AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಖೋಟಾ ನೋಟು ಪ್ರಿಂಟ್​ ಅಡ್ಡೆ ಮೇಲೆ ದಾಳಿ: 3ರ ಬಂಧನ, 60 ಲಕ್ಷಕ್ಕೂ ಹೆಚ್ಚು ಬೆಲೆಯ ಖೋಟಾ ನೋಟು ಜಪ್ತಿ

ಖೋಟಾ ನೋಟು ಪ್ರಿಂಟ್​ ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, 60 ಲಕ್ಷಕ್ಕೂ ಹೆಚ್ಚು ಬೆಲೆಯ ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಖೋಟಾ ನೋಟು ಪ್ರಿಂಟ್​ ಅಡ್ಡೆ ಮೇಲೆ ದಾಳಿ: 3ರ ಬಂಧನ, 60 ಲಕ್ಷಕ್ಕೂ ಹೆಚ್ಚು ಬೆಲೆಯ ಖೋಟಾ ನೋಟು ಜಪ್ತಿ
ಖೋಟಾ ನೋಟು ಪ್ರಿಂಟ್​ ಮಾಡ್ತಿದ್ದ ಅಡ್ಡೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 19, 2023 | 6:16 PM

Share

ಚಿಕ್ಕಬಳ್ಳಾಫುರ: ಖೋಟಾ ನೋಟು ಪ್ರಿಂಟ್ (fake currency notes) ಮಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದು, 60 ಲಕ್ಷಕ್ಕೂ ಹೆಚ್ಚು ಬೆಲೆಯ ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದೆ. ಚಿಂತಾಮಣಿ ಎಎಸ್​​ಪಿ ಕುಶಾಲ್ ಚೌಕ್ಸಿ ನೇತೃತ್ವದಲ್ಲಿ ಕಾರ್ಯಾಚರಣೆ ಮೂಲಕ ಜಿಲ್ಲೆಯ ಚಿಂತಾಮಣಿ ಹೊರವಲಯದ ಕಟ್ಟಡದಲ್ಲಿ ಖೋಟಾ ನೋಟು ಪ್ರಿಂಟ್ ಮಾಡಲಾಗುತ್ತಿದೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳು ಬಂಧನವಾಗಿದ್ದು, ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಖಾಟೋ ನೋಟು ಪ್ರಿಂಟ್​​ಗೆ ಬಳಸಿದ್ದ ಯಂತ್ರೋಪಕರಣಗಳು ಜಪ್ತಿ ಮಾಡಲಾಗಿದೆ. ಅಸಲಿ ನೋಟನ್ನು ಸ್ಕ್ಯಾನ್​ ಮಾಡಿ ಅದೇ ಮಾದರಿಯಲ್ಲಿ ಕಲರ್ ಝರಾಕ್ಸ್ ಮಾಡಿದ್ದರು. ಕಲರ್ ಝರಾಕ್ಸ್​ನಲ್ಲಿ ಮುದ್ರಿಸಿದ್ದ ನೋಟುಗಳ ಚಲಾವಣೆ ಮಾಡಲಾಗುತಿತ್ತು. ಆಂದ್ರ ಕರ್ನಾಟಕ ಗಡಿಯಲ್ಲಿ ಅಮಾಯಕರು, ರೈತರು, ಅವಿದ್ಯಾವಂತರಿಗೆ ನೋಟು ಚಲಾವಣೆ ಮಾಡಲಾಗಿದೆ. ಖೋಟಾ ನೋಟು ಜಾಲದ ಹಿಂದೆ ಸದ್ಯ ಪೊಲೀಸರು ಬಿದ್ದಿದ್ದಾರೆ.

ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಶಂಕೆ

ಕೋಲಾರ: ಇಬ್ಬರೂ ಮಕ್ಕಳೊಂದಿಗೆ ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಮಾಲೂರು ಕೆರೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಮಾಲೂರು ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

ಇದನ್ನೂ ಓದಿ: ಆರು ವರ್ಷ ಪ್ರೀತಿಸಿ ಬ್ರೇಕಪ್ ಎಂದ ಯುವತಿ; ಮನನೊಂದ ಯುವಕ ಆತ್ಮಹತ್ಯೆ

ತವರು ಮನೆಯಿಂದ ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ

ಬೆಂಗಳೂರು ಗ್ರಾಮಾಂತರ: ತವರು ಮನೆಯಿಂದ ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡಿದ್ದು, ಈ ಬಗ್ಗೆ ಕೇಳಲು ಬಂದ ಮಾವ ಮತ್ತು ಭಾಮೈದನ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ‌ ಗ್ರಾಮದಲ್ಲಿ‌ ನಡೆದಿದೆ. ಮಾವನಿಗೆ ಚಾಕು ಇರಿದು, ಭಾಮೈದನಿಗೆ ದೊಣ್ಣೆಯಿಂದ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ತಂದೆ, ಮಗನಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೂರು ವರ್ಷಗಳ ಹಿಂದೆ ಆಂಧ್ರದ ಭವಾನಿ ಎಂಬುವರನ್ನು ಮೋಹನ್ ಮದುವೆಯಾಗಿದ್ದ. ಕಿರುಕುಳದಿಂದ ಮನನೊಂದು ಭವಾನಿ ತವರು ಮನೆ ಸೇರಿದ್ದರು. ಇದನ್ನು ಪ್ರಶ್ನೆ ಮಾಡಿದಕ್ಕೆ ಮೋಹನ್ ಹಲ್ಲೆ ಮಾಡಿದ್ದಾನೆ. ಸದ್ಯ ಮೋಹನ್​ನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ದಾಖಲಾಗಿದೆ.

ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಜೈನಾಪುರದಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಕೇಶ್ ಅಂಗಡಿ(23), ಸಾವಿತ್ರಿ ಅಂಬಲಿ(19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ರಾಕೇಶ್ ಹಾಗೂ ಸಾವಿತ್ರಿ ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ನಿನ್ನೆ(ಜ.17) ರಾತ್ರಿ ಮನೆಯಿಂದ ಹೊರ ಹೋಗಿದ್ದ ರಾಕೇಶ್ ಹಾಗೂ ಸಾವಿತ್ರಿ ಜೈನಾಪುರ ಬಳಿ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Santro Ravi: ಮೈಸೂರಿನ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದಾಖಲಾದ ಪ್ರಕರಣದ ತನಿಖಾ ವರದಿ ಸಿಐಡಿಗೆ ವರ್ಗಾವಣೆ

ನೇಣು ಬಿಗಿದುಗೊಂಡು ವ್ಯಕ್ತಿ ಆತ್ಮಹತ್ಯೆ

ಕೋಲಾರ: ವ್ಯಕ್ತಿಯೊಬ್ಬ ನೇಣು ಬಿಗಿದುಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡವಿಚಂಬಗೂರು ಗ್ರಾಮದಲ್ಲಿ ನಡೆದಿದೆ. ವೆಂಕಟಪ್ಪ (46) ಆತ್ಮಹತ್ಯೆ ಮಾಡಿಕೊಂಡವರು. ಅಡವಿಚಂಬಗೂರು ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:15 pm, Thu, 19 January 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?