Pakistan Crime: ಪಾಕಿಸ್ತಾನದಲ್ಲಿ ಹಿಂದೂ ವೈದ್ಯರನ್ನು ಗುಂಡಿಕ್ಕಿ ಹತ್ಯೆ, ತಿಂಗಳಲ್ಲಿ ಎರಡನೇ ಘಟನೆ

ಪಾಕಿಸ್ತಾನದಲ್ಲಿ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಪಾಕಿಸ್ತಾನದಲ್ಲಿ ಮತ್ತೊಮ್ಮೆ ಹಿಂದೂ ವೈದ್ಯರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗಿದೆ.

Pakistan Crime: ಪಾಕಿಸ್ತಾನದಲ್ಲಿ ಹಿಂದೂ ವೈದ್ಯರನ್ನು ಗುಂಡಿಕ್ಕಿ ಹತ್ಯೆ, ತಿಂಗಳಲ್ಲಿ ಎರಡನೇ ಘಟನೆ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Mar 31, 2023 | 7:53 AM

ಪಾಕಿಸ್ತಾನದಲ್ಲಿ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಪಾಕಿಸ್ತಾನದಲ್ಲಿ ಮತ್ತೊಮ್ಮೆ ಹಿಂದೂ ವೈದ್ಯರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗಿದೆ. ಕರಾಚಿ ಮುನ್ಸಿಪಲ್ ಕಾರ್ಪೊರೇಶನ್‌ನ ನಿವೃತ್ತ ನಿರ್ದೇಶಕ ಮತ್ತು ನೇತ್ರತಜ್ಞ ಡಾ.ಬೀರ್ಬಲ್ ಜೆನಾನಿ ಅವರನ್ನು ಲಿಯಾರಿ ಎಕ್ಸ್‌ಪ್ರೆಸ್‌ವೇ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ದಾಳಿಯಲ್ಲಿ ಆತನ ಸಹಾಯಕ ಕುರಾತ್-ಉಲ್-ಐನ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ಕರಾಚಿ ಮುನ್ಸಿಪಲ್ ಕಾರ್ಪೊರೇಶನ್‌ನ ಮಾಜಿ ನಿರ್ದೇಶಕ ಮತ್ತು ನೇತ್ರಶಾಸ್ತ್ರಜ್ಞರನ್ನು ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಒಂದು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಪಾಕಿಸ್ತಾನದಲ್ಲಿ ಹಿಂದೂ ವೈದ್ಯರೊಬ್ಬರನ್ನು  ಟಾರ್ಗೆಟ್ ಮಾಡಲಾಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿ ಕೂಡ ಬಯಲಿಗೆ ಬಂದಿದೆ.

ಮತ್ತಷ್ಟು ಓದಿ: Bengaluru: ಪಾರ್ಕ್​ನಲ್ಲಿ ಕುಳಿತಿದ್ದ ಯುವತಿಯನ್ನು ಎಳೆದೊಯ್ದು ಗ್ಯಾಂಗ್​ರೇಪ್​, ಆರೋಪಿಗಳನ್ನ ಬಂಧಿಸಿದ ಪೊಲೀಸರು

ಈ ಸಿಸಿಟಿವಿ ಫೂಟೇಜ್ ಆಧಾರದಲ್ಲಿ ಟಾರ್ಗೆಟ್ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ತಿಂಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂ ವೈದ್ಯರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ಈ ತಿಂಗಳ ಆರಂಭದಲ್ಲಿ, ಪಾಕಿಸ್ತಾನದ ಹೈದರಾಬಾದ್‌ನಲ್ಲಿ ವೈದ್ಯರಾಗಿದ್ದ ಧರಮ್ ದೇವ್ ರಾಠಿ ಅವರನ್ನು ಅವರ ಡ್ರೈವರ್‌ನಿಂದ ಅವರ ಮನೆಯೊಳಗೆ ಕೊಲೆ ಮಾಡಿಸಲಾಗಿತ್ತು. ಚಾಲಕ ಚಾಕುವಿನಿಂದ ವೈದ್ಯರ ಕತ್ತು ಸೀಳಿದ್ದ ಎಂದು ಪೊಲೀಸರು ಪಾಕಿಸ್ತಾನಿ ಸುದ್ದಿವಾಹಿನಿ ದಿ ನೇಷನ್‌ಗೆ ತಿಳಿಸಿದ್ದರು.

ಪೊಲೀಸರು ಖೈರ್‌ಪುರದ ಮನೆಯಿಂದ ಚಾಲಕನನ್ನು ಬಂಧಿಸಿದ್ದಾರೆ ಮತ್ತು ಅವನನ್ನು ಹನೀಫ್ ಲೆಘರಿ ಎಂದು ಗುರುತಿಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ವಾಹನದ ಮೇಲೆ ದಾಳಿ ನಡೆಸಿದಾಗ ಡಾ ಜೆನಾನಿ ಅವರೊಂದಿಗೆ ಕೆಲಸ ಮಾಡುತ್ತಿದ್ದ ಮಹಿಳಾ ವೈದ್ಯೆ ವಾಹನದಲ್ಲಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ