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us