AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್​ ಮೇಲೆ ಫೈರಿಂಗ್, ಬಂಧನ

ಚಡ್ಡಿ ಕಿರಣ್ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಮೊದಲಿಗೆ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದಾರೆ.

ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್​ ಮೇಲೆ ಫೈರಿಂಗ್, ಬಂಧನ
ಕಿರಣ ಅಲಿಯಾಸ್ ಚಡ್ಡಿ ಕಿರಣ್ ಮತ್ತು PSI ನವೀದ್
ಆಯೇಷಾ ಬಾನು
|

Updated on:Mar 07, 2021 | 9:54 AM

Share

ಬೆಂಗಳೂರು: ಬೆಳ್ಳಂ ಬೆಳಗ್ಗೆ ಪೊಲೀಸರ ಗನ್ ಸದ್ದು ಮಾಡಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಮೇಲೆ ಗುಂಡು ಹಾರಿಸಿ ಪೊಲೀಸರು ಸೆರೆ ಹಿಡಿದಿದ್ದಾರೆ. ಕಿರಣ ಅಲಿಯಾಸ್ ಚಡ್ಡಿ ಕಿರಣ್ ಬಂಧಿತ ರೌಡಿ ಶೀಟರ್. ಸದ್ಯ ಈಗ ಈತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಹಿಂದ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದ. ಈತ ಇರುವ ಸುಳಿವು ತಿಳಿಯುತ್ತಿದ್ದಂತೆ ಇಂದು ಬೆಳಗ್ಗಿನ ಜಾವ 4ಗಂಟೆ ಸುಮಾರಿಗೆ ಕಿರಣ್​ನನ್ನು ಅರೆಸ್ಟ್ ಮಾಡಲು ಪೊಲೀಸ್ ತಂಡ ಹೊರೆಟಿತ್ತು. ಈ ವೇಳೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಲಗ್ಗೆರೆ ಸೇತುವೆ ಬಳಿ ರೌಡಿ ಶೀಟರ್ ಕಿರಣ್ ಮತ್ತು ಪೊಲೀಸರ ನಡುವೆ ದಾಳಿ-ಪ್ರತಿದಾಳಿ ಆರಂಭವಾಗಿದೆ.

ಚಡ್ಡಿ ಕಿರಣ್ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಮೊದಲಿಗೆ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಸೂಚಿಸಿದ್ದಾರೆ. ಆದರೆ ರೌಡಿ ಶೀಟರ್ ಕಿರಣ್ ಮತ್ತೆ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಹೀಗಾಗಿ PSI ನವೀದ್ ಕಿರಣ್​ನ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. 2019ರಲ್ಲಿ ಚಡ್ಡಿ ಕಿರಣ್, ಪೊಲೀಸರ ಮೇಲೆ ಒಮ್ಮೆ ಮಚ್ಚು ಬೀಸಿದ್ದ. ಹೊಯ್ಸಳದಲ್ಲಿ ರೌಂಡ್ಸ್​ನಲ್ಲಿ ಇದ್ದ ಪೊಲೀಸರು ಚಡ್ಡಿ ಕಿರಣ್​ನನ್ನು ಲಾಕ್ ಮಾಡಿದ್ರು. ಈ ವೇಳೆ ಹೊಯ್ಸಳ ವಾಹನ ಅಡ್ಡಗಟ್ಟಿದ್ದ ಕಿರಣ್ ಗ್ಯಾಂಗ್ ಹೊಯ್ಸಳ ವಾಹನ ಜಖಂ ಮಾಡಿ ಪೊಲೀಸರ ಮೇಲೆ ಹಲ್ಲೆ ಮಾಡಿ ಕಿರಣ್​ನನ್ನು ಬಿಡಿಸಿಕೊಂಡು ಹೋಗಿದ್ದರು.

ನೆಲಮಂಗಲದಲ್ಲಿ ರೌಡಿಶೀಟರ್​ಗಳಿಗೆ ಎಸಿಪಿ ವಾರ್ನಿಂಗ್ ಇನ್ನು ಬಾಗಲಗುಂಟೆ ಠಾಣೆಯಲ್ಲಿ ರೌಡಿಗಳಿಗೆ ಬೆಂಗಳೂರು ಉತ್ತರ ವಿಭಾಗ ಎಸಿಪಿ ಶ್ರೀನಿವಾಸ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಏರಿಯಾಗಳಲ್ಲಿ ಹಲ್ಲೆ, ಗುಂಪುಗಾರಿಕೆ, ನಡೆಸುತ್ತಿದ್ದ ರೌಡಿಶೀಟರ್​ಗಳನ್ನು ಕರೆಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ್ರೆ ಗಡಿಪಾರು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಯೋಹನ್ ಅಲಿಯಾಸ್ ಪಾಪು, ವಿನಿ ಅಲಿಯಾಸ್ ಜಿಮ್‌ ವಿನಿ, ಬಾಬು ಅಲಿಯಾಸ್ ಟೂಲ್ಸ್‌ ಬಾಬು, ಯಶವಂತ, ಇಡ್ಲಿಸೋಮ, ರೂಪೇಶ್ ಅಲಿಯಾಸ್ ರೂಪಿ ಸೇರಿ 56 ರೌಡಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ರೌಡಿಶೀಟರ್ ಕಾರ್ತಿಕ್ ಅಲಿಯಾಸ್ ಗುಂಡನ ಮೇಲೆ ಪೊಲೀಸರಿಂದ ಫೈರಿಂಗ್.. 

Published On - 7:58 am, Sun, 7 March 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್